ಡೆಲ್ಲಿ ಕ್ಯಾಪಿಟಲ್ಸ್ ಗೆ ಜಯ 
ಕ್ರಿಕೆಟ್

WPL: ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಮಹಿಳೆಯರಿಗೆ 9 ವಿಕೆಟ್ ಗಳ ಭರ್ಜರಿ ಜಯ

ಮಹಿಳಾ ಪ್ರೀಮೀಯರ್ ಲೀಗ್ ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಮಹಿಳೆಯರ ತಂಡ 9 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿದೆ.

ಮುಂಬೈ: ಮಹಿಳಾ ಪ್ರೀಮೀಯರ್ ಲೀಗ್ ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಮಹಿಳೆಯರ ತಂಡ 9 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿದೆ.

ಮುಂಬೈ ನೀಡಿದ 110 ರನ್ ಗಳ ಸಾಮಾನ್ಯ ಗುರಿಯನ್ನು ಬೆನ್ನು ಹತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಕೇವಲ 9 ಓವರ್ ನಲ್ಲಿ 1 ವಿಕೆಟ್ ಕಳೆದುಕೊಂಡು 110ರನ್ ಗಳಿಸಿ 9 ವಿಕೆಟ್  ಗಳ ಅಂತರದ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಬೌಲರ್ ಗಳ ಆರ್ಭಟಕ್ಕೆ ತತ್ತರಿಸಿತು. ಕೇವಲ 10 ರನ್ ಗಳ ಅಂತರದಲ್ಲಿ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಬಳಿಕ ಕ್ರೀಸ್ ಗೆ ಬಂದ ಹರ್ಮನ್ ಪ್ರೀತ್ ಕೌರ್ 23 ರನ್ ಗಳಿಸಿ ಭರವಸೆ ಮೂಡಿಸಿದ್ದರಾದರೂ ಶಿಖಾ ಪಾಂಡೇ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ಬಳಿಕ ಪೂಜಾ ವಸ್ತ್ರಾಕರ್ (26 ರನ್) ಮತ್ತು ವಾಂಗ್ (23 ರನ್) ಜೋಡಿ ತಂಡದ ಮೊತ್ತ 100 ಗಡಿ ದಾಟಲು ನೆರವಾದರು. ಅಂತಿಮವಾಗಿ ನಿಗದಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 109ರನ್ ಗಳಿಸಿತು. ಡೆಲ್ಲಿ ಪರ ಮರಿಜಾನ್ನೆ ಕ್ಯಾಪ್, ಶಿಖಾ ಪಾಂಡೆ ಮತ್ತು ಜೋನಾಸೆನ್ ತಲಾ 2 ವಿಕೆಟ್ ಪಡೆದರು.

ಈ ಸಾಧಾರಣ ಮೊತ್ತವನ್ನು ಬೆನ್ನು ಹತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಾಯಕಿ ಮೆಗ್ ಲ್ಯಾನಿಂಗ್ (ಅಜೇಯ 32 ರನ್), ಶಫಾಲಿ ವರ್ಮಾ (33ರನ್) ಮತ್ತು ಆಲಿಸ್ ಕ್ಯಾಪ್ಸಿ (ಅಜೇಯ 38 ರನ್) ಬ್ಯಾಟಿಂಗ್ ನೆರವಿನಿಂದ 110 ರನ್ ಗಳಿಸಿ 9 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT