ಕ್ರಿಕೆಟ್

ಭಾರತದ ವಿರುದ್ಧ ಸರಣಿ ಜಯ; ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಅಗ್ರ ಸ್ಥಾನಕ್ಕೆ

Srinivasamurthy VN

ಚೆನ್ನೈ: ಭಾರತದ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಏಕದಿನ ಸರಣಿ ವಶಪಡಿಸಿಕೊಂಡ ಆಸ್ಟ್ರೇಲಿಯಾ ತಂಡ ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ 270 ರನ್ ಗಳ ಸವಾಲಿನ ಗುರಿ ಬೆನ್ನು ಹತ್ತಿದ 49.1 ಓವರ್ ನಲ್ಲಿ 248 ರನ್ ಗಳಿಗೆ ಆಲೌಟ್ ಆಗುವ ಮೂಲಕ 21 ರನ್ ಅಂತರದಲ್ಲಿ ಹೀನಾಯ ಸೋಲು ಕಂಡಿತು. ಅಂತೆಯೇ 3 ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಸೋತಿತು. ಈ ಪಂದ್ಯದ ಗೆಲುವಿನೊಂದಿಗೆ ಆಸ್ಚ್ರೇಲಿಯಾ ತಂಡ ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ. 

ಈ ಸರಣಿ ಗೆಲುವಿನೊಂದಿಗೆ ಆಸಿಸ್ ಪಡೆ ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ತನ್ನ ಅಂಕಗಳಿಕೆಯನ್ನು 113ಕ್ಕೆ ಏರಿಕೆ ಮಾಡಿಕೊಳ್ಳುವ ಮೂಲಕ ಅಗ್ರ ಸ್ಥಾನಕ್ಕೇರಿದೆ. ಇಷ್ಟೇ ಅಂಕಗಳನ್ನು ಹೊಂದು ಅಗ್ರ ಸ್ಥಾನದಲ್ಲಿದ್ದ ಭಾರತ ಇದೀಗ 2ನೇ ಸ್ಥಾನಕ್ಕೆ ಕುಸಿದಿದೆ. 111 ಅಂಕಗಳನ್ನು ಹೊಂದಿರುವ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳು 3 ಮತ್ತು 4ನೇ ಸ್ಥಾನದಲ್ಲಿವೆ. 106 ಅಂಕಗಳನ್ನು ಹೊಂದಿರುವ ಪಾಕಿಸ್ತಾನ 5ನೇ ಸ್ಥಾನದಲ್ಲಿದೆ.

SCROLL FOR NEXT