ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ 
ಕ್ರಿಕೆಟ್

ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಗೆ 44 ಲಕ್ಷ ರೂ. ವಂಚನೆ!

ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಜಮೀನು ಖರೀದಿಸುವ ನೆಪದಲ್ಲಿ ತನ್ನ ಸ್ನೇಹಿತನಿಂದಲೇ ವಂಚನೆಗೊಳಗಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮುಂಬೈ: ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಜಮೀನು ಖರೀದಿಸುವ ನೆಪದಲ್ಲಿ ತನ್ನ ಸ್ನೇಹಿತನಿಂದಲೇ ವಂಚನೆಗೊಳಗಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ತನ್ನ ಮ್ಯಾನೇಜರ್ ಕೂಡಾ ಆಗಿದ್ದ ಸ್ನೇಹಿತನಿಂದ 44 ಲಕ್ಷ ರೂಪಾಯಿಯನ್ನು ಉಮೇಶ್ ಯಾದವ್ ಕಳೆದುಕೊಂಡಿದ್ದಾರೆ.

ಈ ಸಂಬಂಧ ಶೈಲೇಸ್ ಠಾಕ್ರೆ ವಿರುದ್ಧ ಉಮೇಶ್ ಯಾದವ್ ನೀಡಿದ ದೂರಿನ ವಂಚನೆ ದೂರಿನ ಆಧಾರದ ಮೇಲೆ  ಕೇಸ್ ದಾಖಲಿಸಿರುವುದಾಗಿ ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಆದರೆ, ಇನ್ನೂ ಯಾವುದೇ ಬಂಧನವಾಗಿಲ್ಲ. ಜುಲೈ 15, 2014 ರಂದು ಉಮೇಶ್ ಯಾದವ್ ಟೀಂ ಇಂಡಿಯಾ ಸದಸ್ಯರಾಗಿ ಆಯ್ಕೆಯಾದ ನಂತರ ನಿರುದ್ಯೋಗಿಯಾಗಿದ್ದ ತನ್ನ ಸ್ನೇಹಿತ ಠಾಕ್ರೆಯನ್ನು ಮ್ಯಾನೇಜರ್ ಆಗಿ ನೇಮಿಸಿಕೊಂಡಿದ್ದಾಗಿ ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

ಕಾಲಕ್ರಮೇಣ ಯಾದವ್ ವಿಶ್ವಾಸ ಗಳಿಸಿದ್ದು, ಉಮೇಶ್ ಯಾದವ್ ಅವರ ಎಲ್ಲಾ ಹಣಕಾಸಿನ ವ್ಯವಹಾರಗಳನ್ನು ನಿಭಾಯಿಸಲು ಪ್ರಾರಂಭಿಸಿದ್ದು, ಬ್ಯಾಂಕ್ ಖಾತೆ, ಆದಾಯ ತೆರಿಗೆ ಮತ್ತು ಇತರ ಹಣಕಾಸು ಕಾರ್ಯಗಳನ್ನು ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಉಮೇಶ್ ಯಾದವ್ ಅವರ ಎಲ್ಲ ವ್ಯವಹಾರ ನೋಡಿಕೊಳ್ಳುತ್ತಿದ್ದ ಶೈಲೇಶ್ ಠಾಕ್ರೆ ನಾಗ್ಪುರದಲ್ಲಿ ಒಂದು ಖಾಲಿ ಜಮೀನು ಮಾರಾಟಕ್ಕಿದ್ದು, 44 ಲಕ್ಷ ರೂ.ಗೆ ಸಿಗುತ್ತದೆ ಎಂದು ಉಮೇಶ್ ಯಾದವ್ ಅವರಿಗೆ ತಿಳಿಸಿದ್ದು, ಅವರ ಖಾತೆಗೆ ಹಣ ವರ್ಗಾಯಿಸಿಕೊಂಡಿದ್ದಾರೆ.

ನಂತರ ಶೈಲೇಶ್ ಠಾಕ್ರೆ ನಿವೇಶನವನ್ನು ತನ್ನ ಹೆಸರಿಗೆ ಮಾಡಿಕೊಂಡಿದ್ದಾರೆ. ಬಳಿಕ ನಿವೇಶನ ಹಿಂತಿರುಗಿಸಲು ನಿರಾಕರಿಸಿದ್ದಾರೆ. ಹೀಗಾಗಿ ಉಮೇಶ್ ಯಾದವ್ ಠಾಕ್ರೆ ವಿರುದ್ಧ ದೂರು ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT