ಗಾಯಗೊಂಡ ಕೆಎಲ್ ರಾಹುಲ್ 
ಕ್ರಿಕೆಟ್

ಕೆಎಲ್ ರಾಹುಲ್ ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ: ಶೀಘ್ರ ತಂಡಕ್ಕೆ ವಾಪಸ್ ಆಗುತ್ತೇನೆ ಎಂದ ಕ್ರಿಕೆಟಿಗ

ಭಾರತದ ಹಿರಿಯ ಬ್ಯಾಟರ್ ಕೆಎಲ್ ರಾಹುಲ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು,  ಸಾಧ್ಯವಾದಷ್ಟು ಬೇಗ ರಾಷ್ಟ್ರೀಯ ತಂಡಕ್ಕೆ ಮರಳಲು ಎದುರು ನೋಡುತ್ತಿದ್ದೇನೆ ಎಂದು ಕ್ರಿಕೆಟಿಗ ಪೋಸ್ಟ್ ಮಾಡಿದ್ದಾರೆ.

ಮುಂಬೈ: ಭಾರತದ ಹಿರಿಯ ಬ್ಯಾಟರ್ ಕೆಎಲ್ ರಾಹುಲ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಸಾಧ್ಯವಾದಷ್ಟು ಬೇಗ ರಾಷ್ಟ್ರೀಯ ತಂಡಕ್ಕೆ ಮರಳಲು ಎದುರು ನೋಡುತ್ತಿದ್ದೇನೆ ಎಂದು ಕ್ರಿಕೆಟಿಗ ಪೋಸ್ಟ್ ಮಾಡಿದ್ದಾರೆ.

31ರ ವರ್ಷದ ಅವರು ಕೆಎಲ್ ರಾಹುಲ್ ಈ ತಿಂಗಳ ಆರಂಭದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಇಂಡಿಯನ್ ಪ್ರೀಮಿಯರ್ ಲೀಗ್‌ ಪಂದ್ಯದಲ್ಲಿ ತಮ್ಮ ಲಕ್ನೋ ಸೂಪರ್ ಜೈಂಟ್ಸ್‌ ತಂಡದ ಪರ ಫೀಲ್ಡಿಂಗ್ ಮಾಡುವಾಗ ತೊಡೆಯ ಗಾಯಕ್ಕೆ ಒಳಗಾಗಿದ್ದರು. ಬಳಿಕ ಇಡೀ ಐಪಿಎಲ್ ಟೂರ್ನಿಯಿಂದಲೇ ಹೊರ ಬಿದ್ದಿದ್ದರು. ಮಾತ್ರವಲ್ಲದೇ ಮುಂದಿನ ತಿಂಗಳು ಇಂಗ್ಲೆಂಡ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್‌ನಿಂದಲೂ ಕೆಎಲ್ ರಾಹುಲ್ ಹೊರಗುಳಿದಿದ್ದರು.

ಇದೀಗ ತೊಡೆಯ ಭಾಗದ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ರಾಹುಲ್ ಶೀಘ್ರ ತಂಡಕ್ಕೆ ಮರಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಈ ಬಗ್ಗೆ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿರುವ ರಾಹುಲ್, "ಎಲ್ಲರಿಗೂ ನಮಸ್ಕಾರ, ನಾನು ನನ್ನ ಶಸ್ತ್ರಚಿಕಿತ್ಸೆಯನ್ನು ಮುಗಿಸಿದ್ದೇನೆ. ಅದು ಯಶಸ್ವಿಯಾಗಿದೆ. ನಾನು ಆರಾಮದಾಯಕವಾಗಿದ್ದೇನೆ ಮತ್ತು ಎಲ್ಲವೂ ಸುಗಮವಾಗಿ ನಡೆದಿದೆ ಎಂದು ಖಚಿತಪಡಿಸಿಕೊಂಡಿದ್ದಕ್ಕಾಗಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ದೊಡ್ಡ ಧನ್ಯವಾದಗಳು.. ನಾನೀಗ ಅಧಿಕೃತವಾಗಿ ಚೇತರಿಕೆಯ ಹಾದಿಯಲ್ಲಿದ್ದೇನೆ. ನನ್ನ ಅತ್ಯುತ್ತಮ ಸ್ಥಿತಿಗೆ ಮರಳಲು ಮತ್ತು ಮತ್ತೆ ಮೈದಾನಕ್ಕೆ ಮರಳಲು ನಾನು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.

ರಾಹುಲ್ ಬದಲಿಗೆ ಇಶಾನ್ ಕಿಶನ್ ಗೆ ಸ್ಥಾನ
ಇನ್ನು ಜೂನ್ 7-12 ರವರೆಗೆ ಓವಲ್‌ನಲ್ಲಿ ನಡೆಯಲಿರುವ WTC ಫೈನಲ್‌ಗಾಗಿ ಭಾರತ ತಂಡದಲ್ಲಿ ಕೆಎಲ್ ರಾಹುಲ್ ಬದಲಿಗೆ ಇಶಾನ್ ಕಿಶನ್ ಸ್ಥಾನ ಗಿಟ್ಟಿಸಿದ್ದಾರೆ. 

ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ನಡೆಯಲಿರುವ ಏಷ್ಯಾ ಕಪ್ ಮತ್ತು ODI ವಿಶ್ವಕಪ್ ಸಮಯದಲ್ಲಿ ರಾಷ್ಟ್ರೀಯ ತಂಡಕ್ಕೆ ಮರಳುವ ಗುರಿಯನ್ನು ರಾಹುಲ್ ಹೊಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT