ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಐಪಿಎಲ್ 2023: ಗುಜರಾತ್ ವಿರುದ್ಧ ಚೆನ್ನೈಗೆ ಭರ್ಜರಿ ಗೆಲುವು, 10ನೇ ಬಾರಿ ಫೈನಲ್​ ಪ್ರವೇಶಿಸಿದ ಸಿಎಸ್ ಕೆ

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 15 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಎಂಎಸ್​...

ಸಿಎಸ್ ಕೆ ಆಟಗಾರರು
Lingaraj Badiger
Updated On : 24 May 2023, 2:25 pm

ಚೆನ್ನೈ: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 15 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಎಂಎಸ್​ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್​​ ತಂಡ ದಾಖಲೆಯ 10ನೇ ಬಾರಿಗೆ ಇಂಡಿಯನ್​ ಪ್ರೀಮಿಯರ್​ ಲೀಗ್​​​ ಫೈನಲ್​ಗೆ ಪ್ರವೇಶಿಸಿದೆ.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಸಿಎಸ್​ಕೆ ತಂಡಕ್ಕೆ ಆರಂಭಿಕರಾದ ಡೆವೊನ್ ಕಾನ್ವೆ ಹಾಗೂ ರುತುರಾಜ್ ಗಾಯಕ್ವಾಡ್ ಉತ್ತಮ ಆರಂಭದೊಂದಿಗೆ ನಿಗದಿತ 20 ಓವರ್​​ಗಳಲ್ಲಿ 7 ವಿಕೆಟ್​​ ನಷ್ಟಕ್ಕೆ 172 ರನ್​ ಗಳಿಸಿತು. 

ಗೆಲುವಿಗೆ 173 ರನ್ ಗಳ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್, 20 ಓವರ್​ಗಳಲ್ಲಿ 157 ರನ್​ ಗಳಿಗೆ ಸರ್ವಪತನ ಕಂಡಿತು. ಈ ಸೋಲಿನೊಂದಿಗೆ ಗುಜರಾತ್ ಟೈಟಾನ್ಸ್ ತಂಡವು 2ನೇ ಕ್ವಾಲಿಫೈಯರ್ ಪಂದ್ಯ ಆಡಬೇಕಿದೆ. 

Advertisement

Advertisement

ಇದನ್ನು ಓದಿ: ಡ್ಯೂಕ್ vs ಕೂಕಬುರಾ ವಿವಾದ ಮತ್ತೆ ತಾರಕಕ್ಕೆ: ವಿದೇಶಿ ಕ್ರಿಕೆಟಿಗರ ಅಚ್ಚುಮೆಚ್ಚಿನ ಕುಕಬುರಾ ಚೆಂಡನ್ನು ಬಿಸಿಸಿಐ ಬೇಡ ಎನ್ನವುದೇಕೆ? ಇಲ್ಲಿದೆ ಉತ್ತರ

ಬುಧವಾರ ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯದಲ್ಲಿ ಗೆಲ್ಲುವ ತಂಡದೊಡನೆ ಗುಜರಾತ್ ಟೈಟಾನ್ಸ್ ತಂಡ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸುವ ತಂಡ ಸಿಎಸ್​ಕೆ ವಿರುದ್ಧ ಫೈನಲ್ ಆಡಲಿದೆ.

ಸಿಎಸ್ ಕೆ ಪರ ಋತುರಾಜ್​ ಗಾಯಕ್ವಾಡ್​ ಹಾಗೂ ಎಡಗೈ ಬ್ಯಾಟ್ಸ್​ಮನ್​ ಡೆವೋನ್​ ಕಾನ್ವೆ, ಗುಜರಾತ್​ ಬೌಲರ್​ಗಳ ಸಂಘಟಿತ ದಾಳಿಯನ್ನು ಸಮರ್ಥವಾಗಿ ಎದುರಿಸಿದರು. ಪರಿಣಾಮ, ಮೊದಲ ವಿಕೆಟ್​ಗೆ ಬರೋಬ್ಬರಿ 87 ರನ್ ಸೇರಿಸಿದರು. ಅರ್ಧಶತಕ ಸಿಡಿಸಿ ಗಾಯಕ್ವಾಡ್​ ಚೆನ್ನೈ ಗೆಲುವಿಗೆ ನೆರವಾದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement