ಕ್ರಿಕೆಟ್

RCB vs LSG: ಮೈದಾನದಲ್ಲೇ ಜಗಳ; ಕಿಂಗ್ ಕೊಹ್ಲಿಗೆ ಒಂದು ಕೋಟಿ ರೂ. ದಂಡ; ಗಂಭೀರ್ ಕಳೆದುಕೊಂಡಿದ್ದೆಷ್ಟು?

Ramyashree GN

ಲಖನೌ: ಸೋಮವಾರ ಇಲ್ಲಿ ನಡೆದ ಆರ್‌ಸಿಬಿ vs ಎಲ್‌ಎಸ್‌ಜಿ ಪಂದ್ಯದ ನಂತರ ಮಾತಿನ ಚಕಮಕಿಗಿಳಿದ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ಅವರಿಗೆ ಪಂದ್ಯದ ಸಂಭಾವನೆಯಲ್ಲಿ ಶೇ 100ರಷ್ಟು ದಂಡ ವಿಧಿಸಲಾಗಿದೆ. ಇದರೊಂದಿಗೆ ಲಖನೌ ವೇಗಿ ನವೀನ್ ಉಲ್ ಹಕ್ ಅವರಿಗೂ ಪಂದ್ಯದ ಸಂಭಾವನೆಯ ಶೇ 50 ರಷ್ಟು ದಂಡ ವಿಧಿಸಲಾಗಿದೆ.

ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರ ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ಪಂದ್ಯದ ವೇಳೆ ಐಪಿಎಲ್ ಕೋಡ್ ಆಫ್ ಕಂಡಕ್ಟ್ ಅನ್ನು ಉಲ್ಲಂಘಿಸಿದ್ದಕ್ಕಾಗಿ ಲಖನೌ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರಿಗೆ ದುಬಾರಿ ದಂಡ ವಿಧಿಸಲಾಗಿದೆ. 

ಐಪಿಎಲ್ ನೀತಿ ಸಂಹಿತೆಯ ಕಲಂ 2.21ರ ಅಡಿಯಲ್ಲಿ ಎರಡನೇ ಹಂತದ ಅಪರಾಧವನ್ನು ಗಂಭೀರ್ ಒಪ್ಪಿಕೊಂಡಿದ್ದಾರೆ ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಿದೆ.

ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಗೆ ಪಂದ್ಯ ಶುಲ್ಕದ ಶೇ 100ರಷ್ಟು ದಂಡ ವಿಧಿಸಲಾಗಿದೆ. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.21ರ ಅಡಿಯಲ್ಲಿ 2ನೇ ಹಂತದ ಅಪರಾಧವನ್ನು ಕೊಹ್ಲಿ ಒಪ್ಪಿಕೊಂಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಲಖನೌ ಸೂಪರ್ ಜೈಂಟ್ಸ್ ಬೌಲರ್ ನವೀನ್-ಉಲ್-ಹಕ್ ಅವರ ಪಂದ್ಯ ಶುಲ್ಕದ ಶೇ 50ರಷ್ಟು ದಂಡ ವಿಧಿಸಲಾಗಿದೆ. ನವೀನ್-ಉಲ್-ಹಕ್ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.21 ರ ಅಡಿಯಲ್ಲಿ ಮೊದಲನೇ ಹಂತದ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಎಂದು ಅದು ತಿಳಿಸಿದೆ.

ಈ ಮೂಲಕ ಕಿಂಗ್ ಕೊಹ್ಲಿ 1.07 ಕೋಟಿ ರೂ. ದಂಡವನ್ನು ಪಾವತಿಸಬೇಕಿದ್ದರೆ, ಗೌತಮ್ ಗಂಭೀರ್ ಅವರು 25 ಲಕ್ಷ ರೂ. ಪಾವಿತಿಸಬೇಕಿದೆ. ಲಖನೌ ಸೂಪರ್ ಜೈಂಟ್ಸ್ ತಂಡದ ಆಟಗಾರ ನವೀನ್ ಉಲ್ ಹಕ್ 1.79 ಕೋಟಿ ರೂ. ಪಾವತಿಸಬೇಕಿದೆ.

SCROLL FOR NEXT