ಇಂಗ್ಲೆಂಡ್ ತಂಡ (ಸಂಗ್ರಹ ಚಿತ್ರ) 
ಕ್ರಿಕೆಟ್

ICC Cricket World Cup 2023: ಕೊನೆಯ ಸ್ಥಾನಿ ಇಂಗ್ಲೆಂಡ್ ಗೆ ಇನ್ನೂ ಇದೆ ಚಾನ್ಸ್.. ಇಲ್ಲಿದೆ ಸೆಮೀಸ್ ಲೆಕ್ಕಾಚಾರ!

ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸಿದ ಭಾರತ ತಂಡ ಹಾಲಿ ಆವೃತ್ತಿಯ ವಿಶ್ವಕಪ್​ನಲ್ಲಿ ಮೊದಲ ತಂಡವಾಗಿ ಸೆಮಿಫೈನಲ್​ ಪ್ರವೇಶ ಪಡೆದಿದ್ದು, ಅಚ್ಚರಿ ಎಂದರೆ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿರುವ ಇಂಗ್ಲೆಂಡ್​ಗೂ ಸೆಮಿಫೈನಲ್​ ಪ್ರವೇಶಿಸುವ ಅವಕಾಶವಿದೆ.

ಮುಂಬೈ: ಶ್ರೀಲಂಕಾ (SriLanka) ವಿರುದ್ಧ ಗೆಲುವು ಸಾಧಿಸಿದ ಭಾರತ ತಂಡ ಹಾಲಿ ಆವೃತ್ತಿಯ ವಿಶ್ವಕಪ್ (ICC Cricket World Cup 2023)​ನಲ್ಲಿ ಮೊದಲ ತಂಡವಾಗಿ ಸೆಮಿಫೈನಲ್​ ಪ್ರವೇಶ ಪಡೆದಿದ್ದು, ಬಾಕಿ ಉಳಿದಿರುವ ಮೂರು ಸ್ಥಾನಗಳಿಗೆ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಅಚ್ಚರಿ ಎಂದರೆ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿರುವ ಇಂಗ್ಲೆಂಡ್​ಗೂ ಸೆಮಿಫೈನಲ್ (SemiFinals)​ ಪ್ರವೇಶಿಸುವ ಅವಕಾಶವಿದೆ.

ಅಚ್ಚರಿಯಾದರೂ ಇದು ನಿಜ.. ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ (England) ಸದ್ಯ ವಿಶ್ವಕಪ್ ಟೂರ್ನಿಯಲ್ಲಿ ತಾನಾಡಿದ 6 ಪಂದ್ಯಗಳಲ್ಲಿ ಐದರಲ್ಲಿ ಸೋಲು ಕಂಡು 2 ಅಂಕದೊಂದಿಗೆ ಕೊನೆಯ ಸ್ಥಾನದಲ್ಲಿದೆ. ಇಂಗ್ಲೆಂಡ್ ತಂಡಕ್ಕೆ ಇನ್ನೂ ಮೂರು ಪಂದ್ಯಗಳು ಬಾಕಿ ಉಳಿದಿದ್ದು, ನೆದರ್ಲೆಂಡ್ಸ್​​, ಆಸ್ಟ್ರೇಲಿಯಾ (Australia) ಮತ್ತು ಪಾಕಿಸ್ತಾನ ತಂಡಗಳ ಎದುರು ಸೆಣಸಲಿದೆ. ಈ ಮೂರು ಪಂದ್ಯಗಳನ್ನು ಇಂಗ್ಲೆಂಡ್​ ಗೆದ್ದರೆ 8 ಅಂಕ ಸಂಪಾದಿಸಿ, ಉಳಿದಿರುವ ಮೂರು ಸ್ಥಾನಗಳ ಪೈಕಿ ಯಾವುದಾದದರು ಒಂದು ಸ್ಥಾನ ಪಡೆದು ಸೆಮಿಫೈನಲ್​ ಪ್ರವೇಶಿಸಬಹುದು. 

ಆದರೆ ಇಲ್ಲಿ ಇಂಗ್ಲೆಂಡ್ ಗೆ ಆಸ್ಟ್ರೇಲಿಯಾ, ನ್ಯೂಜಿಲೆಂಡ್ (Newzealand) ಮತ್ತು ಪಾಕಿಸ್ತಾನ (Pakistan) ತಂಡಗಳು ಪ್ರಬಲ ಪೈಪೋಟಿ ನೀಡುತ್ತಿದ್ದು, ಆಗ ಇಲ್ಲಿ ನೆಟ್ ರನ್ ರೇಟ್ ಲೆಕ್ಕಾಚಾರ ಬರುತ್ತದೆ. ಭಾರತ ತಂಡ (Team India) ಲಂಕಾ ವಿರುದ್ಧ ಗೆಲ್ಲುವ ಮೂಲಕ ವಿಶ್ವಕಪ್​ನಲ್ಲಿ ಆಡಿದ ಎಲ್ಲ 7 ಪಂದ್ಯಗಳನ್ನು ಗೆದ್ದು 14 ಅಂಕದೊಂದಿಗೆ 2.102 ನೆಟ್ ರನ್ ರೇಟ್​ ದಾಖಲಿಸಿದೆ. ಸದ್ಯ ಭಾರತಕ್ಕೆ ಇನ್ನು ಎರಡು ಪಂದ್ಯಗಳು ಬಾಕಿ ಉಳಿದಿವೆ. ಈ ಎರಡೂ ಪಂದ್ಯಗಳನ್ನು ಸೋತರೂ ಭಾರತಕ್ಕೆ ಯಾವುದೇ ನಷ್ಟ ಇಲ್ಲ. ಏಕೆಂದರೆ ಭಾರತ ಈಗಾಗಲೇ ಸೆಮೀಸ್ ಗೆ ಅಧಿಕೃತವಾಗಿ ಎಂಟ್ರಿಕೊಟ್ಟಿದೆ.

2ನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ (South Africa) ಇದ್ದು, ಆಫ್ರಿಕಾ ತಂಡ 12 ಅಂಕಗಳೊಂದಿಗೆ 2.290 ನೆಟ್ ರನ್ ರೇಟ್ ಹೊಂದಿದ್ದು, ಅದರ ಸೆಮೀಸ್ ಸ್ಥಾನ ಕೂಡ ಅಬಾಧಿತ ಎನ್ನಬಹುದು. ಸದ್ಯ ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್​ ತಂಡಗಳು ಉಳಿದಿರುವ ಮೂರು ಪಂದ್ಯಗಳಲ್ಲಿ ಸೋಲು ಕಾಣಬೇಕು. ಈ ಮೂರು ಸೋಲಿನಿಂದ ಉಭಯ ತಂಡಗಳು ಈಗಿರುವ 8 ಅಂಕದಲ್ಲೇ ಉಳಿಯಲಿದೆ. ಆಗ ನೆಟ್ ರನ್​ರೇಟ್​ ಆಧಾರದಲ್ಲಿ ಈ ಅದೃಷ್ಟ ಇಂಗ್ಲೆಂಡ್​ಗೆ ಸಿಗಬಹುದು. 

ಏಕೆಂದರೆ ಸೋಲು ಕಂಡ ಕಾರಣ ಕಿವೀಸ್​ ಮತ್ತು ಆಸೀಸ್​ ತಂಡದ ರನ್​ ರೇಟ್​ ಕುಸಿತ ಕಂಡಿರುತ್ತದೆ. ಸತತ ಗೆಲುವು ಸಾಧಿಸಿದ ಇಂಗ್ಲೆಂಡ್​ನ ರನ್​ರೇಟ್​ ಪ್ಲಸ್​ ಆಗಿರುತ್ತದೆ. ಹೀಗಾಗಿ ಇಂಗ್ಲೆಂಡ್​ಗೆ ಈ ಲಾಭ ಸಿಗಲಿದೆ. ಒಂದೊಮ್ಮೆ ಇಂಗ್ಲೆಂಡ್​ ಮುಂದಿನ ಎಲ್ಲ ಪಂದ್ಯಗಳನ್ನು ಗೆದ್ದು ಆಸ್ಟ್ರೇಲಿಯಾ ಮತ್ತು ಕಿವೀಸ್​ ಮುಂದಿನ ಪಂದ್ಯಗಳಲ್ಲಿ ಕನಿಷ್ಠ ಒಂದು ಪಂದ್ಯ ಗೆದ್ದರೂ ಇಂಗ್ಲೆಂಡ್​ಗೆ ಸೆಮಿ ಫೈನಲ್ ಅವಕಾಶ ಸಿಗುವುದಿಲ್ಲ. 

ಏಕೆಂದರೆ ಆಗ ನ್ಯೂಜಿಲೆಂಡ್​ ಮತ್ತು ಆಸ್ಟ್ರೇಲಿಯಾ ಬಳಿ ತಲಾ 10 ಅಂಕಗಳಿರುತ್ತದೆ. ಹೆಚ್ಚು ಅಂಕಗಳ ಲೆಕ್ಕಾಚಾರದಲ್ಲಿ ಈ ತಂಡಗಳು ಸೆಮೀಸ್ ಹಂತಕ್ಕೇರುತ್ತವೆ. ಒಟ್ಟಾರೆ ಇಂಗ್ಲೆಂಡ್​ ಈ ಎಲ್ಲ ಲೆಕ್ಕಾಚಾರದ ಪ್ರಕಾರ ಸೆಮಿಫೈನಲ್​ಗೆ ಬಂದರೆ ನಿಜಕ್ಕೂ ಇದೊಂದು ಪವಾಡವೇ ಸರಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT