ಮುಂಬೈ ಇಂಡಿಯನ್ಸ್ 
ಕ್ರಿಕೆಟ್

ಐಪಿಎಲ್ 2023: ಮಧ್ವಾಲ್ ಮಾರಕ ದಾಳಿಗೆ ತತ್ತರಿಸಿದ ಲಕ್ನೋ, ಮುಂಬೈಗೆ 81 ರನ್ ಗೆಲುವು

ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಆಕಾಶ್ ಮಧ್ವಾಲ್ ಅವರ ಆಕ್ರಮಣಕಾರಿ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ಲಖನೌ ಸೂಪರ್ ಜಯಂಟ್ಸ್‌ ವಿರುದ್ಧ 81 ರನ್​ಗಳ ಭರ್ಜರಿ...

ಚೆನ್ನೈ: ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಆಕಾಶ್ ಮಧ್ವಾಲ್ ಅವರ ಆಕ್ರಮಣಕಾರಿ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ಲಖನೌ ಸೂಪರ್ ಜಯಂಟ್ಸ್‌ ವಿರುದ್ಧ 81 ರನ್​ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಕ್ವಾಲಿಫೈಯರ್ 2ಗೆ ಪಂದ್ಯಕ್ಕೆ ಮುಂಬೈ ಎಂಟ್ರಿಕೊಟ್ಟಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ  ರೋಹಿತ್‌ ಶರ್ಮಾ ಸಾರಥ್ಯದ ಮುಂಬೈ, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 182 ರನ್ ಗಳಿಸಿತು.

ಗೆಲುವಿಗೆ 183 ರನ್ ಗಳ ಗುರಿ ಬೆನ್ನಟ್ಟಿದ ಲಕ್ನೋ, ಆರಂಭದಲ್ಲೇ ವಿಕೆಟ್ ಕಳೆದುಕೊಳ್ಳುತ್ತಾ ಪಂದ್ಯದಿಂದಲೇ ಹೊರಬಿತ್ತು. ಅಂತಿಮವಾಗಿ ಲಕ್ನೋ ತನ್ನೇಲ್ಲ ವಿಕೆಟ್ ಕಳೆದುಕೊಂಡು 101 ರನ್​ಗಳಿಸಲಷ್ಟೇ ಶಕ್ತವಾಯಿತು. ಮುಂಬೈ ಪರ ಮಾರಕ ಬೌಲಿಂಗ್ ದಾಳಿ ಮಾಡಿದ ಮಧ್ವಾಲ್ ಬರೋಬರಿ 5 ವಿಕೆಟ್ ಪಡೆದರು. 

ಮೇ 26ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ವಾಲಿಫೈಯರ್‌ 2 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಗುಜರಾತ್‌ ಟೈಟನ್ಸ್‌ ಸವಾಲು ಎದುರಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT