ಹಾರ್ದಿಕ್ ಪಾಂಡ್ಯ-ರೋಹಿತ್ ಶರ್ಮಾ 
ಕ್ರಿಕೆಟ್

ಐಸಿಸಿ ಏಕದಿನ ರ್ಯಾಂಕಿಂಗ್ ಶ್ರೇಯಾಂಕದಲ್ಲಿ ನಾಯಕ ರೋಹಿತ್ ಶರ್ಮಾ-ಹಾರ್ದಿಕ್ ಪಾಂಡ್ಯಗೆ ಮುನ್ನಡೆ

ಐಸಿಸಿ ಏಕದಿನ ರ್ಯಾಂಕಿಂಗ್ ಶ್ರೇಯಾಂಕ ಬಿಡುಗಡೆಯಾಗದಿದ್ದು ಭಾರತೀಯ ನಾಯಕ ರೋಹಿತ್ ಶರ್ಮಾ ಎಂಟನೇ ಸ್ಥಾನಕ್ಕೆ ಏರಿದ್ದಾರೆ. ಇನ್ನು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಬೌಲರ್‌ಗಳ ಪಟ್ಟಿಯಲ್ಲಿ 10 ಸ್ಥಾನ ಮುನ್ನಡೆ ಸಾಧಿಸಿದಿ 76ನೇ ಸ್ಥಾನಕ್ಕೆ ತಲುಪಿದ್ದಾರೆ. 

ದುಬೈ: ಐಸಿಸಿ ಏಕದಿನ ರ್ಯಾಂಕಿಂಗ್ ಶ್ರೇಯಾಂಕ ಬಿಡುಗಡೆಯಾಗದಿದ್ದು ಭಾರತೀಯ ನಾಯಕ ರೋಹಿತ್ ಶರ್ಮಾ ಎಂಟನೇ ಸ್ಥಾನಕ್ಕೆ ಏರಿದ್ದಾರೆ. ಇನ್ನು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಬೌಲರ್‌ಗಳ ಪಟ್ಟಿಯಲ್ಲಿ 10 ಸ್ಥಾನ ಮುನ್ನಡೆ ಸಾಧಿಸಿದಿ 76ನೇ ಸ್ಥಾನಕ್ಕೆ ತಲುಪಿದ್ದಾರೆ. 

ಶುಭಮನ್ ಗಿಲ್ ಐದನೇ ಸ್ಥಾನದಲ್ಲಿ ಭಾರತದ ಅತ್ಯುತ್ತಮ ಬ್ಯಾಟ್ಸ್‌ಮನ್ ಆಗಿ ಮುಂದುವರಿದರೆ, ವಿರಾಟ್ ಕೊಹ್ಲಿ ಏಳನೇ ಸ್ಥಾನದಲ್ಲಿದ್ದಾರೆ. ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಪಾಕಿಸ್ತಾನದ ಬಾಬರ್ ಅಜಮ್ ಅಗ್ರ ಸ್ಥಾನದಲ್ಲಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ ಮೂರನೇ ಸ್ಥಾನದಲ್ಲಿದ್ದಾರೆ. ಅಗ್ರ 10 ಬೌಲರ್‌ಗಳ ಪಟ್ಟಿಯಲ್ಲಿರುವ ಏಕೈಕ ಭಾರತೀಯ. 

ಇದರಲ್ಲಿ ಆಸ್ಟ್ರೇಲಿಯಾದ ಜೋಶ್ ಹೇಜಲ್‌ವುಡ್ ಅಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಲೆಗ್ ಸ್ಪಿನ್ನರ್ ಆಡಮ್ ಝಂಪಾ ಅವರು ಚೆನ್ನೈ ಏಕದಿನ ಪಂದ್ಯದಲ್ಲಿ ಭಾರತ ವಿರುದ್ಧ 45ಕ್ಕೆ 4 ವಿಕೆಟ್ ಕಬಳಿಸಿ ವೃತ್ತಿಜೀವನದ ಅತ್ಯುತ್ತಮ ಆರನೇ ಸ್ಥಾನಕ್ಕೇರಿದ್ದಾರೆ.

ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಮಿಚೆಲ್ ಮಾರ್ಷ್ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ನಾಲ್ಕು ಸ್ಥಾನಗಳನ್ನು ಸುಧಾರಿಸಿಕೊಂಡು 51ನೇ ಸ್ಥಾನಕ್ಕೆ ತಲುಪಿದ್ದಾರೆ. ಅವರು ಮೂರು ಪಂದ್ಯಗಳ ಸರಣಿಯಲ್ಲಿ 194 ರನ್ ಗಳಿಸಿದರು. ರಶೀದ್ ಖಾನ್ ಅವರು T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಪಾಕಿಸ್ತಾನದ ವಿರುದ್ಧ 2-1 ಸರಣಿಯ ಗೆಲುವಿನ ಸಮಯದಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದ ನಂತರ ಈ ಸ್ವರೂಪದಲ್ಲಿ ಅಗ್ರ ಬೌಲರ್ ಆಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್