ಸಂಗ್ರಹ ಚಿತ್ರ 
ಕ್ರಿಕೆಟ್

World Cup 2023: ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾಗೆ 241 ರನ್ ಟಾರ್ಗೆಟ್ ನೀಡಿದ ಭಾರತ

ವಿಶ್ವಕಪ್ 2023ರ ಪಂದ್ಯಾವಳಿಯಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ನಿಗದಿತ ಓವರ್ ನಲ್ಲಿ 240 ರನ್ ಗಳಿಗೆ ಆಲೌಟ್ ಆಗಿದೆ.

ಅಹಮದಾಬಾದ್: ವಿಶ್ವಕಪ್ 2023ರ ಪಂದ್ಯಾವಳಿಯಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ನಿಗದಿತ ಓವರ್ ನಲ್ಲಿ 240 ರನ್ ಗಳಿಗೆ ಆಲೌಟ್ ಆಗಿದೆ.

ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ಆರಂಭ ಉತ್ತವಾಗಿದ್ದರೂ ನಂತರ ಬ್ಯಾಕ್ ಟು ಬ್ಯಾಕ್ ವಿಕೆಟ್ ಬಿದ್ದಿದ್ದರಿಂದ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಆಸರೆಯಾದರು. ಈ ಇಬ್ಬರು ಆಟಗಾರರು ಅರ್ಧ ಶತಕ ಸಿಡಿಸಿ ಔಟಾದರು.

ಭಾರತ ಪರ ರೋಹಿತ್ ಶರ್ಮಾ 47 ರನ್ ಗಳಿಸಿ ಔಟಾದರೆ, ಶುಭ್ಮನ್ ಗಿಲ್ 4 ರನ್ ಗಳಿಗೆ ಔಟಾದರು. ಇನ್ನು ಶ್ರೇಯಸ್ ಅಯ್ಯರ್ 4 ರನ್ ಗಳಿಸಿ ಪೆವಿಲಿಯನ್ ಸೇರಿದರು. ನಂತರ ವಿರಾಟ್ ಕೊಹ್ಲಿ 54 ರನ್ ಸಿಡಿಸಿ ಔಟಾದರೆ ಕೆಎಲ್ ರಾಹುಲ್ 66 ರನ್ ಗೆ ಔಟಾದರು. ಬಳಿಕ ಬಂದ ರವೀಂದ್ರ ಜಡೇಜಾ 9 ರನ್ ಬಾರಿಸಿ ಹೆಜಲ್ವುಡ್ ಎಸೆತದಲ್ಲಿ ಕೀಪರ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. 

ನಂತರ ತಾಳ್ಮೆಯಿಂದ ಬ್ಯಾಟಿಂಗ್ ಮಾಡಿದ ಸೂರ್ಯಕುಮಾರ್ ಯಾದವ್ 18 ರನ್ ಗಳಿಸಿ ಔಟಾದರೆ, ಶಮಿ 6, ಜಸ್ ಪ್ರೀತ್ ಬುಮ್ರಾ 1 ಮತ್ತು ಕುಲದೀಪ್ ಯಾದವ್ 10 ರನ್ ಗಳಿಸಿ ಔಟಾದರು. ಇನ್ನು ಮೊಹಮ್ಮದ್ ಸಿರಾಜ್ 9 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದಾರೆ.

ಆಸ್ಟ್ರೇಲಿಯಾ ಪರ ಬೌಲಿಂಗ್ ನಲ್ಲಿ ಮಿಚೆಲ್ ಸ್ಟಾರ್ಕ್ 3, ಪ್ಯಾಟ್ ಕಮಿನ್ಸ್ ಮತ್ತು ಹೆಜಲ್ವುಡ್ ತಲಾ 2 ವಿಕೆಟ್, ಗ್ಲೇನ್ ಮ್ಯಾಕ್ಸ್ ವೇಲ್ ಮತ್ತ ಜಂಪಾ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!