ಹಾರ್ದಿಕ್ ಪಾಂಡ್ಯ 
ಕ್ರಿಕೆಟ್

ಇಂತಹವನು ನಾಯಕನಾಗಬೇಕಾ? ಸಹ ಆಟಗಾರರನ್ನು ನಿಂದಿಸಿದ ಹಾರ್ದಿಕ್ ಪಾಂಡ್ಯ ವಿರುದ್ಧ ನೆಟ್ಟಿಗರು ಗರಂ, ವಿಡಿಯೋ!

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಸಹ ಆಟಗಾರರಿಗೆ ಅಶ್ಲೀಲವಾಗಿ ಬೈದಿರುವುದು ಇದೀಗ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಸಹ ಆಟಗಾರರಿಗೆ ಅಶ್ಲೀಲವಾಗಿ ಬೈದಿರುವುದು ಇದೀಗ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. 

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತ 4 ವಿಕೆಟ್ ಗಳಿಂದ ಗೆದ್ದು ಸರಣಿ ಕೈವಶ ಮಾಡಿಕೊಂಡಿದೆ. ಏತನ್ಮಧ್ಯೆ ಟೀಂ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ ಅಶ್ಲೀಲವಾಗಿ ಬೈದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಅಲ್ಲದೇ ಹಾರ್ದಿಕ್ ಅವರ ಈ ಕೊಳಕು ಕೃತ್ಯವನ್ನು ಹಲವರು ಖಂಡಿಸುತ್ತಿದ್ದಾರೆ.

ಪಂದ್ಯದ ಮಧ್ಯೆ ಅವರು ಬದಲಿ ಫೀಲ್ಡರ್‌ಗಳನ್ನು ನಿಂದಿಸಿದರು. ಕೊನೆಯ ಓವರ್‌ನಲ್ಲಿ ನೀರು ಕೊಡಿ ಎಂದು ಕೇಳಿದ್ದೆ ಆದರೆ ನೀವು ನೀರು ತರದೆ ಅಲ್ಲೇನು ..... ಹೊಡೆಯುತ್ತಿದ್ದೀರಾ ಎಂದು ಯುಜುವೇಂದ್ರ ಚಹಾಲ್ ಹಾಗೂ ಅರ್ಷದೀಪ್ ಗೆ ಬೈದಿದ್ದರು. ಇದು ಮೈದಾನದ ಸ್ಟಂಪ್ ಮೈಕ್ ನಲ್ಲಿ ಸೆರೆಯಾಗಿದ್ದು ಹಾರ್ದಿಕ್ ಪಾಂಡ್ಯ ಅವರ ಈ ಕ್ರಮಕ್ಕೆ ಅಭಿಮಾನಿಗಳು ತುಂಬಾ ಆಕ್ರೋಶಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT