ಐಪಿಎಲ್ ಫೈನಲ್ 
ಕ್ರಿಕೆಟ್

ಐಪಿಎಲ್ 2023 ಫೈನಲ್: ಶತಕದಂಚಿನಲ್ಲಿ ಮುಗ್ಗರಿಸಿದ ಸಾಯಿ ಸುದರ್ಶನ್, ಚೆನ್ನೈ ತಂಡಕ್ಕೆ 215 ರನ್ ಬೃಹತ್ ಗುರಿ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಕ್ರಿಕೆಟ್ ಟೂರ್ನಿಯ ಹದಿನಾರನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು ಗುಜರಾತ್ ಟೈಟನ್ಸ್ ತಂಡ 215 ರನ್ ಗಳ ಬೃಹತ್ ಗುರಿ ನೀಡಿದೆ.

ಅಹ್ಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಕ್ರಿಕೆಟ್ ಟೂರ್ನಿಯ ಹದಿನಾರನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು ಗುಜರಾತ್ ಟೈಟನ್ಸ್ ತಂಡ 215 ರನ್ ಗಳ ಬೃಹತ್ ಗುರಿ ನೀಡಿದೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ವೃದ್ಧಿಮಾನ್ ಸಹಾ ಅರ್ಧಶತಕ ಹಾಗೂ ಸಾಯಿ ಸುದರ್ಶನ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಗುಜರಾತ್ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಕಲೆಹಾಕಿದ್ದು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 215 ರನ್‌ಗಳ ಕಠಿಣ ಗುರಿಯನ್ನು ನೀಡಿದೆ. 

96 off just 47 deliveries under tremendous pressure!

A spectacular knock from Sai Sudharsan comes to an end

Follow the match https://t.co/WsYLvLrRhp#TATAIPL | #Final | #CSKvGT | @sais_1509 pic.twitter.com/m2SLZ7SlH5

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಗುಜರಾತ್ ಟೈಟನ್ಸ್ ಗೆ ಆರಂಭಿಕರಾದ ಶುಭ್ ಮನ್ ಗಿಲ್ ಮತ್ತು ವೃದ್ದಿಮಾನ್ ಸಾಹ ಉತ್ತಮ ಆರಂಭ ಒದಗಿಸಿದರು. ವೃದ್ಧಿಮಾನ್ ಸಹಾ 39 ಎಸೆತಗಳಲ್ಲಿ 54 ರನ್ ಗಳಿಸಿದರೆ, ಶುಬ್‌ಮನ್ ಗಿಲ್ 20 ಎಸೆತಗಳಲ್ಲಿ 39 ರನ್ ಗಳಿಸಿದರು. 

ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ 47 ಎಸೆತಗಳಲ್ಲಿ 8 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 96 ರನ್ ಕಲೆಹಾಕಿ ಅಬ್ಬರಿಸಿ ಶತಕ ವಂಚಿತರಾದರು. ಹಾರ್ದಿಕ್ ಪಾಂಡ್ಯ 12 ಎಸೆತಗಳಲ್ಲಿ ಅಜೇಯ 21 ರನ್ ಗಳಿಸಿದರೆ, ರಶೀದ್ ಖಾನ್ ಡಕ್ಔಟ್ ಆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT