ಕ್ರಿಕೆಟ್

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ: ಟಿ20ಗೆ ಸೂರ್ಯಕುಮಾರ್, ಒಡಿಐಗೆ ರಾಹುಲ್ ನಾಯಕ

Lingaraj Badiger

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ದಕ್ಷಿಣ ಆಫ್ರಿಕಾ ವಿರುದ್ಧದ ಟಿ20, ಏಕದಿನ ಹಾಗೂ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಗುರುವಾರ ಪ್ರಕಟಿಸಿದೆ. 

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ತಂಡ 2 ಪಂದ್ಯಗಳ ಟೆಸ್ಟ್‌ ಕ್ರಿಕೆಟ್‌, ತಲಾ ಮೂರು ಪಂದ್ಯಗಳ ಟಿ20 ಮತ್ತು ಒಡಿಐ ಸರಣಿಗಳನ್ನು ಆಡಲಿದೆ.

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಭಾರತ ತಂಡದ ನಾಯಕರಾಗಿರುವ ಸೂರ್ಯಕುಮಾರ್ ಯಾದವ್, ಡಿಸೆಂಬರ್ 10 ರಂದು ಡರ್ಬನ್‌ನಲ್ಲಿ ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೂ ನಾಯಕರಾಗಿ ಆಯ್ಕೆಯಾಗಿದ್ದಾರೆ. 

ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ODI ಸರಣಿಗೆ KL ರಾಹುಲ್ ನಾಯಕರಾಗಿದ್ದಾರೆ.

ಟೆಸ್ಟ್‌ ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್‌ಕೀಪರ್‌), ಕೆಎಲ್ ರಾಹುಲ್ (ವಿಕೆಟ್‌ಕೀಪರ್‌), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದುಲ್ ಠಾಕೂರ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ, ಜಸ್‌ಪ್ರೀತ್‌ ಬುಮ್ರಾ (ಉಪನಾಯಕ), ಪ್ರಸಿಧ್ ಕೃಷ್ಣ.

ಒಡಿಐ ಸರಣಿಗೆ ಭಾರತ ತಂಡ
ಕೆಎಲ್ ರಾಹುಲ್ (ನಾಯಕ/ ವಿಕೆಟ್‌ಕೀಪರ್‌), ಋತುರಾಜ್ ಗಾಯಕ್ವಾಡ್, ಸಾಯ್ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್‌), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ದೀಪಕ್ ಚಹರ್.

ಟಿ20 ಕ್ರಿಕೆಟ್‌ ಸರಣಿಗೆ ಭಾರತ ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್‌ಕೀಪರ್‌), ಜಿತೇಶ್ ಶರ್ಮಾ (ವಿಕೆಟ್‌ಕೀಪರ್‌), ರವೀಂದ್ರ ಜಡೇಜಾ (ಉಪನಾಯಕ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್.

SCROLL FOR NEXT