ಶುಭ್ ಮನ್ ಗಿಲ್ ಬ್ಯಾಟಿಂಗ್ 
ಕ್ರಿಕೆಟ್

ಐಪಿಎಲ್ 2023: ಉದ್ಘಾಟನಾ ಪಂದ್ಯದಲ್ಲಿ 5 ವಿಕೆಟ್ ಗಳಿಂದ ಸಿಎಸ್ ಕೆ ಮಣಿಸಿ ಗುಜರಾತ್ ಟೈಟನ್ಸ್ ಶುಭಾರಂಭ

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಐಪಿಎಲ್ 2023 ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ 5 ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದೆ. ಈ ಮೂಲಕ ಶುಭಾರಂಭ ಮಾಡಿದೆ.

ಅಹಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಐಪಿಎಲ್ 2023 ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ 5 ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದೆ. ಈ ಮೂಲಕ ಶುಭಾರಂಭ ಮಾಡಿದೆ.

ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿತು. ಚೆನ್ನೈ ಸೂಪರ್ ಕಿಂಗ್ಸ್ ಪರ ಋತುರಾಜ್ ಗಾಯಕ್ವಾಡ್ 50 ಎಸೆತಗಳಲ್ಲಿ ಭರ್ಜರಿ 92 ರನ್ ಗಳಿಸಿದರೆ, ನಾಯಕ ಎಂಎಸ್ ಧೋನಿ ಅಜೇಯ 14 ರನ್ ಗಳಿಸಿದರು.

ಉಳಿದಂತೆ ಮೋಯಿನ್ ಅಲಿ 23, ಬೆನ್ ಸ್ಟೋಕ್ಸ್ 7, ಅಂಬಟಿ ರಾಯುಡು 12, ಶಿವನ್ ದುಬೆ 19 ರನ್ ಗಳಿಸಿದರು.  ಗುಜರಾತ್ ಟೈಟನ್ಸ್ ಪರ ಮೊಹಮ್ಮದ್ ಶಮಿ, ರಶೀಧ್ ಖಾನ್ , ಅಲ್ಜರಿ ಜೋಸೆಪ್ ತಲಾ 2 ವಿಕೆಟ್ ಪಡೆದರೆ, ಜೊಸ್ ಲಿಟ್ಲ್ 1 ವಿಕೆಟ್ ಪಡೆದರು.

ಚೆನ್ನೈ ಸೂಪರ್ ಕಿಂಗ್ಸ್ ನೀಡಿದ 179 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಗುಜರಾತ್ ಟೈಟನ್ಸ್  19.2 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು. ಆರಂಭಿಕ ಆಟಗಾರರಾದ ವೃದ್ಧಿಮನ್ ಶಹಾ 25, ಶುಭ್ ಮನ್ ಗಿಲ್ 63, ಸಾಯಿ ಸುದರ್ಶನ್ 22 ಮತ್ತು ವಿಜಯ್ ಶಂಕರ್ 27 ರನ್ ಗಳಿಸಿದರು.  ಮೂಲಕ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಗೆಲುವಿನ ನಗೆ ಬೀರಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT