ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಟ್ರೋಫಿ ಗೆದ್ದ ಆಸ್ಟ್ರೇಲಿಯಾ 
ಕ್ರಿಕೆಟ್

WTC ಫೈನಲ್: ಭಾರತವನ್ನು 209 ರನ್ ಗಳಿಂದ ಮಣಿಸಿ ಚೊಚ್ಚಲ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ

ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಭಾರತವನ್ನು  209 ರನ್‌ಗಳಿಂದ ಸೋಲಿಸಿದ ಆಸ್ಟ್ರೇಲಿಯಾ ಚೊಚ್ಚಲ ಟ್ರೋಪಿಯನ್ನು ಮುಡಿಗೇರಿಸಿಕೊಂಡಿತು.ಇದರೊಂದಿಗೆ ಸತತ ಎರಡನೇ ಬಾರಿಗೆ ಭಾರತಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಸೋಲು ಎದುರಾಗಿದೆ.

ಲಂಡನ್: ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಭಾರತವನ್ನು  209 ರನ್‌ಗಳಿಂದ ಸೋಲಿಸಿದ ಆಸ್ಟ್ರೇಲಿಯಾ ಚೊಚ್ಚಲ ಟ್ರೋಪಿಯನ್ನು ಮುಡಿಗೇರಿಸಿಕೊಂಡಿತು.ಇದರೊಂದಿಗೆ ಸತತ ಎರಡನೇ ಬಾರಿಗೆ ಭಾರತಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಸೋಲು ಎದುರಾಗಿದೆ. ಎರಡು ವರ್ಷಗಳ ಹಿಂದೆ ನ್ಯೂಜಿಲೆಂಡ್ ವಿರುದ್ಧ ಸೋಲು ಕಂಡಿದ್ದ ಭಾರತ ರನ್ನರ್ ಅಪ್ ಎನಿಸಿಕೊಂಡಿತ್ತು.

ಅಂತಿಮ ದಿನದಾಟದಲ್ಲಿ ಭಾರತ ಗೆಲ್ಲಲು 280 ರನ್ ಗಳ ಅಗತ್ಯವಿತ್ತು. ವಿರಾಟ್ ಕೊಹ್ಲಿ ಹಾಗೂ ರಹಾನೆ ವಿಕೆಟ್ ಕಳೆದುಕೊಳ್ಳುವುದರೊಂದಿಗೆ ಭಾರತದ ಪ್ರಶಸ್ತಿ ಕನಸು ಭಗ್ನವಾಯಿತು. ಕೊಹ್ಲಿ ಮತ್ತು ರಹಾನೆ ಕ್ರಮವಾಗಿ 49, 46ರನ್ ಗಳಿಸಿ ಔಟ್ ಆದರು. ಉಳಿದಂತೆ  ಶ್ರೀಕರ್ ಭರತ್ 23 ಹೊರತುಪಡಿಸಿದರೆ ಬೇರೆ ಯಾವುದೇ ಆಟಗಾರರು ಎರಡಂಕಿ ದಾಟಲಿಲ್ಲ. ಇದರಿಂದಾಗಿಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್ ನಲ್ಲಿ 234 ರನ್ ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತ್ತು. 

ಇದಕ್ಕೂ ಮುನ್ನ ಆಸ್ಟ್ರೇಲಿಯಾದ 469 ರನ್ ಗಳಿಗೆ ಪ್ರತಿಯಾಗಿ ಭಾರತ 296 ರನ್ ಗಳಿಗೆ ಆಲೌಟ್ ಆಗಿತ್ತು.  ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್ ನಲ್ಲಿ ಎಂಟು ವಿಕೆಟ್  ನಷ್ಟಕ್ಕೆ 270 ರನ್ ಗಳಿಸಿ ಡಿಕ್ಲೇರ್ ಘೋಷಿಸಿತು. ಈ ಮೂಲಕ ಭಾರತದ ಗೆಲುವಿಗೆ 444 ರನ್ ಗಳ ಗುರಿ ಒಡ್ಡಿತು. ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ಪರ  ಟ್ರಾವಿಸ್ ಹೆಡ್ (163) ಹಾಗೂ ಸ್ಟೀವ್ ಸ್ಮಿತ್ 121 ರನ್ ಗಳಿಸಿದರೆ ದ್ವಿತೀಯ ಇನ್ನಿಂಗ್ಸ್ ನಲ್ಲಿ ಅಲೆಕ್ಯಾ ಕ್ಯಾರಿ 66 ರನ್ ಬಾರಿಸಿದರು.

ಆಸ್ಟ್ರೇಲಿಯಾ ಎಲ್ಲಾ ಪ್ರಮುಖ ಐಸಿಸಿ ಪ್ರಶಸ್ತಿಗಳನ್ನು ಗೆದ್ದ ಮೊದಲ ಪುರುಷರ ತಂಡವಾಗಿ ಹೊರಹೊಮ್ಮಿತು. ಆಸೀಸ್ 1987, 1999, 2003, 2007 ಮತ್ತು 2015 ರಲ್ಲಿ ಏಕದಿನ ವಿಶ್ವಕಪ್ ಗೆದ್ದಿದ್ದಾರೆ. ಅವರು 2006 ಮತ್ತು 2009 ರಲ್ಲಿ ಸತತ  ICC ಚಾಂಪಿಯನ್ಸ್ ಟ್ರೋಫಿಯನ್ನು ಗಳಿಸಿದ್ದರು. ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆದ 2021ರ ಆವೃತ್ತಿಯಲ್ಲಿ ಆಸ್ಟ್ರೇಲಿಯಾ ತನ್ನ ಟಿ-20 ವಿಶ್ವಕಪ್ ಪ್ರಶಸ್ತಿಯ ಬರವನ್ನು ಕೊನೆಗೊಳಿಸಿತ್ತು, ಆರನ್ ಫಿಂಚ್ ನಾಯಕತ್ವದಲ್ಲಿ ನ್ಯೂಜಿಲೆಂಡ್ ಅನ್ನು ಫೈನಲ್‌ನಲ್ಲಿ ಸೋಲಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT