ಕ್ರಿಕೆಟ್

3ನೇ ಏಕದಿನ ಪಂದ್ಯ: ಟಾಸ್ ಗೆದ್ದ ಕಿವೀಸ್ ಬೌಲಿಂಗ್ ಆಯ್ಕೆ, ಟೀಂ ಇಂಡಿಯಾದಲ್ಲಿ 2 ಬದಲಾವಣೆ

Srinivasamurthy VN

ಇಂದೋರ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ 3ನೇ ಹಾಗೂ ಅಂತಿಮ ಏಕದಿನ ಪಂದ್ಯ ಆರಂಭವಾಗಿದ್ದು ಟಾಸ್ ಗೆದ್ದ ಕೀವಿಸ್ ಪಡೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಇಂದೋರ್ ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು ಸರಣಿಯಲ್ಲಿ ಈಗಾಗಲೇ 3 ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಲ್ಲಿ ಸೋತಿರುವ ನ್ಯೂಜಿಲೆಂಡ್ ಕೊನೆಯ ಪಂದ್ಯವನ್ನು ಗೆದ್ದು ವೈಟ್ ವಾಶ್ ತಪ್ಪಿಸಿಕೊಂಡು ಮಾನ ಉಳಿಸಿಕೊಳ್ಳಲು ಹೋರಾಡುತ್ತಿದೆ. ಇತ್ತ ಈಗಾಗಲೇ ಸರಣಿ ವಶ ಮಾಡಿಕೊಂಡಿರುವ ಟೀಂ ಇಂಡಿಯಾ ಅಂತಿಮ ಪಂದ್ಯವನ್ನೂ ಗೆದ್ದು 3-0 ಅಂತರದಲ್ಲಿ ಟ್ರೋಫಿ ಎತ್ತಿ ಹಿಡಿಯುವ ವಿಶ್ವಾಸದಲ್ಲಿದೆ.

ಭಾರತ ತಂಡದಲ್ಲಿ 2 ಬದಲಾವಣೆ ಮಾಡಲಾಗಿದ್ದು, ಮಹಮದ್ ಶಮಿ ಮತ್ತು ಸಿರಾಜ್ ಗೆ ಮೂರನೇ ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ. ಅವರ ಬದಲಿಗೆ ಉಮ್ರಾನ್ ಮಲ್ಲಿಕ್ ಮತ್ತು ಯುಜ್ವೇಂದ್ರ ಚಹಲ್ ಗೆ ಸ್ಥಾನ ನೀಡಲಾಗಿದೆ. ನ್ಯೂಜಿಲೆಂಡ್ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದ್ದು ಹೆನ್ರಿ ಶಿಪ್ಲೆ ಬದಲಿಗೆ ಜೇಕಬ್ ಡುಫ್ಫೆಗೆ ಅವಕಾಶ ನೀಡಲಾಗಿದೆ.

ತಂಡಗಳು ಇಂತಿವೆ
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್-ನಾಯಕ), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಜಾಕೋಬ್ ಡಫ್ಫಿ, ಬ್ಲೇರ್ ಟಿಕ್ನರ್
 

SCROLL FOR NEXT