ಕ್ರಿಕೆಟ್ 
ಕ್ರಿಕೆಟ್

WTC Final: ಗಾಯದ ಮೇಲೆ ಬರೆ; ಟೀಂ ಇಂಡಿಯಾ ಸ್ಟಾರ್ ಆಟಗಾರನಿಗೆ ಐಸಿಸಿ ದುಬಾರಿ ದಂಡ!

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದ ಸೋಲಿನ ಹತಾಶೆಯಲ್ಲಿರುವ ಟೀಂ ಇಂಡಿಯಾಗೆ ಐಸಿಸಿ ಗಾಯದ ಮೇಲೆ ಬರೆ ಎಳೆದಿದ್ದು, ತಂಡದ ಸ್ಟಾರ್ ಆಟಗಾರನಿಗೆ ದುಬಾರಿ ದಂಡ ಹೇರಿದೆ.

ನವದೆಹಲಿ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದ ಸೋಲಿನ ಹತಾಶೆಯಲ್ಲಿರುವ ಟೀಂ ಇಂಡಿಯಾಗೆ ಐಸಿಸಿ ಗಾಯದ ಮೇಲೆ ಬರೆ ಎಳೆದಿದ್ದು, ತಂಡದ ಸ್ಟಾರ್ ಆಟಗಾರನಿಗೆ ದುಬಾರಿ ದಂಡ ಹೇರಿದೆ.

ಹೌದು.. ಓವಲ್‌ನಲ್ಲಿ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಗಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ದಂಡ ಹೇರಿದೆ. ಆಸ್ಟ್ರೇಲಿಯಾ ಮತ್ತು ಭಾರತ ಎರಡೂ ತಂಡಳಿಗೆ ದಂಡ ಹೇರಲಾಗಿದ್ದು, ಈ ಪೈಕಿ ಭಾರತಕ್ಕೆ ಪಂದ್ಯದ ಸಂಭಾವನೆಯ ಶೇ.100ರಷ್ಟು ದಂಡ ಮತ್ತು ಆಸ್ಟ್ರೇಲಿಯಾ ತಂಡಕ್ಕೆ ಶೇ.80ರಷ್ಟು ದಂಡ ಹೇರಲಾಗಿದೆ.

ಐಸಿಸಿ ನಿಯಮಗಳ ಪ್ರಕಾರ ಭಾರತ ಸರಾಸರಿ ಐದು ಓವರ್ ಗಳ ಕೊರತೆ ಎದುರಿಸಿದ್ದು, ಆಸ್ಟ್ರೇಲಿಯಾ ತಂಡ 4 ಓವರ್ ಗಳ ಕೊರತೆ ಎದುರಿಸಿತ್ತು. ಹೀಗಾಗಿ ಆಟಗಾರರು ಮತ್ತು ಆಟಗಾರರ ಸಹಾಯಕ ಸಿಬ್ಬಂದಿಗಳಿಗೆ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.22 ರ ಪ್ರಕಾರ, ನಿಗದಿತ ಸಮಯದಲ್ಲಿ ಬೌಲಿಂಗ್ ಮಾಡಲು ವಿಫಲವಾದ ಪ್ರತಿ ಓವರ್‌ಗೆ ಆಟಗಾರರಿಗೆ ಅವರ ಪಂದ್ಯದ ಶುಲ್ಕದ ಶೇಕಡಾ 20 ರಷ್ಟು ದಂಡ ವಿಧಿಸಲಾಗಿದೆ.

ಗಿಲ್ ಗೆ ಎಚ್ಚರಿಕೆಯೊಂದಿಗೆ ದಂಡ
ಇನ್ನು ಟೆಸ್ಟ್‌ನ ನಾಲ್ಕನೇ ದಿನದಂದು ಗಿಲ್ ಔಟ್ ಆದ ಬಳಿಕ ಅಂಪೈರ್ ಗಳ ತೀರ್ಪಿಗೆ ಮೈದಾನದಲ್ಲೇ ಅಸಮಾಧಾನ ವ್ಯಕ್ತಪಡಿಸಿದ ಗಿಲ್ ಗೂ ಐಸಿಸಿ ಎಚ್ಚರಿಕೆ ನೀಡಿದ್ದು, ಗಿಲ್ ಆರ್ಟಿಕಲ್ 2.7 ಅನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಅವರಿಗೂ ಪಂದ್ಯದ ಸಂಭಾವನೆಯ ಶೇ.115% ದಂಡ ವಿಧಿಸಲಾಗಿದೆ. ದಂಡದ ರೂಪವಾಗಿ ಗಿಲ್ ಇದೀಗ ತನ್ನ ಸಂಭಾವನೆಯ ಶೇ.115ರಷ್ಟು ಹಣವನ್ನು ಐಸಿಸಿಗೆ ನೀಡಬೇಕಿದೆ.

ಇನ್ನು ತಾವು ವಿವಾದಾಸ್ಪದ ರೀತಿಯಲ್ಲಿ ಔಟಾದ ಬಳಿಕ ಮೈದಾನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದು ಮಾತ್ರವಲ್ಲದೇ ಸಾಮಾಜಿಕ ಜಾಲತಾಣಗಳಲ್ಲೂ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.  
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT