ಐಶ್ವರ್ಯಾ ರೈ ಮತ್ತು ಅಬ್ದುಲ್ ರಜಾಕ್ (ಸಂಗ್ರಹ ಚಿತ್ರ) 
ಕ್ರಿಕೆಟ್

ಐಶ್ವರ್ಯಾ ರೈ ಕುರಿತು ಆಕ್ಷೇಪಾರ್ಹ ಹೇಳಿಕೆ: ವಿವಾದ ಬೆನ್ನಲ್ಲೇ ಪಾಕ್ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ಕ್ಷಮೆಯಾಚನೆ!

ಬಾಲಿವುಡ್‌ ನಟಿ ಐಶ್ವರ್ಯಾ ರೈ ಬಚ್ಚನ್‌ ಅವರ ಕುರಿತು ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಬ್ದುಲ್‌ ರಜಾಕ್‌ ಅವರು ಇದೀಗ ತಮ್ಮ ಹೇಳಿಕೆ ಕುರಿತು ಕ್ಷಮೆಯಾಚಿಸಿದ್ದಾರೆ.

ಇಸ್ಲಾಮಾಬಾದ್:‌ ಬಾಲಿವುಡ್‌ ನಟಿ ಐಶ್ವರ್ಯಾ ರೈ ಬಚ್ಚನ್‌ ಅವರ ಕುರಿತು ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಬ್ದುಲ್‌ ರಜಾಕ್‌ ಅವರು ಇದೀಗ ತಮ್ಮ ಹೇಳಿಕೆ ಕುರಿತು ಕ್ಷಮೆಯಾಚಿಸಿದ್ದಾರೆ.

ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯನ್ನು ಟೀಕಿಸುವ ಭರದಲ್ಲಿ ಅನಗತ್ಯವಾಗಿ ಐಶ್ವರ್ಯ ರೈ ಅವರ ಹೆಸರು ಪ್ರಸ್ತಾಪ ಮಾಡಿದ ಅಬ್ದುಲ್‌ ರಜಾಕ್‌ ವಿರುದ್ಧ ವ್ಯಾಪಕವಾಗಿ ಟೀಕೆಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ, ವಿಡಿಯೊ ಪೋಸ್ಟ್‌ ಮಾಡಿ, ಕ್ಷಮೆಯಾಚಿಸಿದ್ದಾರೆ.

“ನಾನು ಅಬ್ದುಲ್‌ ರಜಾಕ್.‌ ಸುದ್ದಿಗೋಷ್ಠಿ ವೇಳೆ ಪಾಕಿಸ್ತಾನ ಕ್ರಿಕೆಟ್‌ ತರಬೇತಿ ಹಾಗೂ ಉದ್ದೇಶದ ಕುರಿತು ಮಾತನಾಡುತ್ತಿದ್ದೆ. ಆಗ ನಾನು ಬಾಯಿತಪ್ಪಿನಿಂದಾಗಿ ಐಶ್ವರ್ಯಾ ರೈ ಅವರ ಹೆಸರು ಪ್ರಸ್ತಾಪಿಸಿದೆ. ನಾನು ವೈಯಕ್ತಿಕವಾಗಿ ಅವರ ಕ್ಷಮೆ ಕೇಳುತ್ತೇನೆ. ನಾನು ಯಾರ ಭಾವನೆಗಳಿಗೂ ಧಕ್ಕೆ ತರುವ, ನೋವುಂಟು ಮಾಡುವ ಉದ್ದೇಶ ಹೊಂದಿಲ್ಲ. ನಾನು ಬೇರೆ ಉದಾಹರಣೆ ಕೊಡಬೇಕಿತ್ತು. ಆದರೆ, ಅಚಾತುರ್ಯದಿಂದ ನಟಿಯ ಹೆಸರು ಪ್ರಸ್ತಾಪವಾಯಿತು” ಎಂದು 27 ಸೆಕೆಂಡ್‌ಗಳ ವೀಡಿಯೊವನ್ನು ಅಬ್ದುಲ್‌ ರಜಾಕ್‌ ಪೋಸ್ಟ್‌ ಮಾಡಿದ್ದಾರೆ.

ಪಿಸಿಬಿಯ ಆಡಳಿತ ಮಂಡಳಿಯನ್ನು ಟೀಕಿಸುವಾಗ, ಅಬ್ದುಲ್ ರಜಾಕ್ ಅವರು, ಐಶ್ವರ್ಯಾ ರೈ ಅವರನ್ನು ಉದಾಹರಣೆಯಾಗಿ ಬಳಸಿದ್ದರು.

ನಾನು ಐಶ್ವರ್ಯಾ ರೈಯನ್ನು ಮದುವೆಯಾಗುವುದರಿಂದ ಉತ್ತಮ ನಡತೆ ಮತ್ತು ಸದ್ಗುಣಶೀಲ ಮಕ್ಕಳು ಹುಟ್ಟುತ್ತವೆ ಎಂಬ ನಿರೀಕ್ಷೆ ಸುಳ್ಳು ಎಂಬ ಅಧಿಕಪ್ರಸಂಗದ ಮಾತನ್ನು ಹೇಳಿದ್ದರು. ಪಾಕಿಸ್ತಾನ ಕ್ರಿಕೆಟ್​ ಮಂಡಳಿಯೂ ಇದೇ ರೀತಿ ಒಳ್ಳೆಯ ಮಕ್ಕಳನ್ನು ಹುಟ್ಟಿಸುವ ಹುಸಿ ನಿರೀಕ್ಷೆಯಲ್ಲಿದೆ. ಆದರೆ ಅದು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಗೆ ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

20 ವರ್ಷಗಳಿಂದ ಆತನನ್ನು ಕೊಲ್ಲಲು ಬಯಸಿದ್ದೆ: ಫಾರೂಕ್ ಅಬ್ದುಲ್ಲಾ ಮೇಲೆ ದಾಳಿ ನಡೆಸಿದ ಶೂಟರ್ ಹೇಳಿಕೆ!

ಮೊಟ್ಟೆ ಪ್ರಿಯರಿಗೆ ಗುಡ್‌ ನ್ಯೂಸ್‌; ಬೆಲೆಯಲ್ಲಿ ಭಾರೀ ಇಳಿಕೆ, ಗ್ರಾಹಕರು ಸಂತಸ

ಜಮ್ಮು: ಫಾರೂಕ್‌ ಅಬ್ದುಲ್ಲಾ ಹತ್ಯೆಗೆ ಯತ್ನ, ಮದುವೆ ಮನೆಯಲ್ಲೇ ಗುಂಡಿನ ದಾಳಿ; ಡಿಸಿಎಂಗೆ ಗಾಯ

CM ಕುರ್ಚಿ ಕಸರತ್ತು: ಬಜೆಟ್ ಅಧಿವೇಶನ ಪೂರ್ಣಗೊಂಡ ಬಳಿಕ ನಾಯಕತ್ವ ಗೊಂದಲಕ್ಕೆ ‘ಹೈ’ ಪರಿಹಾರ..?

ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ: ಕೇರಳದಲ್ಲಿ ಪೊಲೀಸರ ಭದ್ರತೆಯೊಂದಿಗೆ ವಿವಾಹ!

SCROLL FOR NEXT