ದಾಖಲೆ ಬರೆದ ಭಾರತ 
ಕ್ರಿಕೆಟ್

ಮೊದಲ ಏಕದಿನ ಪಂದ್ಯ: 22ನೇ ಬಾರಿಗೆ ಲಂಕಾ ವಿರುದ್ಧ 300+ ರನ್, ದಾಖಲೆ ಬರೆದ ಭಾರತ

ಶ್ರೀಲಂಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 300ಕ್ಕೂ ಅಧಿಕ ರನ್ ಗಳಿಸುವ ಮೂಲಕ ಮತ್ತೊಂದು ದಾಖಲೆ ನಿರ್ಮಾಣ ಮಾಡಿದೆ.

ಗುವಾಹತಿ: ಶ್ರೀಲಂಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 300ಕ್ಕೂ ಅಧಿಕ ರನ್ ಗಳಿಸುವ ಮೂಲಕ ಮತ್ತೊಂದು ದಾಖಲೆ ನಿರ್ಮಾಣ ಮಾಡಿದೆ.

ಗುವಾಹತಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ ತಂಡ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 373 ರನ್ ಗಳಿಸಿದ್ದು, ಈ ಮೂಲಕ ಶ್ರೀಲಂಕಾ ವಿರುದ್ಧ ಅಪರೂಪದ ದಾಖಲೆ ನಿರ್ಮಾಣ ಮಾಡಿದೆ. ಏಕದಿನ ಕ್ರಿಕೆಟ್ ನಲ್ಲಿ ತಂಡವೊಂದರ ವಿರುದ್ಧ ಅತೀ ಹೆಚ್ಚು ಬಾರಿ 300ಕ್ಕೂ ಅಧಿಕ ರನ್ ಗಳಿಸಿದ ತಂಡಗಳ ಪಟ್ಟಿಯಲ್ಲಿ ಭಾರತ 2ನೇ ಸ್ಥಾನ ಗಳಿಸಿದೆ.

ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿದ್ದು, ಆಸಿಸ್ ಪಡೆ ಭಾರತ ತಂಡದ ವಿರುದ್ಧ 28 ಬಾರಿ 300+ ರನ್ ಗಳಿಸಿದ್ದು ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಇಂದಿನ ಪಂದ್ಯದ ಮೂಲಕ ಪಟ್ಟಿಯಲ್ಲಿ ಭಾರತ 2ನೇ ಸ್ಥಾನಕ್ಕೇರಿದ್ದು, ಲಂಕಾ ವಿರುದ್ಧ ಈ ವರೆಗೂ 22 ಬಾರಿ 300+ ಅಧಿಕ ರನ್ ಗಳಿಸಿದೆ. ಪಟ್ಟಿಯಲ್ಲಿ 3 ಮತ್ತು 4ನೇ ಸ್ಥಾನದಲ್ಲೂ ಭಾರತ ತಂಡವೇ ಇದ್ದು ಆಸ್ಟ್ರೇಲಿಯಾ ವಿರುದ್ಧ 21 ಬಾರಿ 300ಕ್ಕೂ ಅಧಿಕ ರನ್ ಗಳಿಸಿದೆ. ಇನ್ನು ಇಂಗ್ಲೆಂಡ್ ವಿರುದ್ಧ 18  ಬಾರಿ 300ಕ್ಕೂ ಅಧಿಕ ರನ್ ಗಳಿಸಿದೆ.

STAT: Most 300+ ODI totals vs an oppponent
28 Aus vs Ind
22 Ind vs SL *
21 Ind vs Aus
18 Ind vs Eng

 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...." ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾ ನೇರಾ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು, ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ SIT ಗೆ ಒತ್ತಾಯ!

ಮಂಗಳೂರು: KSRTC ಬಸ್ ಬ್ರೇಕ್ ಫೇಲ್; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು; Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆ- EY ವರದಿ

SCROLL FOR NEXT