ಗ್ಲೆನ್ ಮ್ಯಾಕ್ಸ್ ವೆಲ್ 
ಕ್ರಿಕೆಟ್

ವಿಶ್ವಕಪ್: ಮ್ಯಾಕ್ಸ್​ವೆಲ್ ಅಬ್ಬರದ ದ್ವಿಶತಕ; ಅಫ್ಘಾನ್ ವಿರುದ್ಧ ಆಸೀಸ್ ಗೆ ಭರ್ಜರಿ ಗೆಲುವು

ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ 39ನೇ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಅಬ್ಬರದ ದ್ವಿಶತಕದ ನೆರವಿಂದ ಆಸ್ಟ್ರೇಲಿಯಾ, ಅಪ್ಘಾನಿಸ್ತಾನ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ವಿಶ್ವಕಪ್ ಪೈನಲ್ ಪ್ರವೇಶಿಸಿದೆ.

ಮುಂಬೈ: ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ 39ನೇ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಅಬ್ಬರದ ದ್ವಿಶತಕದ ನೆರವಿಂದ ಆಸ್ಟ್ರೇಲಿಯಾ, ಅಪ್ಘಾನಿಸ್ತಾನ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ವಿಶ್ವಕಪ್ ಪೈನಲ್ ಪ್ರವೇಶಿಸಿದೆ.

ಇಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ನಿಗದಿತ 50 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 291 ರನ್ ಗಳಿಸಿತು. 

ಗೆಲುವಿಗೆ 292 ರನ್​ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಒಂದು ಹಂತದಲ್ಲಿ 91ಕ್ಕೆ 7 ವಿಕೆಟ್ ಕಳೆದುಕೊಂಡು, ಹೀನಾಯ ಸೋಲಿನತ್ತಾ ಸಾಗುತ್ತಿತ್ತು. ಆದರೆ ಗ್ಲೇನ್ ಮ್ಯಾಕ್ಸ್​ವೆಲ್ ಏಕಾಂಗಿಯಾಗಿ ಪಂದ್ಯದ ಗತಿಯನ್ನೇ ಬದಲಾಯಿಸಿದರು. ಇವರಿಗೆ ನಾಯಕ ಪ್ಯಾಟ್​ ಕಮಿನ್ಸ್​ ಉತ್ತಮ ಸಾಥ್ ನೀಡಿದರು.

ಮ್ಯಾಕ್ಸ್‌ವೆಲ್ 128 ಎಸೆತಗಳಲ್ಲಿ 10 ಸಿಕ್ಸರ್‌ಗಳು ಮತ್ತು 21 ಬೌಂಡರಿ ಸೇರಿದಂತೆ ಅಜೇಯ 201 ರನ್‌ ಗಳಿಸುವ ಮೂಲಕ ತಂಡಕ್ಕೆ ಅಸಾಧ್ಯವಾಗಿದ್ದ ಗೆಲುವುನ್ನು ತಂದುಕೊಟ್ಟರು.

ಆಸ್ಟ್ರೇಲಿಯಾ 19 ಎಸೆತಗಳು ಬಾಕಿ ಇರುವಂತೆಯೇ ಮೂರು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಫೈನಲ್ ಪ್ರವೇಶಿಸಿದೆ. ಈಗಾಗಲೇ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸೆಮಿಫೈನಲ್ ಸ್ಥಾನ ಖಚಿತಗೊಳಿಸಿಕೊಂಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT