ಟೀಂ ಇಂಡಿಯಾ 
ಕ್ರಿಕೆಟ್

ಮೊದಲ ಏಕದಿನ ಪಂದ್ಯ: ಶಮಿ ಮಾರಕ ಬೌಲಿಂಗ್, 188 ರನ್ ಗಳಿಗೆ ಆಸ್ಟ್ರೇಲಿಯಾ ಆಲೌಟ್

ಪ್ರವಾಸಿ ಆಸ್ಟ್ರೇಲಿಯಾ ಮತ್ತು ಟೀಂ ಇಂಡಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 188 ರನ್ ಗಳಿಗೆ ಆಲೌಟ್ ಆಗಿದೆ.

ಮುಂಬೈ: ಪ್ರವಾಸಿ ಆಸ್ಟ್ರೇಲಿಯಾ ಮತ್ತು ಟೀಂ ಇಂಡಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 188 ರನ್ ಗಳಿಗೆ ಆಲೌಟ್ ಆಗಿದೆ.

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 188 ರನ್ ಗಳಿಗೆ ಆಲೌಟ್ ಆಗಿದ್ದು ಭಾರತಕ್ಕೆ ಗೆಲ್ಲಲು 189 ರನ್‌ ಗುರಿ ನೀಡಿದೆ. 

ಆಸ್ಟ್ರೇಲಿಯಾ ತನ್ನ ಕೊನೆಯ ಐದು ವಿಕೆಟ್‌ಗಳನ್ನು 19 ರನ್‌ಗಳೊಳಗೆ ಕಳೆದುಕೊಂಡಿತು. ಇದರಲ್ಲಿ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ತಲಾ ಮೂರು ವಿಕೆಟ್ ಕಬಳಿಸಿದರು. ಆಸ್ಟ್ರೇಲಿಯಾ ಪರ ಮಿಚೆಲ್ ಮಾರ್ಷ್ ಅತ್ಯಧಿಕ 81 ರನ್ ಮತ್ತು ಜೋ ಇಂಗ್ಲಿಸ್ 26 ರನ್ ಗಳಿಸಿದರು. ಆಸ್ಟ್ರೇಲಿಯಾದ ಐವರು ಬ್ಯಾಟ್ಸ್‌ಮನ್‌ಗಳು ಎರಡಂಕಿ ತಲುಪಲು ಸಾಧ್ಯವಾಗಲಿಲ್ಲ.

ಭಾರತದ ಪರ ರವೀಂದ್ರ ಜಡೇಜಾ 2, ಹಾರ್ದಿಕ್ ಪಾಂಡ್ಯ ಹಾಗೂ ಕುಲದೀಪ್ ಯಾದವ್ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!