ಟೀಂ ಇಂಡಿಯಾ ತಂಡ 
ಕ್ರಿಕೆಟ್

4ನೇ ಟೆಸ್ಟ್: ಕೊಹ್ಲಿ ಶತಕ; 571 ರನ್ ಗಳಿಗೆ ಭಾರತ ಆಲೌಟ್, ಆಸ್ಟ್ರೇಲಿಯಾ ವಿರುದ್ಧ 91 ರನ್ ಮುನ್ನಡೆ!

4ನೇ ಟೆಸ್ಟ್ ನಲ್ಲಿ ಭಾರತ ತಂಡ ನಾಲ್ಕನೇ ದಿನದಾಟದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು ಮೊದಲ ಇನ್ನಿಂಗ್ಸ್ ನಲ್ಲಿ 571 ರನ್ ಗಳಿಗೆ ಆಲೌಟ್ ಆಗಿದೆ.

ಅಹಮದಾಬಾದ್: 4ನೇ ಟೆಸ್ಟ್ ನಲ್ಲಿ ಭಾರತ ತಂಡ ನಾಲ್ಕನೇ ದಿನದಾಟದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು ಮೊದಲ ಇನ್ನಿಂಗ್ಸ್ ನಲ್ಲಿ 571 ರನ್ ಗಳಿಗೆ ಆಲೌಟ್ ಆಗಿದೆ. ಆಸ್ಟ್ರೇಲಿಯಾ ವಿರುದ್ಧ 91 ರನ್ ಮುನ್ನಡೆ ಸಾಧಿಸಿದೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಪರವಾಗಿ ವಿರಾಟ್ ಕೊಹ್ಲಿ (186) ಶತಕ ಸಿಡಿಸಿದರೆ, ಅಕ್ಷರ್ ಪಟೇಲ್ (79) ಅರ್ಧಶತಕ ಸಿಡಿಸಿ ಭಾರತಕ್ಕೆ ಬಲ ತುಂಬಿದರು. ಈ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಹೊರತು ಪಡಿಸಿ ಕೆಎಸ್ ಭರತ್ (44), ರವೀಂದ್ರ ಜಡೇಜಾ (29) ಅದ್ಭುತ ಜೊತೆಯಾಟ ನೀಡದರು. 

ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡ 571 ರನ್ ಗಳಿಗೆ ಆಲೌಟ್ ಆಗಿದೆ. ಇದರಲ್ಲಿ ಕಿಂಗ್ ಕೊಹ್ಲಿ 186 ರನ್‌ಗಳ ಬಿರುಗಾಳಿಯ ಇನ್ನಿಂಗ್ಸ್‌ ಆಡಿದ್ದರೆ, ಶುಭಮನ್ ಗಿಲ್ 128 ರನ್ ಗಳಿಸಿದ್ದಾರೆ. ಅದೇ ಸಮಯದಲ್ಲಿ, ಆಸ್ಟ್ರೇಲಿಯಾ ತಂಡವು ನಾಲ್ಕನೇ ದಿನದ ಆಟಕ್ಕೆ ಎರಡನೇ ಇನಿಂಗ್ಸ್‌ನಲ್ಲಿ 3/0 ಗಳಿಸಿತು.

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ ಉಸ್ಮಾನ್ ಖವಾಜಾ 180 ಮತ್ತು ಕ್ಯಾಮರೂನ್ ಗ್ರೀನ್ 114 ರನ್ ಗಳಿಸಿ ತಂಡವನ್ನು 480 ರನ್‌ಗಳತ್ತ ಕೊಂಡೊಯ್ದರು. ಕೊನೆಯಲ್ಲಿ ಟಾಡ್ ಮರ್ಫಿ ಉಪಯುಕ್ತ 41 ರನ್ ಗಳಿಸಿ ತಂಡಕ್ಕೆ ನೆರವಾಗಿದ್ದರು.

ಆಸ್ಟ್ರೇಲಿಯಾ ಪರ ಬೌಲಿಂಗ್ ನಲ್ಲಿ ಟಾಡ್ ಮರ್ಫಿ, ನಾಥಮ್ ಲಿಯೋನ್ ತಲಾ 3 ವಿಕೆಟ್ ಮತ್ತು ಮಿಚೆಲ್ ಸ್ಟಾರ್ಕ್ ಮತ್ತು ಕುಹ್ನೆಮನ್ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT