ಸಾಂದರ್ಭಿಕ ಚಿತ್ರ 
ಕ್ರಿಕೆಟ್

ಏಕದಿನ ವಿಶ್ವ ಕಪ್ 2023: ಅಕ್ಟೋಬರ್ 15ಕ್ಕೆ ಅಹಮದಾಬಾದ್ ನಲ್ಲಿ ಭಾರತ- ಪಾಕ್ ಮುಖಾಮುಖಿ

ಏಕದಿನ ವಿಶ್ವ ಕಪ್ 2023ರ ಕರಡು ವೇಳಾಪಟ್ಟಿ ಬಿಡುಗಡೆಯಾಗಿದೆ. ಅದರ ಪ್ರಕಾರ, ಅಕ್ಟೋಬರ್ 8 ರಂದು ಅಹಮದಾಬಾದ್ ನಲ್ಲಿ ಸಾಂಪ್ರದಾಯಿಕ ಎದುರಾಳಿ ತಂಡಗಳಾದ ಭಾರತ- ಪಾಕಿಸ್ತಾನ ಮುಖಾಮುಖಿಯಾಗಲಿವೆ.

ನವದೆಹಲಿ: ಏಕದಿನ ವಿಶ್ವ ಕಪ್ 2023ರ ಕರಡು ವೇಳಾಪಟ್ಟಿ ಬಿಡುಗಡೆಯಾಗಿದೆ. ಅದರ ಪ್ರಕಾರ, ಅಕ್ಟೋಬರ್ 8 ರಂದು ಅಹಮದಾಬಾದ್ ನಲ್ಲಿ ಸಾಂಪ್ರದಾಯಿಕ ಎದುರಾಳಿ ತಂಡಗಳಾದ ಭಾರತ- ಪಾಕಿಸ್ತಾನ ಮುಖಾಮುಖಿಯಾಗಲಿವೆ.

ಭಾರತ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ಮೂಲಕ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ. ಆದರೆ ಒಂದು ವಾರದ ನಂತರ ಅಹಮದಾಬಾದ್ ನ ಪ್ರಧಾನಿ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಾಕಿಸ್ತಾನದ ವಿರುದ್ಧ ಬಹು ನಿರೀಕ್ಷಿತ ಪಂದ್ಯವನ್ನು ಆಡಲಿದೆ.

ಮುಂದಿನ ವಾರದ ಆರಂಭದಲ್ಲಿ ಅಂತಿಮ ವೇಳಾಪಟ್ಟಿ ಹೊರಬೀಳಲಿದೆ. ಇದಕ್ಕೂ ಮುಂಚೆ ಟೂರ್ನಿಯಲ್ಲಿ ಭಾಗವಹಿಸುವ ದೇಶಗಳಿಗೆ ಕರಡು ವೇಳಾಪಟ್ಟಿಯನ್ನು ಪ್ರತಿಕ್ರಿಯೆಗಾಗಿ ಕಳುಹಿಸಲಾಗಿದೆ ಎಂದು ಇಎಸ್ ಪಿಎನ್ ಕ್ರಿಕ್ ಇನ್ಫೋ ಸೋಮವಾರ ವರದಿ ಮಾಡಿದೆ.  ಆರಂಭಿಕ ಡ್ರಾಫ್ಟ್ ಪ್ರಕಾರ, ಪಂದ್ಯಾವಳಿಯು ಅಕ್ಟೋಬರ್ 5 ರಂದು ಅಹಮದಾಬಾದ್‌ನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್, ಕಳೆದ ಆವೃತ್ತಿಯ ರನ್ನರ್ ಅಪ್ ತಂಡ ನ್ಯೂಜಿಲೆಂಡ್ ಎದುರಿಸಲಿದೆ. ಈ ಕ್ರೀಡಾಂಗಣ ನವೆಂಬರ್ 19 ರಂದು ಫೈನಲ್‌ಗೆ ಆತಿಥ್ಯ ವಹಿಸಲಿದೆ.

ನವೆಂಬರ್ 15 ಮತ್ತು 16 ರಂದು ನಡೆಯಲಿರುವ ಸೆಮಿಫೈನಲ್ ಪಂದ್ಯಗಳ ಸ್ಥಳಗಳನ್ನು ಇನ್ನೂ ನಿರ್ಧರಿಸಲಾಗಿಲ್ಲ. 2011 ರಲ್ಲಿ ಸ್ವದೇಶದಲ್ಲಿ ಕೊನೆಯ ಬಾರಿಗೆ ODI ವಿಶ್ವಕಪ್ ಗೆದ್ದ ಆತಿಥೇಯ ಭಾರತ, ಕೋಲ್ಕತ್ತಾ, ಮುಂಬೈ, ನವದೆಹಲಿ ಮತ್ತು ಬೆಂಗಳೂರು ಸೇರಿದಂತೆ ಒಂಬತ್ತು ನಗರಗಳಲ್ಲಿ ಲೀಗ್ ಹಂತದ ಪಂದ್ಯಗಳನ್ನು ಆಡಲಿದೆ. ಅಕ್ಟೋಬರ್ 15 ರಂದು ಪಾಕಿಸ್ತಾನವನ್ನು ಎದುರಿಸಲಿದ್ದಾರೆ. ಇದೇ ವೇಳೆ ಪಾಕಿಸ್ತಾನವು ತನ್ನ ಲೀಗ್ ಪಂದ್ಯಗಳನ್ನು ಐದು ನಗರಗಳಲ್ಲಿ ಆಡಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT