ಹರ್ಭಜನ್ ಸಿಂಗ್ 
ಕ್ರಿಕೆಟ್

ಭಾರತ ಏಷ್ಯಾಕಪ್ ಆಡಲು ಪಾಕಿಸ್ತಾನಕ್ಕೆ ಹೋಗಬೇಕೇ?: ಹರ್ಭಜನ್ ಸಿಂಗ್ ಹೇಳಿದ್ದೇನು?

ಪಾಕಿಸ್ತಾನದಲ್ಲಿ ಆಯೋಜನೆಯಾಗಿರುವ ಏಷ್ಯಾಕಪ್ ಟೂರ್ನಿ ಕುರಿತ ಗೊಂದಲಗಳು ಮುಂದುವರೆದಿರುವಂತೆಯೇ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್, ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ನವದೆಹಲಿ: ಪಾಕಿಸ್ತಾನದಲ್ಲಿ ಆಯೋಜನೆಯಾಗಿರುವ ಏಷ್ಯಾಕಪ್ ಟೂರ್ನಿ ಕುರಿತ ಗೊಂದಲಗಳು ಮುಂದುವರೆದಿರುವಂತೆಯೇ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್, ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಏಷ್ಯಾಕಪ್ ಆತಿಥ್ಯಕ್ಕೆ ಸಂಬಂಧಿಸಿದಂತೆ ಗೊಂದಲ ಮುಂದುವರೆದಿದ್ದು, ಈ ಬಾರಿಯ ಏಷ್ಯಾಕಪ್ ಎಲ್ಲಿ ನಡೆಯಲಿದೆ ಎಂಬುದನ್ನು ಇಲ್ಲಿಯವರೆಗೆ ಎರಡೂ ಮಂಡಳಿಗಳಿಗೆ ನಿರ್ಧರಿಸಲು ಸಾಧ್ಯವಾಗಿಲ್ಲ, ರಾಜಕೀಯ ಕಾರಣಗಳಿಂದಾಗಿ ಭಾರತ ತಂಡವು ಪಾಕಿಸ್ತಾನಕ್ಕೆ ಹೋಗಿ ಏಷ್ಯಾಕಪ್ ಆಡಲು ಬಯಸುತ್ತಿಲ್ಲ. ಅದೇ ಸಮಯದಲ್ಲಿ, ಪಾಕಿಸ್ತಾನದ ಮಂಡಳಿಯು ಭಾರತದ ನಿರ್ಧಾರದಿಂದ ಕೋಪಗೊಂಡಿದ್ದು, ಇದು ಉಭಯ ಕ್ರಿಕೆಟ್ ಬೋರ್ಡ್‌ಗಳ ನಡುವೆ ಜಗಳಕ್ಕೆ ಕಾರಣವಾಗಿದೆ.

ಇದೇ ವೇಳೆ ಇದೀಗ ಹರ್ಭಜನ್ ಸಿಂಗ್ ಏಷ್ಯಾಕಪ್ ಆತಿಥ್ಯ ವಹಿಸುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದು, 'ಭಾರತವು ಏಷ್ಯಾಕಪ್ ಆಡಲು ಪಾಕಿಸ್ತಾನಕ್ಕೆ ಹೋಗುವ ಅಗತ್ಯವಿಲ್ಲ, ಏಕೆಂದರೆ ಅಲ್ಲಿ ಯಾರೂ ಸುರಕ್ಷಿತವಾಗಿಲ್ಲ ಮತ್ತು ನಮಗೆ ಪ್ರಯಾಣಿಸಲು ಸಾಧ್ಯವಿಲ್ಲ. ತಮ್ಮ ಸ್ವಂತ ಜನರು ತಮ್ಮ ದೇಶದಲ್ಲಿ ಸುರಕ್ಷಿತವಾಗಿಲ್ಲದಿದ್ದಾಗ ಬೇರೆ ತಂಡಗಳು ಹೇಗೆ ಅಲ್ಲಿ ಸುರಕ್ಷಿತವಾಗಿರಬಲ್ಲವು ಎಂದು ಪ್ರಶ್ನಿಸಿದ್ದಾರೆ. 

ಅಂತೆಯೇ  ಯಾವುದೇ ಸರಣಿಗಾಗಿ ಪಾಕಿಸ್ತಾನಕ್ಕೆ ಹೋಗದಿರಲು ನಮ್ಮ ಸರ್ಕಾರ ಸರಿಯಾದ ನಿರ್ಧಾರವನ್ನು ತೆಗೆದುಕೊಂಡಿದೆ. ಏಕೆಂದರೆ ನಮ್ಮ ಮೊದಲ ಆದ್ಯತೆ ನಮ್ಮ ಆಟಗಾರರ ಸುರಕ್ಷತೆಯಾಗಿದೆ ಎಂದು ಹೇಳಿದ್ದಾರೆ.

ಲಂಕಾದಲ್ಲಿ ಟೂರ್ನಿ ಆಯೋಜಿಸಿ: ಅಖ್ತರ್
ಇನ್ನು ಇದೇ ವಿಚಾರವಾಗಿ ಪಾಕಿಸ್ತಾನದ ವೇಗಿ ಶೊಯೆಬ್ ಅಖ್ತರ್ ಕೂಡ ಪ್ರತಿಕ್ರಿಯೆ ನೀಡಿದ್ದು, 'ಏಷ್ಯಾಕಪ್ ಆತಿಥ್ಯಕ್ಕೆ ಸಂಬಂಧಿಸಿದಂತೆ ನಿರ್ಧಾರಕ್ಕೆ ಬರದಿದ್ದರೆ, ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ನನ್ನ ದೃಷ್ಟಿಯಲ್ಲಿ, ಏಷ್ಯಾಕಪ್ ಅನ್ನು ಭಾರತ ಅಥವಾ ದುಬೈನಲ್ಲಿ ಅಥವಾ ಪಾಕಿಸ್ತಾನದಲ್ಲಿ ಆಯೋಜಿಸಬಾರದು. ಶ್ರೀಲಂಕಾಗೆ ನೀಡಬೇಕು ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT