ಕ್ರಿಕೆಟ್

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ

Nagaraja AB

ನವದೆಹಲಿ: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್‌ಗೆ ಪಾದದ ನೋವು ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಪಂದ್ಯಕ್ಕೆ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ಗುರುವಾರ ತಿಳಿಸಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ನಲ್ಲಿ ಮೊಹಮ್ಮದ್ ಶಮಿಯಂತಹ ಹಿರಿಯರ ಅನುಪಸ್ಥಿತಿಯಲ್ಲಿ ವೇಗದ ದಾಳಿ ನಡೆಸಿದ ಸಿರಾಜ್, ಭಾರತ 1-0 ಸರಣಿ ಜಯದ ನಂತರ ಇದೀಗ ಏಕದಿನ ಸರಣಿಯಿಂದ ಹೊರಗೆ ಉಳಿಯಲಿದ್ದಾರೆ.  

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಗೂ ಮುಂಚಿತವಾಗಿ ಅವರನ್ನು ತಂಡದಿಂದ ಹೊರಬಿಡಲಾಗಿದೆ ಎಂದು ಬಿಸಿಸಿಐ ಮಾಧ್ಯಮ ಪ್ರಕಟಣೆ ಓದಿದೆ. ಬಲಗೈ ವೇಗಿಗೆ ಪಾದದ ನೋವಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಿಸಿಸಿಐ ವೈದ್ಯಕೀಯ ತಂಡವು ವಿಶ್ರಾಂತಿಗೆ ಸಲಹೆ ನೀಡಿದೆ" ಎಂದು ಪ್ರಕಟಣೆ ತಿಳಿಸಿದೆ.

ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿ ಆರಂಭವಾಗಲಿರುವ  ಏಕದಿನ ಸರಣಿಗೆ ಸಿರಾಜ್ ಬದಲಿ ಆಟಗಾರರನ್ನು ಹೆಸರಿಸಿಲ್ಲ. ಸಿರಾಜ್ ಅನುಪಸ್ಥಿತಿಯಲ್ಲಿ ಜಯದೇವ್ ಉನದ್ಕತ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್ ಮತ್ತು ಮುಖೇಶ್ ಕುಮಾರ್ ತಂಡದಲ್ಲಿದ್ದಾರೆ. ಸಿರಾಜ್ ಐಪಿಎಲ್‌ನಿಂದಲೂ ನಿರಂತರವಾಗಿ ಆಡುತ್ತಿದ್ದು, ಸತತ ಮೂರು ಟೆಸ್ಟ್‌ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಅವರು ಈಗ ಏಷ್ಯಾಕಪ್ ಪಂದ್ಯಕ್ಕಾಗಿ ಎನ್ ಸಿಯಲ್ಲಿ ಅಭ್ಯಾಸ ನಡೆಸಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ಆಡಲಾಗುವ ಏಷ್ಯಾ ಕಪ್‌ಗಾಗಿ ತಂಡವನ್ನು ಸಿರಾಜ್ ಸೇರಿಕೊಳ್ಳಲಿದ್ದಾರೆ. ವರ್ಷದ ಆರಂಭದಿಂದಲೂ ಶ್ರೀಲಂಕಾ, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಸಿರಾಜ್ ಆಡಿದ್ದಾರೆ.ಜೂನ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧವೂ ಆಡಿದ್ದರು.

SCROLL FOR NEXT