ಗಾಯಗೊಂಡ ಕೆಎಲ್ ರಾಹುಲ್ 
ಕ್ರಿಕೆಟ್

ಐಪಿಎಲ್ 2023: ಲಕ್ನೋ ತಂಡಕ್ಕೆ ಭಾರಿ ಆಘಾತ, ನಾಯಕ ಕೆಎಲ್ ರಾಹುಲ್ ಗೆ ಗಾಯ, ಟೂರ್ನಿಯಿಂದಲೇ ಔಟ್

ಹಾಲಿ ಐಪಿಎಲ್ ಟೂರ್ನಿ ನಿರ್ಣಾಯಕ ಘಟ್ಟಕ್ಕೆ ಹತ್ತಿರವಾಗುತ್ತಿರುವಂತೆಯೇ ಇತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಭಾರಿ ಆಘಾತ ಎದುರಾಗಿದ್ದು, ತಂಡದ ನಾಯಕ ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದ ಟೂರ್ನಿಯಿಂದಲೇ ಔಟ್ ಆಗಿದ್ದಾರೆ.

ಬೆಂಗಳೂರು: ಹಾಲಿ ಐಪಿಎಲ್ ಟೂರ್ನಿ ನಿರ್ಣಾಯಕ ಘಟ್ಟಕ್ಕೆ ಹತ್ತಿರವಾಗುತ್ತಿರುವಂತೆಯೇ ಇತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಭಾರಿ ಆಘಾತ ಎದುರಾಗಿದ್ದು, ತಂಡದ ನಾಯಕ ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದ ಟೂರ್ನಿಯಿಂದಲೇ ಔಟ್ ಆಗಿದ್ದಾರೆ.

ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಫೀಲ್ಡಿಂಗ್ ವೇಳೆ ಕೆಎಲ್ ರಾಹುಲ್ ಗಾಯಕ್ಕೆ ತುತ್ತಾಗಿದ್ದರು. ಆ ಪಂದ್ಯದಲ್ಲಿ ಫೀಲ್ಡಿಂಗ್ ಮಾಡದೆ ಹೊರಗುಳಿದ ಕೆಎಲ್ ರಾಹುಲ್ ಕೊನೆಯ ಕ್ಷಣದಲ್ಲಿ ಬ್ಯಾಟಿಂಗ್‌ಗೆ ಇಳಿದಿದ್ದರು.ಇದೀಗ ಕೆಎಲ್ ರಾಹುಲ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿಯುವುದು ಅನಿವಾರ್ಯವಾಗಿದೆ.

ರಾಹುಲ್ ಅವರು ಲಕ್ನೋ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯವನ್ನು ವೀಕ್ಷಿಸಲಿದ್ದಾರೆ ಆದರೆ ಗುರುವಾರ ಮುಂಬೈಗೆ ತೆರಳಲಿದ್ದು, ಅಲ್ಲಿ ಅವರು ತಮ್ಮ ತೊಡೆಯ ಸ್ಕ್ಯಾನ್‌ಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಬೆಂಗಳೂರಿನ ನ್ಯಾಶನಲ್ ಕ್ರಿಕೆಟ್ ಅಕಾಡೆಮಿ(ಎನ್‌ಸಿಎ)ಯ ವೈದ್ಯಕೀಯ ತಂಡ ಕೆಎಲ್ ರಾಹುಲ್ ಅವರ ಫಿಟ್‌ನೆಸ್ ಪರೀಕ್ಷಿಸಲಿದ್ದು ಟೂರ್ನಿಯ ಉಳಿದ ಪಂದ್ಯಗಳಿಗೆ ರಾಹುಲ್ ಲಭ್ಯತೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ವರದಿ ಮಾಡಿದೆ. ಹೀಗಾಗಿ ಕೆಎಲ್ ರಾಹುಲ್ ಟೂರ್ನಿಯ ಉಳಿದ ಪಂದ್ಯಗಳಿಗೆ ಲಭ್ಯವಾಗುವ ಬಗ್ಗೆ ಇನ್ನಷ್ಟೇ ಸ್ಪಷ್ಟ ಮಾಹಿತಿಗಳು ಲಭ್ಯವಾಗಲಿದೆ.

ಕೃಣಾಲ್ ಪಾಂಡ್ಯ ಸಾರಥ್ಯ
ಇನ್ನು ರಾಹುಲ್ ಅನುಪಸ್ಥಿತಿಯಲ್ಲಿ ತಂಡದ ಮತ್ತೋರ್ವ ಹಿರಿಯ ಆಟಗಾರ ಕೃಣಾಲ್ ಪಾಂಡ್ಯಾಗೆ ತಂಡದ ಸಾರಥ್ಯ ನೀಡುವ ಸಾಧ್ಯತೆ ಇದೆ. ಅನುಭವಿ ಆಟಗಾರ ಕೆಎಲ್ ರಾಹುಲ್ ಅವರ ಅಲಭ್ಯತೆಯಲ್ಲಿ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಮುನ್ನಡೆಸಲಿದ್ದಾರೆ. ಕಳೆದ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿಯೂ ಕೃನಾಲ್ ಮುನ್ನಡೆಸುವ ಜವಾಬ್ಧಾರಿ ವಹಿಸಿಕೊಂಡಿದ್ದರು.

WTC ಫೈನಲ್ ಗೂ ಅನುಮಾನ
ಇನ್ನು ಐಪಿಎಲ್ ಟೂರ್ನಿ ಬಳಿಕ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯವನ್ನಾಡಲಿದ್ದು ಈ ಪಂದ್ಯದಿಂದಲೂ ರಾಹುಲ್ ಹೊರಗುಳಿಯುವ ಸಾಧ್ಯತೆ ಇದೆ. ಹೀಗಾಗಿ ರಾಹುಲ್ ಆದಷ್ಟು ಬೇಗ ಚೇತರಿಸಿಕೊಳ್ಳಬೇಕಿದೆ.

ಲಕ್ನೋಗೆ 2ನೇ ಆಘಾತ
ಇನ್ನು ಈ ಹಿಂದೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಅನುಭವಿ ವೇಗಿ ಜಯ್‌ದೇವ್ ಉನಾದ್ಕತ್ ಅಭ್ಯಾಸ ನಡೆಸುವ ಸಂದರ್ಭದಲ್ಲಿ ಭುಜದ ನೋವಿಗೆ ತುತ್ತಾಗಿದ್ದು ಉಳಿದ ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಆಡಲು ಉನಾದ್ಕಟ್ ಅಸಮರ್ಥರಾಗಿರುವ ಕಾರಣ ಟೂರ್ನಿಯಿಂದ ಹೊರಗುಳಿಯುವಂತಾಗಿದೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಈ ಆವೃತ್ತಿಯ ಮುಂದಿನ ಪಂದ್ಯಗಳಲ್ಲಿ ಅನುಭವಿ ವೇಗಿಯ ಸೇವೆಯಿಂದ ವಂಚಿತವಾಗಲಿದೆ.

ಇಂದು ಸಿಎಸ್ ಕೆ ವಿರುದ್ಧ ಸೆಣಸು
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಅಂಕಪಟ್ಟಿಯಲ್ಲಿ ಎರಡು ತಂಡಗಳು ಕೂಡ ಉತ್ತಮ ಸ್ಥಿತಿಯಲ್ಲಿದ್ದು ಮೂರು ಹಾಗೂ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ಈ ಸ್ಥಾನವನ್ನು ಉತ್ತಮ ಗೊಳಿಸುವ ಅವಕಾಶ ಇಂದು ಎರಡು ತಂಡಗಳಿಗೂ ಇದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂನ ಮಧ್ಯಂತರ ಆದೇಶ ವಿದ್ಯಾರ್ಥಿಗಳ ವಿರುದ್ಧ ದುರ್ಬಳಕೆಯಾಗುವ ಸಾಧ್ಯತೆ: 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ- ದೀಪ್ಕೆ ವಾರ್ನಿಂಗ್!

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

Gen-Z ಗಳಿಗೆ ʻಜನರೇಷನ್‌ ಗಟರ್‌ʼಎಂದ ಕಂಗನಾ ರಣಾವತ್; ಅವರನ್ನು ಬಿಜೆಪಿಯೇ ಗಂಭೀರವಾಗಿ ಪರಿಗಣಿಸಿಲ್ಲ, ಸಿಜೆಪಿ ತಿರುಗೇಟು! Video

ದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!

NEET ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ಮುಂದು!