ಸಿಎಸ್ ಕೆ ತಂಡ 
ಕ್ರಿಕೆಟ್

IPL 2023: ಡೆಲ್ಲಿ ಕ್ಯಾಪಿಟಲ್ಸ್ ಅನ್ನು 27 ರನ್‌ಗಳಿಂದ ಸೋಲಿಸಿದ ಚೆನ್ನೈ; ಪ್ಲೇಆಫ್ ಸನಿಹಕ್ಕೆ ಧೋನಿ ಪಡೆ!

ಐಪಿಎಲ್ 2023ರ 55ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 27 ರನ್‌ಗಳಿಂದ ಮಣಿಸಿದೆ.

ಚೆನ್ನೈ: ಐಪಿಎಲ್ 2023ರ 55ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 27 ರನ್‌ಗಳಿಂದ ಮಣಿಸಿದೆ. 

ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 167 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 140 ರನ್ ಗಳಿಸಲಷ್ಟೇ ಶಕ್ತವಾಯಿತು. 

ಚೆನ್ನೈ ಪರ ಶಿವಂ ದುಬೆ ಗರಿಷ್ಠ 25 ರನ್ ಗಳಿಸಿದರು. ಮಿಚೆಲ್ ಮಾರ್ಷ್ ಮೂರು ವಿಕೆಟ್ ಪಡೆದರು. 19ನೇ ಓವರ್‌ನಲ್ಲಿ ಖಲೀಲ್ ಅಹ್ಮದ್ ಎರಡು ಸಿಕ್ಸರ್‌ಗಳನ್ನು ಸಿಡಿಸಿದ ಧೋನಿ ಚೆನ್ನೈ ಗೌರವಾನ್ವಿತ ಸ್ಕೋರ್‌ಗೆ ಕೊಂಡೊಯ್ದರು. ಇದಕ್ಕೂ ಮುನ್ನ ಡೆಲ್ಲಿ ಬೌಲರ್‌ಗಳು ಚೆನ್ನೈ ಬ್ಯಾಟ್ಸ್‌ಮನ್‌ಗಳನ್ನು ಒತ್ತಡಕ್ಕೆ ಸಿಲುಕಿಸಿದ್ದರು. ಯಾವುದೇ ಬ್ಯಾಟ್ಸ್‌ಮನ್‌ಗಳು ಉತ್ತಮ ಆರಂಭವನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ. ಶಿವಂ ದುಬೆ ಗರಿಷ್ಠ 25 ರನ್ ಗಳಿಸಿದರು. ರಿತುರಾಜ್ ಗಾಯಕ್ವಾಡ್ 24, ಅಂಬಟಿ ರಾಯುಡು 23 ಮತ್ತು ಅಜಿಂಕ್ಯ ರಹಾನೆ 21 ರನ್ ಕೊಡುಗೆ ನೀಡಿದರು.

ಚೆನ್ನೈ ಸೂಪರ್ ಕಿಂಗ್ಸ್ ಪರ ಡೆವೊನ್ ಕಾನ್ವೆ ಮತ್ತು ರಿತುರಾಜ್ ಗಾಯಕ್ವಾಡ್ ಮೊದಲ ವಿಕೆಟ್‌ಗೆ 32 ರನ್ ಜೊತೆಯಾಟ ನೀಡಿದರು. ಕಾನ್ವೇ 13 ಎಸೆತಗಳಲ್ಲಿ 10 ರನ್ ಗಳಿಸಿ ಔಟಾದರು. ಇದಾದ ಬಳಿಕ ಗಾಯಕ್ವಾಡ್ ಕೂಡ ಪವರ್‌ಪ್ಲೇ ಬಳಿಕ ಮುಂದಿನ ಓವರ್‌ನಲ್ಲಿ ಪೆವಿಲಿಯನ್‌ಗೆ ಮರಳಿದರು. ರಿತುರಾಜ್ 18 ಎಸೆತಗಳಲ್ಲಿ 24 ರನ್ ಗಳಿಸಿದರು. 

ಅಕ್ಷರ್ ಪಟೇಲ್ ಎರಡೂ ವಿಕೆಟ್ ಪಡೆದರು. ಮೊಯಿನ್ ಅಲಿ 12 ಎಸೆತಗಳಲ್ಲಿ 7 ರನ್ ಗಳಿಸಿ ಔಟಾದರು. ಅಜಿಂಕ್ಯ ರಹಾನೆ 20 ಎಸೆತಗಳಲ್ಲಿ 21 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಶಿವಂ ದುಬೆ 12 ಎಸೆತಗಳಲ್ಲಿ 25 ರನ್ ಗಳಿಸಿದರು. ಅಂಬಟಿ 23 ರನ್ ಕೊಡುಗೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT