ಚೆನ್ನೈ: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ಮೂಲಕ ಭಾರತ ತಂಡ ಐಸಿಸಿ ಕ್ರಿಕೆಟ್ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಿದ್ದು, ಮೊದಲ ಪಂದ್ಯದಲ್ಲೇ ಭಾರತ ವಿರಾಟ್ ಕೊಹ್ಲಿ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
ಹೌದು.. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಐದನೇ ಹಾಗೂ ತಮ್ಮ ಆರಂಭಿಕ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಾಡುತ್ತಿವೆ. ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.