ಗುಜರಾತ್ ಟೈಟನ್ಸ್ ನಾಯಕ ಹಾರ್ದಿಕ್ ಪಾಂಡ್ಯ 
ಕ್ರಿಕೆಟ್

ಐಪಿಎಲ್ 2023: ರಾಜಸ್ಥಾನ ರಾಯಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ ಗೆ 9 ವಿಕೆಟ್ ಗಳ ಭರ್ಜರಿ ಗೆಲುವು

ರಾಜಸ್ಥಾನ ರಾಯಲ್ಸ್ ಗೆ ತವರಿನಲ್ಲೇ ಮುಖಭಂಗವಾಗಿದೆ. ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಶುಕ್ರವಾರ ರಾತ್ರಿ ನಡೆದ ಐಪಿಎಲ್ 2023ರ ಆವೃತ್ತಿಯ 48ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್  9 ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. 

ಜೈಪುರ: ರಾಜಸ್ಥಾನ ರಾಯಲ್ಸ್ ಗೆ ತವರಿನಲ್ಲೇ ಮುಖಭಂಗವಾಗಿದೆ. ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಶುಕ್ರವಾರ ರಾತ್ರಿ ನಡೆದ ಐಪಿಎಲ್ 2023ರ ಆವೃತ್ತಿಯ 48ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್  9 ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. 

ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್  17.5 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 118 ರನ್ ಗಳಿಸಲಷ್ಟೇ ಶಕ್ತವಾಯಿತು. ರಾಜಸ್ಥಾನ ರಾಯಲ್ಸ್  ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ 14 ರನ್ ಗಳಿಗೆ ರನೌಟ್ ಆದರು. ನಂತರ ಜೊಸ್ ಬಟ್ಲರ್ 8, ನಾಯಕ ಸಂಜು ಸ್ಯಾಮ್ಸನ್ 30, ದೇವದತ್ತ ಪಡಿಕ್ಕಲ್ 12,ಟ್ರೆಂಟ್ ಬೊಲ್ಟ್ 15 ರನ್ ಗಳಿಸಿದರು. ಇವರನ್ನು ಹೊರತುಪಡಿಸಿದರೆ ಬೇರೆ ಯಾವುದೇ ಆಟಗಾರರು ಎರಡಂಕಿ ದಾಟುವಲ್ಲಿ ವಿಫಲರಾದರು.

ಗುಜರಾತ್ ಟೈಟನ್ಸ್ ಪರ  ರಶೀದ್ ಖಾನ್ 3 ವಿಕೆಟ್ ಪಡೆದರೆ, ನೂರ್ ಅಹ್ಮದ್ 2, ಮೊಹಮ್ಮದ್ ಶಮಿ, ಹಾರ್ದಿಕ್ ಪಾಂಡ್ಯ, ಜೊಸ್ ಲಿಟ್ಲ್  ತಲಾ 1 ವಿಕೆಟ್ ಪಡೆದರು. ರಾಜಸ್ಥಾನ ರಾಯಲ್ಸ್ ನೀಡಿದ 119 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಗುಜರಾತ್ ಟೈಟನ್ಸ್  1 ವಿಕೆಟ್ ನಷ್ಟಕ್ಕೆ ಗೆಲುವಿನ ನಗೆ ಬೀರಿತು.

ರಾಜಸ್ಥಾನ ರಾಯಲ್ಸ್ ಪರ ವೃದ್ಧಿಮನ್ ಶಾ ಅಜೇಯ 41, ಶುಭ್ ಮನ್ ಗಿಲ್ 36, ಹಾರ್ದಿಕ್ ಪಾಂಡ್ಯ ಅಜೇಯ 39 ರನ್ ಗಳಿಸಿದರು. ಗುಜರಾತ್ ಟೈಟನ್ಸ್ ಪರ ಮೂರು ವಿಕೆಟ್ ಪಡೆದ ರಶೀದ್ ಖಾನ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!

ದೆಹಲಿ-ಚೆನ್ನೈ ಇಂಡಿಗೋ ವಿಮಾನದಲ್ಲಿ ಬೆಂಕಿ; ಹೈದರಾಬಾದ್‌ ನಲ್ಲಿ ತುರ್ತು ಲ್ಯಾಂಡಿಂಗ್

ನನ್ನ ಕನಸು ನೀವೇ ಸರ್‌; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು