ಕ್ರಿಕೆಟ್

WTC Final: ಟೀಂ ಇಂಡಿಯಾಗೆ 444 ರನ್ ಟಾರ್ಗೆಟ್ ನೀಡಿದ ಆಸ್ಟ್ರೇಲಿಯಾ

Vishwanath S

ದಿ ಓವಲ್(ಲಂಡನ್): ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿದ್ದು ಟೀಂ ಇಂಡಿಯಾ ಗೆಲ್ಲಲು 444 ರನ್ ಗುರಿ ಆಸ್ಟ್ರೇಲಿಯಾ ನೀಡಿದೆ.

ಓವಲ್‌ನಲ್ಲಿ ನಡೆಯುತ್ತಿರುವ ಅಂತಿಮ ಪಂದ್ಯದ ನಾಲ್ಕನೇ ದಿನದಾಟದಂದು ಆಸ್ಟ್ರೇಲಿಯಾ 8 ವಿಕೆಟ್ ಕಳೆದುಕೊಂಡು 270 ರನ್ ಗಳಿಸಿ ಎರಡನೇ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ. ಇದಕ್ಕೂ ಮೊದಲು ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 296 ರನ್ ಗಳಿಸಿತ್ತು. ಹೀಗಾಗಿ ಆಸ್ಟ್ರೇಲಿಯಾ 173 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿತ್ತು. ಇನ್ನು ಆಸ್ಟ್ರೇಲಿಯಾ ತಂಡವು ಈಗ ಒಟ್ಟು 443 ರನ್‌ಗಳ ಮುನ್ನಡೆ ಸಾಧಿಸಿದೆ. ಈ ಪಂದ್ಯವನ್ನು ಗೆಲ್ಲಲು ಆಸ್ಟ್ರೇಲಿಯಾ ಭಾರತಕ್ಕೆ 444 ರನ್‌ಗಳ ಗುರಿ ನೀಡಿದೆ.

ಭಾರತ ದಿನದ ಆರಂಭಿಕ ಅವಧಿಯಲ್ಲಿ ಮಾರ್ನಸ್ ಲ್ಯಾಬುಸ್ಚಾಗ್ನೆ ಮತ್ತು ಕ್ಯಾಮರೂನ್ ಗ್ರೀನ್ ಅವರ ವಿಕೆಟ್ಗಳನ್ನು ಪಡೆದರು. ಆಸ್ಟ್ರೇಲಿಯಾ ಆರು ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತು. ಆದರೆ ಕ್ಯಾರಿ 105 ಎಸೆತಗಳಲ್ಲಿ ಅಜೇಯ 66 ರನ್ ಗಳಿಸಿ ಸ್ಟಾರ್ಕ್ ಜೊತೆ 93 ರನ್ ಜೊತೆಯಾಟವನ್ನು ಹಂಚಿಕೊಂಡರು. ಸ್ಟಾರ್ಕ್ 57 ಎಸೆತಗಳಲ್ಲಿ 41 ರನ್ ಗಳಿಸಿದ್ದು ಅಂತಿಮವಾಗಿ ಆಸ್ಟ್ರೇಲಿಯಾ 270/8 ಎಂದು ಡಿಕ್ಲೇರ್ ಮಾಡಿಕೊಂಡಿತು.

SCROLL FOR NEXT