ಜಸ್ ಪ್ರೀತ್ ಬುಮ್ರಾ 
ಕ್ರಿಕೆಟ್

ಬುಮ್ರಾ ಫುಲ್ ಫಿಟ್, ಐರ್ಲೆಂಡ್ ಸರಣಿಗೆ ಆಯ್ಕೆ ಸಾಧ್ಯತೆ: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಾಹಿತಿ

ಐಸಿಸಿ ಏಕದಿನ ಟೂರ್ನಿಗೆ ಸಿದ್ಧತೆ ನಡೆಸಿರುವ ಟೀಂ ಇಂಡಿಯಾಗೆ ಸಿಹಿಸುದ್ದಿಯೊಂದು ಲಭಿಸಿದ್ದು, ಗಾಯದ ಸಮಸ್ಯೆಯಿಂದ ತಂಡದಿಂದ ದೂರ ಉಳಿದಿದ್ದ ತಂಡದ ಸ್ಟಾರ್ ವೇಗಿ ಜಸ್ ಪ್ರೀತ್ ಬುಮ್ರಾ ಇದೀಗ ಫಿಟ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈ: ಐಸಿಸಿ ಏಕದಿನ ಟೂರ್ನಿಗೆ ಸಿದ್ಧತೆ ನಡೆಸಿರುವ ಟೀಂ ಇಂಡಿಯಾಗೆ ಸಿಹಿಸುದ್ದಿಯೊಂದು ಲಭಿಸಿದ್ದು, ಗಾಯದ ಸಮಸ್ಯೆಯಿಂದ ತಂಡದಿಂದ ದೂರ ಉಳಿದಿದ್ದ ತಂಡದ ಸ್ಟಾರ್ ವೇಗಿ ಜಸ್ ಪ್ರೀತ್ ಬುಮ್ರಾ ಇದೀಗ ಫಿಟ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ವಿಶ್ವಕಪ್ ಸಿದ್ದತೆ ನಡೆಸಿರುವ ಟೀಂ ಇಂಡಿಯಾಗೆ ಸ್ಟಾರ್ ಆಟಗಾರರ ಫಿಟ್ನೆಸ್ ದೊಡ್ಡ ತಲೆನೋವಾಗಿದ್ದು, ತಂಡದ ಪ್ರಮುಖ ಆಟಗಾರರಾದ ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ ಮತ್ತು ಕೆಎಲ್ ರಾಹುಲ್ ಅವರು ಗಾಯಗೊಂಡಿದ್ದು, ಹಲವು ಸಮಯದಿಂದ ತಂಡಕ್ಕೆ ಲಭ್ಯವಾಗುತ್ತಿಲ್ಲ. ಹೀಗಿರುವಾಗಲೇ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಸಿಹಿಸುದ್ದಿಯೊಂದನ್ನು ನೀಡಿದ್ದು, ವೇಗಿ ಜಸ್ಪ್ರಿತ್ ಬುಮ್ರಾ ಅವರ ಫಿಟ್ನೆಸ್ ಬಗ್ಗೆ ಮಹತ್ವದ ಅಪ್ಡೇಟ್ ಕೊಟ್ಟಿದ್ದಾರೆ. 

ಬುಮ್ರಾ ಅವರು ಸಂಪೂರ್ಣ ಫಿಟ್ ಆಗಿದ್ದು, ಮುಂದಿನ ಐರ್ಲೆಂಡ್ ಸರಣಿಗೆ ಆಯ್ಕೆಯಾಗಲಿದ್ದಾರೆ ಎಂದಿದ್ದಾರೆ. 

ಜಸ್ಪ್ರೀತ್ ಬುಮ್ರಾ ಅವರು ಬೆನ್ನು ನೋವಿನ ಕಾರಣದಿಂದ ಹಲವು ಸಮಯದಿಂದ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಸಂಪೂರ್ಣ ವೇಗದಲ್ಲಿ ಬೌಲಿಂಗ್ ಮಾಡುವ ಬಗ್ಗೆ ಕೆಲ ದಿನಗಳ ಹಿಂದೆ ಬಿಸಿಸಿಐ ಮಾಹಿತಿ ನೀಡಿತ್ತು. ಇದೀಗ ಬುಮ್ರಾ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ಹೇಳಲಾಗಿದೆ.

ಭಾರತ ತಂಡವು ಐರ್ಲೆಂಡ್ ವಿರುದ್ಧ ಐರ್ಲೆಂಡ್ ನಲ್ಲಿ ಮೂರು ಟಿ20 ಪಂದ್ಯಗಳ ಸರಣಿ ಆಡಲಿದೆ. ಈ ಮೂರು ಪಂದ್ಯಗಳು ಆಗಸ್ಟ್ 18, 20 ಮತ್ತು 23ರಂದು ಡಬ್ಲಿನ್ ನಲ್ಲಿ ನಡೆಯಲಿದೆ. ಪ್ರಸ್ತುತ ಭಾರತ ತಂಡವು ಸದ್ಯ ವೆಸ್ಟ್ ಇಂಡೀಸ್ ನಲ್ಲಿ ಏಕದಿನ ಸರಣಿ ಆಡುತ್ತಿದೆ. ಇದಾದ ಬಳಿಕ ಐದು ಟಿ20 ಪಂದ್ಯಗಳು ನಡೆಯಲಿದೆ. ಇದರ ಬಳಿಕ ಭಾರತ ತಂಡವು ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಇದಕ್ಕೆ ಇನ್ನೂ ತಂಡ ಪ್ರಕಟಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ