ಕ್ರಿಕೆಟ್

ಐಸಿಸಿ ವಿಶ್ವಕಪ್ ಫೈನಲ್: ಅಹಮಬಾದಾಬಾದ್ ಗೆ ಬಂದಿಳಿದ ಗಂಗೂಲಿ; ಧೋನಿ ಪಾಲ್ಗೊಳ್ಳುವ ಸಾಧ್ಯತೆ

Nagaraja AB

ಅಹಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಳೆ ನಡೆಯಲಿರುವ ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ವೀಕ್ಷಿಸಲು ಮಾಜಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಶನಿವಾರ ಅಹಮದಾಬಾದ್ ಗೆ ಬಂದಿಳಿದರು. ಇವರು 2003ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾದ ನಾಯಕತ್ವ ವಹಿಸಿದ್ದರು. ಆಗಲೂ ಭಾರತ ಫೈನಲ್ ಪ್ರವೇಶಿಸಿತ್ತು.

ವಿಶ್ವದ ಅತಿದೊಡ್ಡ ಕ್ರಿಡಾಂಗಣವಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಾಳೆ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಕೂಡಾ ಫೈನಲ್ ನಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಇವರ ನಾಯಕತ್ವದಲ್ಲಿ ಭಾರತ 2007ರಲ್ಲಿ ಟಿ-ಟ್ವೆಂಟಿ ವಿಶ್ವಕಪ್, 2011ರ ವಿಶ್ವಕಪ್ ಮತ್ತು 2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. 

'ಪ್ರಿನ್ಸ್ ಆಫ್ ಕಲ್ಕತ್ತಾ' ಎಂದು ಖ್ಯಾತಿ ಗಂಗೂಲಿ ಶನಿವಾರ ನಗರಕ್ಕೆ ಆಗಮಿಸಿದ ನಂತರ ಅಹಮದಾಬಾದ್ ವಿಮಾನ ನಿಲ್ದಾಣದಿಂದ ತಪಾಸಣೆಗೊಳಗಾಗುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದಿದೆ. 

SCROLL FOR NEXT