ಯುಪಿ ವಾರಿಯರ್ಸ್ ವಿರುದ್ಧ 127 ರನ್‌ಗಳಿಗೆ ಮುಂಬೈ ಇಂಡಿಯನ್ಸ್ ಆಲೌಟ್ 
ಕ್ರಿಕೆಟ್

WPL 2023: ಯುಪಿ ವಾರಿಯರ್ಸ್ ವಿರುದ್ಧ 127 ರನ್‌ಗಳಿಗೆ ಮುಂಬೈ ಇಂಡಿಯನ್ಸ್ ಆಲೌಟ್

ಶನಿವಾರ ಇಲ್ಲಿ ನಡೆದ ಯುಪಿ ವಾರಿಯರ್ಸ್ ವಿರುದ್ಧದ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 127 ರನ್‌ಗಳಿಗೆ ಆಲೌಟ್ ಆಯಿತು.

ನವಿ ಮುಂಬೈ: ಶನಿವಾರ ಇಲ್ಲಿ ನಡೆದ ಯುಪಿ ವಾರಿಯರ್ಸ್ ವಿರುದ್ಧದ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 127 ರನ್‌ಗಳಿಗೆ ಆಲೌಟ್ ಆಯಿತು.

ಮುಂಬೈ ಇಂಡಿಯನ್ಸ್ ಪರ ಆರಂಭಿಕ ಆಟಗಾರ್ತಿ ಹೇಲಿ ಮ್ಯಾಥ್ಯೂಸ್ 30 ಎಸೆತಗಳಲ್ಲಿ 35 ರನ್ ಗಳಿಸಿದರೆ, ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಇಸ್ಸಿ ವಾಂಗ್ ಕ್ರಮವಾಗಿ 25 ಮತ್ತು 32 ರನ್ ಗಳಿಸಿದರು.

ಆಡಿರುವ ಐದು ಪಂದ್ಯಗಳಲ್ಲಿ ಐದರಲ್ಲಿಯೂ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ಮುಂಬೈ ಇಂಡಿಯನ್ಸ್ ತಂಡ, ಟೂರ್ನಿಯಲ್ಲಿ ಅಜೇಯವಾಗಿ ಮುಂದುವರಿಯುವ ವಿಶ್ವಾಸದಲ್ಲಿದೆ. ಆದರೆ, 127 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಇತ್ತ ಯುಪಿ ವಾರಿಯರ್ಸ್ ಮೂರನೇ ಗೆಲುವಿಗಾಗಿ ಮುಂಬೈ ಇಂಡಿಯನ್ಸ್ ತಂಡವನ್ನು ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದೆ.
ಯುಪಿ ವಾರಿಯರ್ಸ್ ಪರ ಸೋಫಿ ಎಕ್ಲೆಸ್ಟೋನ್ 15 ರನ್ ನೀಡಿ ಮೂರು ವಿಕೆಟ್ ಪಡೆದರೆ, ರಾಜೇಶ್ವರಿ ಗಾಯಕ್ವಾಡ್ ಮತ್ತು ದೀಪ್ತಿ ಶರ್ಮಾ ತಲಾ ಎರಡು ವಿಕೆಟ್ ಪಡೆದರು.

ಹರ್ಮನ್‌ಪ್ರೀಯತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಆಡಿರುವ ಐದು ಪಂದ್ಯಗಳಲ್ಲಿ ಐದರಲ್ಲಿಯೂ ಗೆದ್ದಿದ್ದು 10 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಯುಪಿ ವಾರಿಯರ್ಸ್ ಆಡಿರುವ 5 ಪಂದ್ಯಗಳಲ್ಲಿ 2ರಲ್ಲಿ ಗೆಲುವು ಸಾಧಿಸಿದ್ದು 3 ಪಂದ್ಯಗಳ ಸೋಲಿನೊಂದಿಗೆ 4 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT