ಭಾರತೀಯ ಕ್ರಿಕೆಟ್‌ನಲ್ಲಿ ಮೀಸಲಾತಿ ಅಗತ್ಯವಿದೆ: ನಟ ಚೇತನ್ ಅಹಿಂಸಾ
ಆಗಾಗ್ಗೆ ತಮ್ಮ ಸೈದ್ದಾಂತಿಕ, ಸಾಮಾಜಿಕ ಹೇಳಿಕೆಗಳಿಂದ ಸುದ್ದಿ ಹಾಗೂ ವಿವಾದಕ್ಕೊಳಗಾಗುವ ನಟ ಚೇತನ್ ಅಹಿಂಸಾ ಇದೀಗ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲಿಗೂ ಕಾರಣ ತಿಳಿಸಿದ್ದಾರೆ.
ಬೆಂಗಳೂರು: ಆಗಾಗ್ಗೆ ತಮ್ಮ ಸೈದ್ದಾಂತಿಕ, ಸಾಮಾಜಿಕ ಹೇಳಿಕೆಗಳಿಂದ ಸುದ್ದಿ ಹಾಗೂ ವಿವಾದಕ್ಕೊಳಗಾಗುವ ನಟ ಚೇತನ್ ಅಹಿಂಸಾ ಇದೀಗ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲಿಗೂ ಕಾರಣ
ತಿಳಿಸಿದ್ದಾರೆ.
ಭಾರತೀಯ ಕ್ರಿಕೆಟ್ ನಲ್ಲಿ ಮೀಸಲಾತಿ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಚೇತನ್, ನಾನು ಮತ್ತೆ ಹೇಳುತಿದ್ದೇನೆ, ಭಾರತಕ್ಕೆ ಕ್ರಿಕೆಟ್‌ನಲ್ಲಿ ಮೀಸಲಾತಿ ಅಗತ್ಯವಿದೆ. ಭಾರತಕ್ಕೆ ಕ್ರಿಕೆಟ್‌ನಲ್ಲಿ ಮೀಸಲಾತಿ ಇದ್ದಿದ್ದರೆ ಭಾರತ ಸುಲಭವಾಗಿ ಈ ವಿಶ್ವ ಕಪ್ಪನ್ನು ಗೆಲ್ಲುತ್ತಿತ್ತು ಎಂದಿದ್ದಾರೆ.
ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ 7ವಿಕೆಟ್ ಗಳ ಹೀನಾಯ ಸೋಲು ಕಂಡಿತ್ತು. 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿತು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.