ಟೀಂ ಇಂಡಿಯಾ ಆಟಗಾರರು 
ಕ್ರಿಕೆಟ್

ಕೆಎಲ್ ರಾಹುಲ್ ತಾಳ್ಮೆಯ ಆಟ: ಲಂಕಾ ವಿರುದ್ಧ ಭಾರತಕ್ಕೆ 4 ವಿಕೆಟ್ ಗಳ ಜಯ, ಸರಣಿ ಕೈವಶ

ಅತಿಥೇಯ ಶ್ರಿಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್ ಗಳಿಂದ ಜಯ ಗಳಿಸುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದೆ.

ಕೋಲ್ಕತ್ತಾ: ಅತಿಥೇಯ ಶ್ರಿಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್ ಗಳಿಂದ ಜಯ ಗಳಿಸುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದೆ. 

ಕೋಲ್ಕತ್ತಾದ ಈಡೆನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೀಲಂಕಾವನ್ನು ಸ್ಪೀನರ್ ಕುಲದೀಪ್ ಯಾದವ್ ಹಾಗೂ ವೇಗಿ ಮೊಹಮ್ಮದ್ ಸಿರಾಜ್ ಮಾರಕಬೌಲಿಂಗ್ ಮಾಡಿ ತಲಾ 3 ವಿಕೆಟ್ ಪಡೆಯುವ ಮೂಲಕ ಕೇವಲ 215 ರನ್ ಗಳಿಗೆ ಕಟ್ಟಿ ಹಾಕಲಾಯಿತು. 

ಲಂಕಾ ನೀಡಿದ 216 ರನ್ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿತ್ತು. ರೋಹಿತ್ ಶರ್ಮಾ 17, ಶುಭ್ಮನ್ ಗಿಲ್ 21, ವಿರಾಟ್ ಕೊಹ್ಲಿ 4 ಮತ್ತು ಶ್ರೇಯಸ್ ಅಯ್ಯರ್ 28 ರನ್ ಗಳಿಗೆ ಆಲೌಟ್ ಆಗಿದ್ದು 86 ರನ್ ಗಳಿಗೆ ಪ್ರಮುಖ ನಾಲ್ಕು ವಿಕೆಟ್ ಗಳು ಪತನಗೊಂಡಿತ್ತು. ಈ ವೇಳೆ ತಾಳ್ಮೆಯ ಆಟವಾಡಿದ ಕೆಎಲ್ ರಾಹುಲ್ ಅರ್ಧ ಶತಕ ಸಿಡಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. 

ಇನ್ನುಳಿದಂತೆ ಹಾರ್ದಿಕ್ ಪಾಂಡ್ಯ 36, ಅಕ್ಷರ್ ಪಟೇಲ್ 21 ಹಾಗೂ ಕುಲದೀಪ್ ಯಾದವ್ ಅಜೇಯ 10 ರನ್ ಬಾರಿಸಿದ್ದಾರೆ. ಲಂಕಾ ಪರ ಬೌಲಿಂಗ್ ನಲ್ಲಿ ಲಹಿರು ಕುಮಾರ, ಚಮಿಕಾ ಕರುಣಾರತ್ನೆ ತಲಾ 2 ವಿಕೆಟ್ ಪಡೆದಿದ್ದಾರೆ.

ಆತಿಥೇಯ ಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 2-0 ಅಂತರದಿಂದ ಗೆಲುವು ಸಾಧಿಸಿ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಇನ್ನು ಮೂರನೇ ಹಾಗೂ ಅಂತಿಮ ಪಂದ್ಯ ಜನವರಿ 15ರಂದು ತಿರುವನಂತಪುರಂದಲ್ಲಿ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?