ಉತ್ತರ ಪ್ರದೇಶ: ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಗೆದ್ದು ಬರಲಿ ಎಂದು ಹಾರೈಸಿ ದೇಶಾದ್ಯಂತ ವಿಶೇಷ ಪೂಜೆ, ಹೋಮ, ಹವನ ಕಾರ್ಯಗಳು ನಡೆಯುತ್ತಿವೆ.
ಉತ್ತರ ಪ್ರದೇಶದ ವಾರಾಣಸಿಯಲ್ಲಿ ಅಭಿಮಾನಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ತ್ರಿವರ್ಣ ಧ್ವಜದೊಂದಿಗೆ ಭಾರತದ 11 ಮಂದಿ ಆಟಗಾರರ ಫೋಟೋಗಳನ್ನು ನದಿ ಬಳಿಯಲ್ಲಿ ಹಿಡಿದುಕೊಂಡು ಫೈನಲ್ ನಲ್ಲಿ ಭಾರತ ತಂಡ ಗೆದ್ದು ಬರಲಿ ಎಂದು ವಿಶೇಷ ಪೂಜೆ ಸಲ್ಲಿಸಲಾಯಿತು.
ಇದನ್ನೂ ಓದಿ: ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಆರಂಭಕ್ಕೆ ಕ್ಷಣಗಣನೆ: ಕ್ರಿಕೆಟ್ ಪ್ರೇಮಿಗಳಲ್ಲಿ ಹೆಚ್ಚಿದ ಕಾತರ, ಉತ್ಸಾಹ
ಮಹಾರಾಷ್ಟ್ರದ ಪುಣೆಯಲ್ಲಿರುವ ಶ್ರೀ ಸಿದ್ಧಿವಿನಾಯಕ ದೇವಾಲಯದಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ಭಾರತ ಗೆಲುವಿಗಾಗಿ ಪ್ರಾರ್ಥಿಸಿ ವಿಶೇಷ ಆರತಿ ಬೆಳಗಲಾಯಿತು.