ರೋಹಿತ್ ಶರ್ಮಾ ಮತ್ತು ಪ್ಯಾಟ್ ಕಮಿನ್ಸ್ 
ಕ್ರಿಕೆಟ್

World Cup 2023 Final; IND vs AUS: ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ!

ಇಂದು ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ ಫೈನಲ್‌ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಟಾಸ್ ಸೋತರು ಟೀಂ ಇಂಡಿಯಾ ಬ್ಯಾಟಿಂಗ್ ಮಾಡಲಿದೆ. 

ಅಹಮದಾಬಾದ್: ಇಂದು ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ ಫೈನಲ್‌ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಟಾಸ್ ಸೋತರು ಟೀಂ ಇಂಡಿಯಾ ಬ್ಯಾಟಿಂಗ್ ಮಾಡಲಿದೆ. 

ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ, ಇಂದು ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿವೆ. ಉಭಯ ತಂಡಗಳು ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವ ತವಕದಲ್ಲಿವೆ.

ಟೀಂ ಇಂಡಿಯಾ ಐದು ಬಾರಿ ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾವನ್ನು ಎದುರಿಸುತ್ತಿದೆ. ನಾಯಕ ರೋಹಿತ್ ಶರ್ಮಾ ತಮ್ಮ ನೇತೃತ್ವದಲ್ಲಿ ಭಾರತಕ್ಕೆ ಪ್ರಶಸ್ತಿ ಗೆದ್ದು ತರುವ ತವಕದಲ್ಲಿದ್ದಾರೆ. ಫೈನಲ್ ಪಂದ್ಯದಲ್ಲಿ ನಾಲ್ಕನೇ ಬಾರಿ ಭಾರತ ತಂಡ ಆಡುತ್ತಿದ್ದು, ಆಸಿಸ್ ಪಡೆ ಆರನೇ ಬಾರಿಗೆ ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲು ಆಡುತ್ತಿದೆ.

ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಟೀಂ ಇಂಡಿಯಾ

2023ರ ಏಕದಿನ ವಿಶ್ವಕಪ್ ಮೊದಲನೇ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ ಫೈನಲ್ ಪ್ರವೇಶಿಸಿತು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಶತಕದ ನೆರವಿನಿಂದ 397 ರನ್ ಕಲೆಹಾಕಿತ್ತು. ಭಾರತ ನೀಡಿದ 398 ರನ್‌ಗಳ ಬೃಹತ್ ಮೊತ್ತ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ 327 ರನ್‌ಗಳಿಗೆ ಆಲೌಟ್ ಆಯಿತು.

ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯ

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಕಾಂಗರೂ ಪಡೆ ದಕ್ಷಿಣ ಆಫ್ರಿಕಾವನ್ನು 3 ವಿಕೆಟ್‌ ಅಂತರದಿಂದ ಸೋಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 49.4 ಓವರ್ ಗಳಲ್ಲಿ 212 ರನ್ ಗಳಿಸಲಷ್ಟೇ ಶಕ್ತವಾಯಿತುಯ. ಆಸ್ಟ್ರೇಲಿಯಕ್ಕೆ ಗೆಲ್ಲಲು 213 ರನ್‌ಗಳ ಗುರಿ ನೀಡಿತ್ತು. ದಕ್ಷಿಣ ಆಫ್ರಿಕಾ ನೀಡಿದ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ 47.2 ಓವರ್‌ಗಳಲ್ಲಿ 215 ರನ್ ಗಳಿಸಿ ಜಯ ಸಾಧಿಸಿ ಫೈನಲ್‌ಗೆ ಲಗ್ಗೆ ಇಟ್ಟಿತು.

ಕ್ರೀಡಾಂಗಣದ ಪಿಚ್‌ ಕಷ್ಟಕರವಾಗಿದ್ದು, ಬ್ಯಾಟರ್‌ಗಳಿಗೆ ಹೆಚ್ಚು ಅನುಕೂಲಕರವಾಗಿದೆ. ಪಂದ್ಯದ ಆರಂಭಿಕ ಓವರ್‌ಗಳು ಬೌಲರ್‌ಗಳಿಗೆ ಸಹಕಾರಿಯಾಗಿದ್ದು, ಬ್ಯಾಟರ್‌ಗಳು ಎಚ್ಚರಿಕೆಯಿಂದ ಆಡಬೇಕಾಗಿದೆ. ಆರಂಭದಲ್ಲಿ ಪಿಚ್ ವೇಗದ ಬೌಲರ್‌ಗಳಿಗೆ ಸಹಾಯ ಮಾಡುತ್ತದೆ. ನಂತರ, ಸ್ಪಿನ್ನರ್‌ಗಳಿಗೆ ನೆರವಾಗುವ ಸಾಧ್ಯತೆಯಿದೆ.

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು 150 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಮೆನ್ ಇನ್ ಬ್ಲೂ ತಂಡ 57 ಬಾರಿ ಗೆದ್ದಿದ್ದರೆ, ಆಸ್ಟ್ರೇಲಿಯಾ 83 ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದೆ. ಇನ್ನುಳಿದ 10 ಪಂದ್ಯಗಳಲ್ಲಿ ಫಲಿತಾಂಶ ಲಭ್ಯವಾಗಿಲ್ಲ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈವರೆಗೂ ಒಟ್ಟು 32 ಏಕದಿನ ಪಂದ್ಯಗಳು ನಡೆದಿವೆ. ಇದರಲ್ಲಿ 17 ಬಾರಿ ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು ಗೆದ್ದಿದ್ದರೆ, 15 ಬಾರಿ ಚೇಸ್ ಮಾಡಿದ ತಂಡಗಳು ಗೆಲುವು ಸಾಧಿಸಿವೆ.

ಉಭಯ ತಂಡಗಳ ಆಡುವ ಬಳಗ

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್

ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (‍ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ, ಜೋಶ್ ಹೇಜಲ್‌ವುಡ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT