ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಸೂರ್ಯ ಕುಮಾರ್ ಯಾದವ್ ಗೆ 'ಐಸಿಸಿ ವರ್ಷದ ಟಿ-20 ಕ್ರಿಕೆಟಿಗ' ಪ್ರಶಸ್ತಿ

ಟೀಂ ಇಂಡಿಯಾದ ಇತ್ತೀಚಿನ ಸೆನ್ಸೆಷನ್ ಬ್ಯಾಟ್ಸ್ ಮನ್ ಸೂರ್ಯ ಕುಮಾರ್ ಯಾದವ್ ಐಸಿಸಿ ಪುರುಷರ ಟಿ-20 ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಡಿಮೆ ಅವಧಿಯಲ್ಲಿ ಟಿ-20 ಮಾದರಿಯಲ್ಲಿ ಹೆಚ್ಚಿನ ರನ್ ಗಳಿಸಿದ ನಂತರ 32 ವರ್ಷದ ಸೂರ್ಯಕುಮಾರ್ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸೂರ್ಯ ಕುಮಾರ್ ಯಾದವ್
Nagaraja AB
Updated On : 26 Jan 2023, 10:01 pm

ನವದೆಹಲಿ: ಟೀಂ ಇಂಡಿಯಾದ ಇತ್ತೀಚಿನ ಸೆನ್ಸೆಷನ್ ಬ್ಯಾಟ್ಸ್ ಮನ್ ಸೂರ್ಯ ಕುಮಾರ್ ಯಾದವ್ ಐಸಿಸಿ ಪುರುಷರ ಟಿ-20 ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಡಿಮೆ ಅವಧಿಯಲ್ಲಿ ಟಿ-20 ಮಾದರಿಯಲ್ಲಿ ಹೆಚ್ಚಿನ ರನ್ ಗಳಿಸಿದ ನಂತರ 32 ವರ್ಷದ ಸೂರ್ಯಕುಮಾರ್ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 

ಸೂರ್ಯ ಕುಮಾರ್ ಯಾದವ್ ಈ ರೇಸ್ ನಲ್ಲಿ ಟಿ-20 ವಿಶ್ವಕಪ್ ವಿಜೇತ ಇಂಗ್ಲೆಂಡ್ ತಂಡದ ಸ್ಯಾಮ್ ಕರನ್, ಪಾಕಿಸ್ತಾನದ ವಿಕೆಟ್ ಕೀಪರ್ ಮೊಹಮ್ಮದ್ ರಿಜ್ವಾನ್ ಮತ್ತು ಜಿಂಬಾಬ್ವೆಯ ಆಲ್ ರೌಂಡರ್ ಸಿಕಂದರ್ ರಾಜಾ ಅವರನ್ನು ಹಿಂದಿಕ್ಕಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

ಇದನ್ನೂ ಓದಿ: ಭಾರತದ ರೇಣುಕಾ ಸಿಂಗ್ ಗೆ 'ಐಸಿಸಿ ವರ್ಷದ ಉದಯೋನ್ಮುಖ ಆಟಗಾರ್ತಿ' ಪ್ರಶಸ್ತಿ

Advertisement

Advertisement

ಆದರೆ, ಭಾರತ ಮಹಿಳಾ ತಂಡದ ಉಪನಾಯಕಿ ಹಾಗೂ ಕಳೆದ ವರ್ಷದ ‘ವರ್ಷದ  ಆಟಗಾರ್ತಿ ಪ್ರಶಸ್ತಿ ಪಡೆದಿದ್ದ’ ಸ್ಮೃತಿ ಮಂಧಾನ ಮಹಿಳಾ ವಿಭಾಗದಲ್ಲಿ ಆಸ್ಟ್ರೇಲಿಯದ ತಹ್ಲಿಯಾ ಮೆಕ್‌ಗ್ರಾತ್ ಎದುರು ಸೋತರು.

2022ರಲ್ಲಿ ಸೂರ್ಯಕುಮಾರ್ ಯಾದವ್ ಟಿ-20 ಕ್ರಿಕೆಟ್ ನಲ್ಲಿ ಸಾವಿರಕ್ಕಿಂತಲೂ ಹೆಚ್ಚು ರನ್ ಗಳಿಸಿದ ಎರಡನೇ  ಬ್ಯಾಟ್ಸ್ ಮನ್ ಆಗಿದ್ದಾರೆ. ಅವರು 187. 43ರ ಸ್ಟ್ರೈಕ್ ರೇಟ್ ನಲ್ಲಿ 1,164 ರನ್ ಗಳಿಸುವ ಮೂಲಕ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಜೊತೆಗೆ ಟಿ-20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments