ಟೀಂ ಇಂಡಿಯಾ 
ಕ್ರಿಕೆಟ್

2ನೇ ಏಕದಿನ: ಟೀಂ ಇಂಡಿಯಾ ವಿರುದ್ಧ ನ್ಯೂಜಿಲ್ಯಾಂಡ್ ಗೆ ಹೀನಾಯ ಸೋಲು, ಸರಣಿ ಭಾರತ ಕೈವಶ!

ಅತಿಥೇಯ ನ್ಯೂಜಿಲ್ಯಾಂಡ್ ತಂಡದ ವಿರುದ್ಧ ಭಾರತ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದ್ದು ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ.

ರಾಯ್ ಪುರ: ಅತಿಥೇಯ ನ್ಯೂಜಿಲ್ಯಾಂಡ್ ತಂಡದ ವಿರುದ್ಧ ಭಾರತ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದ್ದು ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ. 

ರಾಯ್ ಪುರದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲ್ಯಾಂಡ್ ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ್ದು 108 ರನ್‌ಗಳಿಗೆ ಆಲೌಟ್ ಆಗಿತ್ತು. ನ್ಯೂಜಿಲ್ಯಾಂಡ್ ನೀಡಿದ ಅಲ್ಪಮೊತ್ತದ ಗುರಿ ಬೆನ್ನಟ್ಟಿದ ಭಾರತ 2 ವಿಕೆಟ್ ನಷ್ಟಕ್ಕೆ 111 ರನ್ ಬಾರಿಸುವ ಮೂಲಕ ಗೆಲುವಿನ ನಗೆ ಬೀರಿತು. 

ಭಾರತ ಪರ ನಾಯಕ ರೋಹಿತ್ ಶರ್ಮಾ 51 ರನ್ ಬಾರಿಸಿ ಔಟಾದರೆ ವಿರಾಟ್ ಕೊಹ್ಲಿ 11 ರನ್ ಗಳಿಗೆ ಪೆವಿಲಿಯನ್ ಸೇರಿದರು. ಇನ್ನು ಮೊದಲ ಪಂದ್ಯದಲ್ಲಿ ಸ್ಫೋಟಕ ದ್ವಿಶತಕ ಸಿಡಿಸಿದ್ದ ಶುಭ್ಮನ್ ಗಿಲ್ ಈ ಪಂದ್ಯದಲ್ಲಿ ಅಜೇಯ 40 ರನ್ ಪೇರಿಸಿದ್ದಾರೆ.

ಮೊಹಮ್ಮದ್ ಶಮಿ ಭಾರತದ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿದ್ದು. 6 ಓವರ್ ಗಳಲ್ಲಿ 18 ರನ್ ನೀಡಿ ಮೂರು ವಿಕೆಟ್ ಪಡೆದರು. ನ್ಯೂಜಿಲೆಂಡ್‌ಗೆ ಶಮಿ ಮೊದಲ ಹೊಡೆತ ನೀಡಿದರು. ಈ ಹಿನ್ನಡೆ ಬಳಿಕ ಕಿವೀಸ್ ತಂಡಕ್ಕೆ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹಾರ್ದಿಕ್ ಪಾಂಡ್ಯ ಮತ್ತು ವಾಷಿಂಗ್ಟನ್ ಸುಂದರ್ ತಲಾ ಎರಡು ವಿಕೆಟ್ ಪಡೆದರು. ಅದೇ ಸಮಯದಲ್ಲಿ ಎಲ್ಲಾ ಮೂರು ಬೌಲರ್‌ಗಳಾದ ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್ ಮತ್ತು ಶಾರ್ದೂಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಮತ್ತೊಂದೆಡೆ, ನ್ಯೂಜಿಲೆಂಡ್‌ನ ಬ್ಯಾಟಿಂಗ್ ಪಡೆ ಸ್ಥಿತಿ ತುಂಬಾ ಕೆಟ್ಟದಾಗಿತ್ತು. ಟಾಪ್-5 ಬ್ಯಾಟ್ಸ್‌ಮನ್‌ಗಳಲ್ಲಿ ಯಾರೂ ಎರಡಂಕಿ ಮುಟ್ಟಲು ಸಾಧ್ಯವಾಗಲಿಲ್ಲ. ನ್ಯೂಜಿಲೆಂಡ್ ಪರ ಗ್ಲೆನ್ ಫಿಲಿಪ್ಸ್ 36 ಅತಿ ಹೆಚ್ಚು ರನ್ ಗಳಿಸಿದ್ದಾರೆ.

ಭಾರತ ತಂಡ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ರಾಯ್‌ಪುರದಲ್ಲಿ ನಡೆದಿತ್ತು. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಇಂದಿನ ಪಂದ್ಯವನ್ನು ಗೆದ್ದು ಭಾರತ 2-0 ಅಂತರದಲ್ಲಿ ಸರಣಿ ವಶಮಾಡಿಕೊಂಡಿದೆ.

ಈ ಸರಣಿಯ ಮೊದಲ ಏಕದಿನ ಪಂದ್ಯ ಹೈದರಾಬಾದ್‌ನಲ್ಲಿ ನಡೆದಿದ್ದು, ಇದರಲ್ಲಿ ಟೀಂ ಇಂಡಿಯಾ 12 ರನ್‌ಗಳ ರೋಚಕ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಆರಂಭಿಕ ಆಟಗಾರ ಶುಭಮನ್ ಗಿಲ್ 208 ರನ್‌ಗಳ ದ್ವಿಶತಕ ಇನಿಂಗ್ಸ್‌ ಆಡಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: Falahari Maharaj ಯೂ-ಟರ್ನ್, ಕ್ಷಮೆಯಾಚನೆ! video