ಹಾರ್ದಿಕ್ ಪಾಂಡ್ಯ 
ಕ್ರಿಕೆಟ್

ದಕ್ಷಿಣ ಆಫ್ರಿಕಾ, ಆಸ್ಚ್ರೇಲಿಯಾ ಸರಣಿಗೂ ಹಾರ್ದಿಕ್ ಪಾಂಡ್ಯ ಅಲಭ್ಯ: ವರದಿ, ಭಾರತ ತಂಡಕ್ಕೆ ಪಾಂಡ್ಯ ಭಾವುಕ ಪತ್ರ

ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ಭಾರತ ತಂಡದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಇದೀಗ ದಕ್ಷಿಣ ಆಫ್ರಿಕಾ ಮತ್ತು ಆಸ್ಚ್ರೇಲಿಯಾ ವಿರುದ್ಧ ಸರಣಿಗೂ ಅಲಭ್ಯರಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ನವದೆಹಲಿ: ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ಭಾರತ ತಂಡದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಇದೀಗ ದಕ್ಷಿಣ ಆಫ್ರಿಕಾ ಮತ್ತು ಆಸ್ಚ್ರೇಲಿಯಾ ವಿರುದ್ಧ ಸರಣಿಗೂ ಅಲಭ್ಯರಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ವಿಶ್ವಕಪ್​ ಟೂರ್ನಿಯ ಲೀಗ್​ ಪಂದ್ಯದ ವೇಳೆ ಗಾಯಗೊಂಡು ಸಂಪೂರ್ಣವಾಗಿ ಟೂರ್ನಿಯಿಂದ ಹೊರಬಿದ್ದಿದ್ದ ಸ್ಟಾರ್‌ ಆಲ್ರೌಂಡರ್‌ ಹಾರ್ದಿಕ್‌ ಪಾಂಡ್ಯ(Hardik Pandya) ಅವರು, ಮುಂಬರುವ ಆಸ್ಟ್ರೇಲಿಯಾ (Australia vs India) ಮತ್ತು ದಕ್ಷಿಣ ಆಫ್ರಿಕಾ (South Africa vs India) ವಿರುದ್ಧದ ಸರಣಿಗೂ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

ಬೌಂಡರಿ ತಡೆಯುವ ಯತ್ನದಲ್ಲಿ ಗಾಯಗೊಂಡಿದ್ದ ಪಾಂಡ್ಯ
ಬಾಂಗ್ಲಾದೇಶ ವಿರುದ್ಧ ಅಕ್ಟೋಬರ್​ 19ರಂದು ಪುಣೆಯಲ್ಲಿ ನಡೆದಿದ್ದ ಪಂದ್ಯದ 9ನೇ ಓವರ್ ಎಸೆಯಲು ಬಂದ ಹಾರ್ದಿಕ್ ಪಾಂಡ್ಯ ಅವರು ಲಿಟನ್ ದಾಸ್ ಬಾರಿಸಿದ ಬೌಂಡರಿ ತಡೆಯುವ ಯತ್ನದಲ್ಲಿ ಸ್ಲಿಪ್ ಆಗಿ ಕೆಳಗೆ ಬಿದ್ದು ಪಾದದ ಗಾಯಕ್ಕೆ ತುತ್ತಾಗಿದ್ದರು. ಬಳಿಕ ನೋವಿನಿಂದಾಗಿ ಮೈದಾನ ತೊರೆದಿದ್ದರು. ಪಾಂಡ್ಯ ಅವರ ಉಳಿದ ಮೂರು ಎಸೆತಗಳನ್ನು ವಿರಾಟ್ ಕೊಹ್ಲಿ ಅವರು ಪೂರ್ಣಗೊಳಿಸಿದ್ದರು. ಗಾಯಗೊಂಡು ಮೈದಾನದಿಂದ ಹೊರ ನಡೆದ ಪಾಂಡ್ಯ ಸಂಪೂರ್ಣವಾಗಿ ಪಂದ್ಯದಿಂದ ಹೊರಗುಳಿದಿದ್ದರು. ಅವರ ಸ್ಥಾನದಲ್ಲಿ ಸೂರ್ಯಕುಮಾರ್​ ಅವರು ಬದಲಿ ಆಟಗಾರನಾಗಿ ಫೀಲ್ಡಿಂಗ್​ ನಡೆಸಿದ್ದರು. ಬಳಿಕ ಮೂರು ಪಂದ್ಯಗಳಿಂದ ಹೊರಗುಳಿದು ಚಿಕಿತ್ಸೆ ಪಡೆದರೂ ಗಾಯದಿಂದ ಚೇತರಿಕೆ ಕಾಣದ ಕಾರಣ ಅಂತಿಮವಾಗಿ ವಿಶ್ವಕಪ್‌ನಿಂದಲೇ ಹೊರಬಿದ್ದರು. ಅವರ ಸ್ಥಾನಕ್ಕೆ ಬದಲಿ ಆಟಗಾರನಾಗಿ ಕನ್ನಡಿಗ ಪ್ರಸಿದ್ಧ್​ ಕೃಷ್ಣ (prasidh krishna) ತಂಡ ಸೇರಿದ್ದರು.

ಟೀಂ ಇಂಡಿಯಾಗೆ ಪಾಂಡ್ಯ ಭಾವುಕ ಪತ್ರ
ಇನ್ನು ವಿಶ್ವಕಪ್ ಟೂರ್ನಿಯ ಐತಿಹಾಸಿಕ ಘಟ್ಟದಲ್ಲಿರುವ ಟೀಂ ಇಂಡಿಯಾಗೆ ಹಾರ್ದಿಕ್ ಪಾಂಡ್ಯ ಪತ್ರವೊಂದು ಬರೆದಿದ್ದು, ಟ್ವಿಟರ್ ನಲ್ಲಿ ಈ ಪತ್ರವನ್ನು ಪೋಸ್ಟ್ ಮಾಡಿದ್ದಾರೆ. “ವಿಶ್ವಕಪ್‌ನ ಉಳಿದ ಭಾಗವನ್ನು ನಾನು ಕಳೆದುಕೊಳ್ಳುತ್ತೇನೆ ಎಂಬ ವಿಚಾರವನ್ನು ಅರಗಿಸಿಕೊಳ್ಳಲು ಕಷ್ಟವಾಗುತ್ತಿದೆ. ಆದರೂ ನಾನು ನಮ್ಮ ತಂಡದೊಂದಿಗೆ ಇದ್ದು ಅವರನ್ನು ಹುರಿದುಂಬಿಸುತ್ತೇನೆ. ನನಗೆ ಬೆಂಬಲ ನೀಡಿದ್ದಕ್ಕೆ ಹಾಗೂ ನೀಡುತ್ತಿರುವುದಕ್ಕೆ ಧನ್ಯವಾದಗಳು. ನಮ್ಮ ತಂಡ ವಿಶ್ವಕಪ್ ಎತ್ತಿ ಹಿಡಿಯುತ್ತದೆ ಎಂಬ ವಿಶ್ವಾಸ ನನಗಿದೆ” ಎಂದು ಟ್ವಿಟರ್​ ನಲ್ಲಿ ಬರೆದಿದ್ದರು.

ವಿಶ್ವಕಪ್ ಬೆನ್ನಲ್ಲೇ ಆಸಿಸ್-ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ
ವಿಶ್ವಕಪ್‌ ಮುಗಿದ ತಕ್ಷಣ ಭಾರತ ತಂಡ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳ ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಈ ಸರಣಿ ನವೆಂಬರ್​ 22 ರಿಂದ ಡಿಸೆಂಬರ್​ 3 ತನಕ ನಡೆಯಲಿದೆ. ಮೊದಲ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯಲಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ ಡಿ.10ರಿಂದ ಟಿ20 ಸರಣಿ ಆರಂಭಗೊಳ್ಳಲಿದೆ. ಇದಾದ ಬಳಿಕ ಡಿ.17ರಿಂದ ಏಕದಿನ, ಡಿ.26ರಿಂದ ಟೆಸ್ಟ್​ ಸರಣಿ ನಡೆಯಲಿದೆ. ಜನವರಿ 3 ತನಕ ಈ ಸರಣಿ ಸಾಗಲಿದೆ. ವಿಶ್ವಕಪ್​ ಆಡಿದ ಹಲವು ಆಟಗಾರರಿಗೆ ಈ ಸರಣಿಗೆ ವಿಶ್ರಾಂತಿ ನೀಡುವ ಸಾಧ್ಯತೆಯೂ ಇದೆ. ಪ್ರಮುಖವಾಗಿ ರೋಹಿತ್ ಶರ್ಮಾ​, ವಿರಾಟ್ ಕೊಹ್ಲಿ, ಜಸ್ ಪ್ರೀತ್ ಬುಮ್ರಾ, ಶಮಿ, ರವೀಂದ್ರ ಜಡೇಜಾ ಅವರು ಈ ಸರಣಿಯಿಂದ ಹೊರಗುಳಿಯಬಹುದು. ಕೆ.ಎಲ್​ ರಾಹುಲ್​ ಅವರು ನಾಯಕತ್ವ ವಹಿಸುವ ಸಾಧ್ಯತೆ ಅಧಿಕವಾಗಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ