ಕೆಕೆಆರ್ ಆಟಗಾರರ ಸಂಭ್ರಮ 
ಕ್ರಿಕೆಟ್

ಐಪಿಎಲ್ 2023: ರೋಚಕ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಕೆಕೆಆರ್ ಗೆ 5 ರನ್ ಗಳ ಭರ್ಜರಿ ಜಯ

ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಐಪಿಎಲ್ 2023 ಆವೃತ್ತಿಯ 47ನೇ ಪಂದ್ಯದಲ್ಲಿ ರಿಂಕು ಸಿಂಗ್ ಮತ್ತು ಶಾರ್ದೂಲ್ ಠಾಕೂರ್ ಅವರ ಅಮೋಘ ಪ್ರದರ್ಶನದಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ, ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ 5 ರನ್ ಗಳ ರೋಚಕ ಗೆಲುವು ದಾಖಲಿಸಿದೆ.

ಹೈದ್ರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಐಪಿಎಲ್ 2023 ಆವೃತ್ತಿಯ 47ನೇ ಪಂದ್ಯದಲ್ಲಿ ರಿಂಕು ಸಿಂಗ್ ಮತ್ತು ಶಾರ್ದೂಲ್ ಠಾಕೂರ್ ಅವರ ಅಮೋಘ ಪ್ರದರ್ಶನದಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ, ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ 5 ರನ್ ಗಳ ರೋಚಕ ಗೆಲುವು ದಾಖಲಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ಕೆಕೆಆರ್ ಪರ ಆರಂಭಿಕ ಆಟಗಾರರಾದ ಜಾಸನ್ ರಾಯ್ 20, ನಿತೀಶ್ ರಾಣಾ 42, ರಿಂಕು ಸಿಂಗ್ 46, ಆಂಡ್ರೆ ರಸ್ಸೆಲ್ 24, ಅನುಕುಲ್ ರಾಯ್ 13 ರನ್ ಗಳಿಸಿದರು.

ಸನ್ ರೈಸರ್ಸ್ ಹೈದ್ರಾಬಾದ್ ಪರ ಮಾರ್ಕೊ ಜಾನ್ಸನ್ 2 ವಿಕೆಟ್ ಪಡೆದರೆ, ಭುವನೇಶ್ವರ್ ಕುಮಾರ್, ಕಾರ್ತಿಕ್ ತ್ಯಾಗಿ, ಅಡೆನ್ ಮಾರ್ಕಂ, ಮಾಯಾಂಕ್ ಮಾರ್ಕೆಂಡೆ ತಲಾ 1 ವಿಕೆಟ್ ಕಬಳಿಸಿದರು. ಕೆಕೆಆರ್ ನೀಡಿದ 172 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಸನ್ ರೈಸರ್ಸ್ ಹೈದ್ರಾಬಾದ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಲಷ್ಟೇ ಶಕ್ತವಾಯಿತು.

 ಸನ್ ರೈಸರ್ಸ್ ಹೈದ್ರಾಬಾದ್ ಪರ ಅಭಿಷೇಖ್ ಶರ್ಮಾ 9, ಮಾಯಂಕ್ ಅಗರ್ ವಾಲ್ 20, ಮಾರ್ಕಂ 41, ಹೆನ್ರಿಚ್ ಕ್ಲಾಸೆನ್ 36 ರನ್, ಭುವನೇಶ್ವರ್ ಕುಮಾರ್ 5 ರನ್ ಗಳಿಸಿದರು. ಇದರಿಂದಾಗಿ ಕೆಕೆಆರ್ 5 ರನ್ ಗಳಿಂದ ರೋಚಕ ಗೆಲುವು ದಾಖಲಿಸಿತು.  ಕೆಕೆಆರ್ ಪರ 4 ಓವರ್ ಗಳಲ್ಲಿ 20 ರನ್ ನೀಡಿ 1 ವಿಕೆಟ್ ಕಬಳಿಸುವ ಮೂಲಕ ಪಂದ್ಯ ಗೆಲ್ಲಲು ಕಾರಣರಾದ ವರುಣ್ ಚಕ್ರವರ್ತಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT