ಕ್ರಿಕೆಟ್

2ನೇ ಟಿ20: ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ, ಆಸಿಸ್ ಬಳಗದಲ್ಲಿ 2 ಬದಲಾವಣೆ

Srinivasamurthy VN

ತಿರುವನಂತಪುರ: ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿದೆ.

ತಿರುವನಂತಪುರದ ಗ್ರೀನ್ ಫೀಲ್ಡ್ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡದ ನಾಯಕ ಮ್ಯಾಥ್ಯೂ ವೇಡ್​ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಇದರೊಂದಿಗೆ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡ ಮೊದಲು ಬ್ಯಾಟ್​ ಮಾಡಬೇಕಾಗಿದೆ. ಈಗಾಗಲೇ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಪಂದ್ಯವನ್ನು ಗೆದ್ದಿರುವ ಭಾರತ ತಂಡ 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಇನ್ನು ಈ ಪಂದ್ಯಕ್ಕೆ ಭಾರತ ತಂಡ ಮೊದಲ ಪಂದ್ಯದಲ್ಲಿದ್ದ ತಂಡವನ್ನೇ ಕಣಕ್ಕಿಳಿಸಲು ನಿರ್ಧರಿಸಿದ್ದು, ಆಸ್ಟ್ರೇಲಿಯಾ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ. ಬೆಹ್ರೆನ್​ಡಾರ್ಫ್​ ಬದಲಿಗೆ ಆಡಮ್ ಜಂಪಾ ಮತ್ತು ಆರೋನ್ ಹಾರ್ಡಿ ಬದಲಿಗೆ ಗ್ಲೆನ್​ ಮ್ಯಾಕ್ಸ್​ವೆಲ್​ ಸ್ಥಾನ ಪಡೆದಿದ್ದಾರೆ ಎಂದು ನಾಯತ ವೇಡ್ ಹೇಳಿದರು.

ತಂಡಗಳು ಇಂತಿವೆ
ಭಾರತ ತಂಡ: 

ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆ), ಸೂರ್ಯಕುಮಾರ್ ಯಾದವ್ (ಸಿ), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಷ್ದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ.

ಆಸ್ಟ್ರೇಲಿಯಾ ತಂಡ: 
ಸ್ಟೀವನ್ ಸ್ಮಿತ್, ಮ್ಯಾಥ್ಯೂ ಶಾರ್ಟ್, ಜೋಶ್ ಇಂಗ್ಲಿಸ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಗ್ಲೆನ್ ಮ್ಯಾಕ್ಸ್ವೆಲ್, ಮ್ಯಾಥ್ಯೂ ವೇಡ್ (ಸಿ & ವಿಕೆ), ಸೀನ್ ಅಬಾಟ್, ನಾಥನ್ ಎಲ್ಲಿಸ್, ಆಡಮ್ ಜಂಪಾ, ತನ್ವೀರ್ ಸಂಘಾ.
 

SCROLL FOR NEXT