ಡೆಲ್ಲಿ ಕ್ಯಾಪಿಟಲ್ಸ್ 
ಕ್ರಿಕೆಟ್

ಐಪಿಎಲ್ 2023: ಗುಜರಾತ್ ಟೈಟನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ 5 ರನ್ ಗಳ ರೋಚಕ ಗೆಲುವು!

ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್ 2023ರ ಆವೃತ್ತಿಯ 44ನೇ ಪಂದ್ಯದಲ್ಲಿ ಗುಜರಾತ್  ಟೈಟನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 5 ರನ್ ಗಳಿಂದ ರೋಚಕ ಗೆಲುವು ಸಾಧಿಸಿದೆ.

ಅಹಮದಾಬಾದ್: ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್ 2023ರ ಆವೃತ್ತಿಯ 44ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 5 ರನ್ ಗಳಿಂದ ರೋಚಕ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 130 ರನ್ ಗಳಿಸಿತು. ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಶೂನ್ಯಕ್ಕೆ ಔಟಾದರೆ, ಡೇವಿಡ್ ವಾರ್ನರ್ ಕೇವಲ 2 ರನ್ ಗಳಿಗೆ  ರನ್ ಔಟ್ ಆಗುವ ಮೂಲಕ ತಂಡ ಆರಂಭಿಕ ಆಘಾತ ಅನುಭವಿಸಿತು. ಯಾಮ್ ಗಾರ್ಗ್ 10, ರಿಲೆ ರೊಸೋ 8, ಮನೀಶ್ ಪಾಂಡೆ 1 ರನ್ ಗಳಿಗೆ ಫೆವಿಲಿಯನ್ ಗೆ ನಿರ್ಗಮಿಸಿದರು.

ನಂತರ ಜೊತೆಯಾದ ಅಕ್ಸರ್ ಪಟೇಲ್ 27, ಅಮನ್ ಹಕ್ಕಿಂ ಖಾನ್ ಭರ್ಜರಿ 51 ಹಾಗೂ ರಿಪಲ್ ಪಟೇಲ್ 23 ರನ್ ಗಳಿಸುವ ಮೂಲಕ ತಂಡ 130 ರನ್ ಗಳಿಸಲು  ಪ್ರಮುಖ ಕೊಡುಗೆ ನೀಡಿದರು. ಗುಜರಾತ್ ಟೈಟನ್ಸ್ ಪರ  ಮೊಹಮ್ಮದ್ ಶಮಿ  4 ವಿಕೆಟ್ ಕಬಳಿಸಿದರೆ, ಮೊಹಿತ್ ಶರ್ಮಾ 2, ರಶೀದ್ ಖಾನ್ 1 ವಿಕೆಟ್ ಪಡೆದರು.

ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 131 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಗುಜರಾತ್ ಟೈಟನ್ಸ್  ಪರ ನಾಯಕ ಹಾರ್ದಿಕ್ ಪಾಂಡ್ಯ ಭರ್ಜರಿ 59 ರನ್ ಗಳಿಸಿದರೆ, ಅಭಿನವ್ ಮನೋಹರ್ 26, ರಾಹುಲ್ ತೇವಾಟಿಯಾ 20 ರನ್ ಗಳಿಸಿದರು. ಉಳಿದ ಯಾವುದೇ ಆಟಗಾರರು ಎರಡಂಕಿ ದಾಟುವಲ್ಲಿ ವಿಫಲವಾದರು. ಇದರಿಂದಾಗಿ 6 ವಿಕೆಟ್ ನಷ್ಟಕ್ಕೆ 125 ರನ್ ಗಳಿಸುವ ಮೂಲಕ ಗುಜರಾತ್ ಟೈಟನ್ಸ್ ತವರಿನಲ್ಲಿಯೇ ಸೋಲಿಗೆ ಶರಣಾಯಿತು.

ಡೆಲ್ಲಿ ಕ್ಯಾಪಿಟಲ್ಸ್ ಪರ ಖಲೀಲ್ ಅಹ್ಮದ್ ಹಾಗೂ ಇಶಾಂತ್ ಶರ್ಮಾ ತಲಾ 2 ವಿಕೆಟ್ ಪಡೆದರೆ, ನಾರ್ಟೋಜ್, ಕುಲದೀಪ್ ಯಾದವ್ ತಲಾ 2 ವಿಕೆಟ್ ಕಬಳಿಸಿದರು. ಗುಜರಾತ್ ಟೈಟನ್ಸ್ ಪರ 4 ವಿಕೆಟ್ ಪಡೆದ ಮೊಹಮ್ಮದ್ ಶಮಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT