ರಿಷಭ್ ಪಂತ್ ಅವರೊಂದಿಗೆ ರೈನಾ, ಶ್ರೀಶಾಂತ್ , ಭಜ್ಜಿ 
ಕ್ರಿಕೆಟ್

ರಿಷಭ್ ಪಂತ್ ಭೇಟಿಯಾದ ರೈನಾ, ಭಜ್ಜಿ, ಶ್ರೀಶಾಂತ್! ಹೇಳಿದಿಷ್ಟು...

ಮಾಜಿ ಕ್ರಿಕೆಟ್ ಆಟಗಾರರಾದ ಸುರೇಶ್ ರೈನಾ, ಹರ್ಭಜನ್ ಸಿಂಗ್ ಮತ್ತು ಶ್ರೀಶಾಂತ್  ಅವರು ಅನಿರೀಕ್ಷಿತವಾಗಿ ರಿಷಭ್  ಪಂತ್ ಅವರನ್ನು ಭೇಟಿಯಾಗಿದ್ದಾರೆ.

ನವದೆಹಲಿ: ಮಾಜಿ ಕ್ರಿಕೆಟ್ ಆಟಗಾರರಾದ ಸುರೇಶ್ ರೈನಾ, ಹರ್ಭಜನ್ ಸಿಂಗ್ ಮತ್ತು ಶ್ರೀಶಾಂತ್  ಅವರು ಅನಿರೀಕ್ಷಿತವಾಗಿ  ರಿಷಭ್  ಪಂತ್ ಅವರನ್ನು ಭೇಟಿಯಾಗಿದ್ದಾರೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ತೀವ್ರ ರೀತಿಯಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಪಂತ್ ಅವರನ್ನು ಈ ಮೂವರು ಆಟಗಾರರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಪಂತ್ ಜೊತೆಗೆ ಮೂವರು ಖುಷಿಯಿಂದ ಕ್ಯಾಮರಾಗೆ ಪೋಸ್ ಕೊಟ್ಟಿದ್ದಾರೆ.ಈ ಫೋಟೋವನ್ನು ರೈನಾ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಭ್ರಾತೃತ್ವವೇ ಸರ್ವಸ್ವ ..ಕುಟುಂಬವೇ ನಮ್ಮ ಹೃದಯ ಇರುವಲ್ಲಿ...ನಮ್ಮ ಸಹೋದರ ರಿಷಭ್ ಪಂತ್ ಅವರಿಗೆ ಶುಭವಾಗಲಿ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುವುದಾಗಿ ಅವರು ಬರೆದುಕೊಂಡಿದ್ದಾರೆ. 

ನಿಮ್ಮ ಕಂಬ್ಯಾಕ್ ಗಾಗಿ ಕಾಯುತ್ತಿದ್ದೇನೆ' ಎಂದು ಹರ್ಭಜನ್ ಟ್ವೀಟ್ ಮಾಡಿದ್ದಾರೆ. ಫೋಟೋದಲ್ಲಿ ಪಂತ್ ಅವರ ಬಲ ಮೊಣಕಾಲು ಬ್ಯಾಂಡೇಜ್ ಮಾಡಿರುವುದನ್ನು ನೋಡಬಹುದು. 25 ವರ್ಷದ ಪಂತ್ ಅವರಿಗೆ ಜನವರಿಯಲ್ಲಿ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ