ರೋಹಿತ್ ಶರ್ಮಾ ಮತ್ತು ತೆಂಬಾ ಬವುಮಾ 
ಕ್ರಿಕೆಟ್

India vs South africa: ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ; ಆಡುವ 11ರ ಬಳಗ ಇಲ್ಲಿದೆ..

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಂದು ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಕೋಲ್ಕತ್ತಾ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಂದು ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು, ಸದ್ಯ ಸರಣಿಯಲ್ಲಿ ಆಡಿರುವ ಎಲ್ಲಾ ಪಂದ್ಯಗಳಲ್ಲೂ ಗೆಲುವು ಸಾಧಿಸಿ ಸೋಲಿಲ್ಲದ ಸರದಾರನಾಗಿರುವ ಭಾರತ ದಕ್ಷಿಣ ಆಫ್ರಿಕಾ ವಿರುದ್ಧವೂ ಗೆಲ್ಲುವ ತವಕದಲ್ಲಿದೆ.

ಟೀಂ ಇಂಡಿಯಾದ ತಂಡದಲ್ಲಿ ಸದ್ಯ ಯಾವುದೇ ಬದಲಾವಣೆ ಮಾಡಿಲ್ಲ. ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ, ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್‌ಪ್ರಿತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಇದ್ದಾರೆ. 

ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿರುವ ಭಾರತ ತಂಡ ಇಂದು ಎರಡನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಆಡುತ್ತಿದೆ. ದಕ್ಷಿಣ ಆಫ್ರಿಕಾ ತಂಡವು ಆಡಿರುವ 7 ಪಂದ್ಯಗಳಲ್ಲಿ ನೆದರ್ಲೆಂಡ್ಸ್ ವಿರುದ್ಧದ ಸೋಲು ಬಿಟ್ಟರೆ ಉಳಿದೆಲ್ಲ ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. 

ದಕ್ಷಿಣ ಆಫ್ರಿಕಾ ಪ್ಲೇಯಿಂಗ್ ಇಲೆವೆನ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ತೆಂಬಾ ಬವುಮಾ (ನಾಯಕ), ರಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಕೇಶವ್ ಮಹರಾಜ್, ತಬ್ರಿಜ್ ಶಮ್ಸಿ, ಕಾಗಿಸೊ ರಬಡ, ಲುಂಗಿ ಎಂಗಿಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT