ಕ್ರಿಕೆಟ್

ಮೊದಲ ಏಕದಿನ ಪಂದ್ಯ: ಟಾಸ್ ಸೋತರೂ ಭಾರತ ಭರ್ಜರಿ ಬ್ಯಾಟಿಂಗ್, ಗಿಲ್-ರೋಹಿತ್ ಶರ್ಮಾ ಶತಕದ ಜೊತೆಯಾಟ

Srinivasamurthy VN

ಗುವಾಹತಿ: ಶ್ರೀಲಂಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡ ಭರ್ಜರಿ ಆರಂಭ ಪಡೆದಿದ್ದು, ನಾಯಕ ರೋಹಿತ್ ಶರ್ಮಾ ಮತ್ತು ಶುಭ್ ಮನ್ ಗಿಲ್ ಶತಕದ ಜೊತೆಯಾಟ ನೀಡಿದ್ದಾರೆ.

ಗುವಾಹತಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊದಲ ಏಕದಿನ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಶ್ರೀಲಂಕಾ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಗೆ ಇಳಿದೆ ಭಾರತ ಆರಂಭದಲ್ಲಿ ರಕ್ಷಣಾತ್ಮಕ ಆಟದ ಮೊರೆ ಹೋದರೂ ಬಳಿಕ ಚೇತರಿಸಿಕೊಂಡು ಉತ್ತಮ ಬ್ಯಾಟಿಂಗ್ ಮಾಡುತ್ತಿದೆ. ಆರಂಭಿಕರಾಗಿ ಕಣಕ್ಕಿಳಿದಿರುವ ರೋಹಿತ್ ಶರ್ಮಾ ಮತ್ತು ಶುಭ್ ಮನ್ ಗಿಲ್ ಶತಕದ ಜೊತೆಯಾಟವಾಡಿದ್ದು, ನಾಯಕ ರೋಹಿತ್ ಶರ್ಮಾ 55 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 7 ಬೌಂಡರಿಗಳ ಸಹಿತ 65 ರನ್ ಗಳಿಸಿ ಶತಕಕದತ್ತ ಮುನ್ನುಗ್ಗುತ್ತಿದ್ದಾರೆ. 

ರೋಹಿತ್ ಗೆ ಉತ್ತಮಸಾಥ್ ನೀಡುತ್ತಿರುವ ಶುಭ್ ಮನ್ ಗಿಲ್ ಕೂಡ 56 ಎಸೆತಗಳಲ್ಲಿ 10  ಬೌಂಡರಿಗಳ ಸಹಿತ 65ರನ್ ಸಿಡಿಸಿ ಶತಕದತ್ತ ಸಾಗಿದ್ದಾರೆ. ಇತ್ತೀಚಿನ ವರದಿಗಳು  ಬಂದಾಗ 19.1 ಓವರ್ ನಲ್ಲಿ ಭಾರತ ವಿಕೆಟ್ ನಷ್ಟವಿಲ್ಲದೇ 141 ರನ್ ಸಿಡಿಸಿತ್ತು.

ಇನ್ನು ಇಂದಿನ ಪಂದ್ಯದಲ್ಲಿ ಟಿ20 ಸರಣಿಯಿಂದ ದೂರಾಗಿದ್ದ ಟೀಂ ಇಂಡಿಯಾದ ಹಿರಿಯ ಆಟಗಾರರು ತಂಡಕ್ಕೆ ವಾಪಸಾಗಿದ್ದು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ತಂಡಕ್ಕೆ ವಾಪಸ್ ಆಗಿದ್ದಾರೆ.
 

SCROLL FOR NEXT