ಶತಕ ಬಾರಿಸಿದ ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ 
ಕ್ರಿಕೆಟ್

ಐಸಿಸಿ ವಿಶ್ವಕಪ್: ಶ್ರೇಯಸ್, ರಾಹುಲ್ ಭರ್ಜರಿ ಶತಕ, ನೆದರ್ಲ್ಯಾಂಡ್ಸ್ ಗೆ 411 ರನ್ ಗಳ ಗುರಿ ನೀಡಿದ ಭಾರತ

ಸಿಲಿಕಾನ್ ಸಿಟಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಸಿಸಿ ವಿಶ್ವಕಪ್ ಟೂರ್ನಿಯ ಲೀಗ್  ಹಂತದ ಕೊನೆಯ ಪಂದ್ಯದಲ್ಲಿ ಭಾರತ ಭರ್ಜರಿ ಬ್ಯಾಟಿಂಗ್ ಮಾಡಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಸಿಸಿ ವಿಶ್ವಕಪ್ ಟೂರ್ನಿಯ ಲೀಗ್  ಹಂತದ ಕೊನೆಯ ಪಂದ್ಯದಲ್ಲಿ ಭಾರತ ಭರ್ಜರಿ ಬ್ಯಾಟಿಂಗ್ ಮಾಡಿದೆ.

ಶ್ರೇಯಸ್ ಅಯ್ಯರ್ , ಕೆಎಲ್ ರಾಹುಲ್ ಅವರ ಆಕರ್ಷಕ ಶತಕ ಹಾಗೂ ರೋಹಿತ್ ಶರ್ಮಾ,  ಗಿಲ್, ಕೊಹ್ಲಿ, ಅವರ ಅರ್ಧಶತಕದ ನೆರವಿನಿಂದ ರನ್ ಗಳ ಹೊಳೆ ಹರಿಸಿದ್ದು, ನೆದರ್ಲ್ಯಾಂಡ್ಸ್  ಗೆಲ್ಲಲು 411 ರನ್ ಗಳ ಗುರಿ ನೀಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತದ ಪರ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್ ಮನ್ ಗಿಲ್ ಉತ್ತಮ ಆರಂಭ ನೀಡಿದರು.  ರೋಹಿತ್ ಶರ್ಮಾ 61, ಗಿಲ್ 51, ಕೊಹ್ಲಿ 51 ರನ್ ಗಳಿಸುವ ಮೂಲಕ ಭಾರತ ಗೆಲುವಿಗೆ ಭದ್ರ ತಳಹಾದಿ ಹಾಕಿದರು. 

ನಂತರ ಅಬ್ಬರಿಸಿದ ಶ್ರೇಯಸ್ ಅಯ್ಯರ್ 94 ಎಸೆತಗಳಲ್ಲಿ ಅಜೇಯ 128 ರನ್ ಗಳಿಸಿದರೆ, ಕೆಎಲ್ ರಾಹುಲ್ 64 ಎಸೆತಗಳಲ್ಲಿ 102 ರನ್ ಗಳಿಸುವ ಮೂಲಕ ತಂಡದ ಮೊತ್ತವನ್ನು 400ರ ಗಡಿ ದಾಟಿಸಿದರು. ಕೆಎಲ್ ರಾಹುಲ್ ಔಟಾದ ಬಳಿಕ ಬಂದ ಸೂರ್ಯಕುಮಾರ್ ಯಾದವ್ 2 ರನ್ ಗಳಿಸಿದರು. ಹೀಗೆ ನೆದರ್ಲ್ಯಾಂಡ್ಸ್  ಬೌಲರ್ ಗಳನ್ನು ಚೆಂಡಾಡಿದ ಭಾರತದ ಬ್ಯಾಟ್ಸ್ ಮನ್ ಗಳು ನಿಗದಿತ 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 410 ರನ್ ಗಳಿಸಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT