ಟೀಂ ಇಂಡಿಯಾ ತಂಡ 
ಕ್ರಿಕೆಟ್

4ನೇ ಟೆಸ್ಟ್: ಆಸ್ಟ್ರೇಲಿಯಾ ಮೇಲುಗೈ, ಖವಾಜಾ ಶತಕ; ಮೊದಲ ದಿನದಾಟ ಅಂತ್ಯಕ್ಕೆ ಆಸೀಸ್ 255/4

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ 4ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ ಆಸ್ಟ್ರೇಲಿಯಾ 4 ವಿಕೆಟ್ ನಷ್ಟಕ್ಕೆ 255 ರನ್ ಪೇರಿಸಿದ್ದಾರೆ.

ಅಹಮದಾಬಾದ್: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ 4ನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ ಆಸ್ಟ್ರೇಲಿಯಾ 4 ವಿಕೆಟ್ ನಷ್ಟಕ್ಕೆ 255 ರನ್ ಪೇರಿಸಿದ್ದಾರೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 90 ಓವರ್ ಗಳ ಮುಕ್ತಾಯಕ್ಕೆ 4 ವಿಕೆಟ್ ಕಳೆದುಕೊಂಡು 255 ರನ್ ಪೇರಿಸಿದೆ. ಉಸ್ಮಾನ್ ಖವಾಜ ಭರ್ಜರಿ ಶತಕ ಬಾರಿಸಿದ್ದು ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು. ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ 32, ಮಾರ್ನಸ್ ಲ್ಯಾಬುಸ್ಚಾಗ್ನೆ3, ಸ್ಟೀವ್ ಸ್ಮಿತ್ 38, ಪೀಟರ್ ಹ್ಯಾಂಡ್ಸ್ಕಾಂಬ್ 17 ಮತ್ತು ಕ್ಯಾಮರೂನ್ ಗ್ರೀನ್ ಅಜೇಯ 49 ರನ್ ಪೇರಿಸಿದ್ದಾರೆ.

ಭಾರತದ ಪರ ಮೊಹಮ್ಮದ್ ಶಮಿ 2 ವಿಕೆಟ್ ಆರ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದಿದ್ದಾರೆ. 

ಬಾರ್ಡರ್- ಗವಾಸ್ಕರ್ ಟ್ರೋಫಿಯ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-1 ಅಂತರಗಳ ಮುನ್ನಡೆ ಸಾಧಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ; ಆದರೆ ಡೀಲಿಮಿಟೇಷನ್ ಗೆ ಪ್ರತಿಪಕ್ಷಗಳ ವಿರೋಧ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

EVM ಬದಲು ಬ್ಯಾಲೆಟ್ ಪೇಪರ್ ಬಳಕೆ ಮಸೂದೆಗೆ ಕೊನೆಗೂ ರಾಜ್ಯಪಾಲರ ಅಂಕಿತ!

ಪಾಕಿಸ್ತಾನಕ್ಕೆ ಶಾಕ್! ಕೇಂದ್ರದ ಡೀಲಿಮಿಟೇಷನ್ ಮಸೂದೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಕ್ಷೇತ್ರಗಳ ಮರುಹಂಚಿಕೆಗೆ ಕ್ರಮ!

'ಚೀನಾ, ಇಡೀ ಜಗತ್ತಿಗೆ' ಹಾರ್ಮುಜ್ ಅನ್ನು 'ಶಾಶ್ವತವಾಗಿ' ತೆರೆಯುತ್ತೇವೆ; ಜಿನ್ ಪಿಂಗ್ ನನಗೆ ದೊಡ್ಡ ಅಪ್ಪುಗೆ ನೀಡುತ್ತಾರೆ: ಟ್ರಂಪ್

BJP ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿ ಅಪರಾಧಿ; ಕೋರ್ಟ್ ತೀರ್ಪು!

SCROLL FOR NEXT