ಸಂಗ್ರಹ ಚಿತ್ರ 
ಕ್ರಿಕೆಟ್

ಐಸಿಸಿ ವಿಶ್ವಕಪ್ 2023 ಅಧಿಕೃತ ವೇಳಾಪಟ್ಟಿ ಪ್ರಕಟ: ಅಕ್ಟೋಬರ್ 5 ರಿಂದ ಪ್ರಾರಂಭ; 15ಕ್ಕೆ ಭಾರತ-ಪಾಕ್ ಪಂದ್ಯ

ಬಹುನಿರೀಕ್ಷಿತ 13ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಮಂಗಳವಾರ ಪ್ರಕಟಗೊಂಡಿದೆ.

ಮುಂಬೈ: ಬಹುನಿರೀಕ್ಷಿತ 13ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಮಂಗಳವಾರ ಪ್ರಕಟಗೊಂಡಿದೆ.

ಅಂತರರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ICC) ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂಬೈನಲ್ಲಿ ನಡೆದ 100 ದಿನಗಳ ವಿಶ್ವಕಪ್ ಸಮಾರಂಭದಲ್ಲಿ ವಿಶ್ವಕಪ್ 2023 ವೇಳಾಪಟ್ಟಿಯನ್ನು ಅನಾವರಣಗೊಳಿಸಿದೆ.

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಅಕ್ಟೋಬರ್‌ 5 ರಿಂದ ನವೆಂಬರ್‌ 19 ರವರೆಗೆ ನಡೆಯಲಿದೆ. ಸೆಮಿಫೈನಲ್ ಪಂದ್ಯಗಳು ಮುಂಬೈ ಮತ್ತು ಕೋಲ್ಕತ್ತಾದಲ್ಲಿ ನವೆಂಬರ್ 15 ಮತ್ತು 16 ರಂದು ಆಯೋಜಿಸಲಾಗಿದ್ದು, ಅಂತಿಮ ಫೈನಲ್ ಪಂದ್ಯವು ನವೆಂಬರ್ 19 ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ.

ಭಾರತ ತಂಡ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಟೀಮ್ ಇಂಡಿಯಾ ಒಟ್ಟು ಒಂತ್ತು ಪಂದ್ಯಗಳನ್ನ ಆಡಲಿದೆ. ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ, ಇಂಗ್ಲೆಂಡ್, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಕ್ವಾಲಿಫೈಯರ್ 1, ಕ್ವಾಲಿಫೈಯರ್ 2 ವಿರುದ್ಧ ಸೆಣೆಸಾಟ ನಡೆಯಲಿದೆ.

ಪಾಕಿಸ್ತಾನದ ಆಕ್ಷೇಪಗಳ ಹೊರತಾಗಿಯೂ, ಭಾರತ ಹಾಗೂ ಪಾಕ್ ನಡುವಣ ಪಂದ್ಯವು ಅಕ್ಟೋಬರ್ 15 ರಂದು ಅಹಮದಾಬಾದ್‌ನಲ್ಲೇ ನಡೆಯಲಿದೆ.

ಈ ಪಂದ್ಯವನ್ನು ಚೆನ್ನೈ, ಬೆಂಗಳೂರು ಅಥವಾ ಕೋಲ್ಕತ್ತಾಗೆ ಸ್ಥಳಾಂತರಿಸುವಂತೆ ಪಾಕಿಸ್ತಾನ ಮನವಿ ಮಾಡಿತ್ತು. ಆದರೆ, ಇದೀಗ ಅಂತಿಮವಾಗಿ ಅಹ್ಮದಾಬಾದ್​ನಲ್ಲೇ ನಡೆಸಲು ಒಪ್ಪಿಗೆ ನೀಡಲಾಗಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ 1,30,000 ಪ್ರೇಕ್ಷಕರಿಗೆ ಆತಿಥ್ಯ ವಹಿಸುತ್ತದೆ. ಇಲ್ಲಿ ಭಾರತ-ಪಾಕ್ ಪಂದ್ಯ ನಡೆದರೆ ಸ್ಟೇಡಿಯಂ ಹೌಸ್​ಫುಲ್ ಆಗಲಿದ್ದು, ಟಿಕೆಟ್​ಗಳಿಗೆ ಸಂಪೂರ್ಣ ಮಾರಾಟವಾಗುವ ನಿರೀಕ್ಷೆಯಿದೆ. ಹೀಗಾಗಿ ಬಿಸಿಸಿಐ ಅಥವಾ ಐಸಿಸಿ ಸ್ಥಳವನ್ನು ಬದಲಾಯಿಸಲು ಒಪ್ಪಿಲ್ಲ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT