ಕ್ರಿಕೆಟ್

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ: ಇಶಾನ್ ಕಿಶಾನ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಸಾಧ್ಯತೆ

Nagaraja AB

ಹೈದರಾಬಾದ್: ನಾಳೆಯಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇಶಾನ್ ಕಿಶಾನ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯತೆಯಿದೆ. ಏಕದಿನ ಪಂದ್ಯಗಳಲ್ಲಿ ದ್ವಿಶತಕದ ಸಾಧನೆ ಹೊಂದಿದ್ದರೂ ಇಶಾನ್ ಕಿಶಾನ್ ಅವರನ್ನು ಶ್ರೀಲಂಕಾ ವಿರುದ್ಧದ ಸರಣಿಯಿಂದ ಹೊರಗಿಡಲಾಗಿತ್ತು.

ಕಿವೀಸ್ ವಿರುದ್ಧದ ಪಂದ್ಯದಲ್ಲಿ ಶುಭ್ ಮನ್ ಗಿಲ್, ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕರಾಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಗಿಲ್ ಈ ಹಿಂದೆ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಕ್ರಮವಾಗಿ 70,21 ಮತ್ತು 116 ರನ್ ಗಳಿಸಿದರು. ಕೆಎಲ್ ರಾಹುಲ್ ವೈಯಕ್ತಿಕ ಕಾರಣದಿಂದ ಪಂದ್ಯದಲ್ಲಿ ಆಡುತ್ತಿಲ್ಲ. ಹೀಗಾಗಿ ಕಿಶಾನ್ ವಿಕೆಟ್ ಕೀಪರ್ ಆಗುವ ಸಾಧ್ಯತೆಯೂ ಇದೆ. ಇಶಾನ್ 10 ಏಕದಿನ ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದು, ಹೊಂದಾಣಿಕೆಯ ಪ್ರಶ್ನೆ ಎದುರಾಗದು ಎನ್ನಲಾಗಿದೆ.

ಕೆಎಸ್ ಭರತ್ ಎರಡನೇ ವಿಕೆಟ್ ಕೀಪರ್ ಆಗುವ ನಿರೀಕ್ಷೆಯಿದೆ. ಗಿಲ್, ಕೊಹ್ಲಿ, ರೋಹಿತ್ ಹಿಂದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿದ್ದರೆ, ಶ್ರೇಯಸ್ ಅಯ್ಯರ್ ಮೂರು ಪಂದ್ಯಗಳಲ್ಲೂ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದಾರೆ. ಒಂದು ವೇಳೆ ಶ್ರೇಯಸ್ ಅಯ್ಯರ್ ಅವಕಾಶ ಪಡೆಯುವಲ್ಲಿ ವಿಫಲರಾದರೆ ಸೂರ್ಯಕುಮಾರ್ ಯಾದವ್ ಗೆ ಅವಕಾಶ ಸಿಕ್ಕುವ ಸಾಧ್ಯತೆಯಿದೆ.

ಟೀಂ ಇಂಡಿಯಾ ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ) ಶುಭ್ ಮನ್ ಗಿಲ್, ಇಶಾನ್ ಕಿಶಾನ್ (ವಿಕೆಟ್ ಕೀಪರ್) ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್, ಹಾರ್ದಿಕ್ ಪಾಂಡ್ಯ, ವಾಷ್ಟಿಂಗ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯಜುರ್ವೇಂದ್ರ ಚಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲ್ಲಿಕ್.

ನ್ಯೂಜಿಲೆಂಡ್ ತಂಡ ಇಂತಿದೆ:  ಟಾಮ್ ಲ್ಯಾಥಮ್ (ನಾಯಕ)  ಫಿನ್ ಅಲೆನ್, ಡೌಗ್ ಬ್ರೇಸ್‌ವೆಲ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಡ್ಯಾರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶೆಪ್ಲಿ .

SCROLL FOR NEXT